ಮೂಡುಬಿದಿರೆ: ಟಿಪ್ಪರ್ ಚಲಾಯಿಸಿ ಚಾಲಕನಿಂದ ವ್ಯಕ್ತಿಯ ಕೊಲೆ
ಧೂಳು ಬರುತ್ತದೆ ನಿಧಾನವಾಗಿ ಹೋಗೆಂದಕ್ಕೆ ರಾಡ್ ನಿಂದ ಹಲ್ಲೆ...!
Team Udayavani, Feb 3, 2023, 9:42 PM IST
ಮೂಡುಬಿದಿರೆ:ಧೂಳು ಬರುವ ಹಾಗೆ ವಾಹನವನ್ನು ಚಲಾಯಿಸಬೇಡ ನಿಧಾನವಾಗಿ ಹೋಗೆಂದು ಹೇಳಿದ ವ್ಯಕ್ತಿಗೆ ಟಿಪ್ಪರ್ ಚಾಲಕ ರಾಡ್ ನಿಂದ ಹೊಡೆದು, ಟಿಪ್ಪರ್ ಚಲಾಯಿಸಿ ಕೊಲೆ ನಡೆಸಿದ್ದು, ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಟೆಬಾಗಿಲಿನ ನಿವಾಸಿ ಫಯಾಝ್ (61) ಹತ್ಯೆಗೀಡಾದ ವ್ಯಕ್ತಿ. ಪಯಾಜ್ ಶುಕ್ರವಾರ ಕೋಟೆಬಾಗಿಲು ಮಸೀದಿಗೆ ನಮಾಝ್‌ಗೆ ತೆರಳುವ ಸಂಧರ್ಭ ಕೋಟೆಬಾಗಿಲು ನಿವಾಸಿ, ಟಿಪ್ಪರ್ ಚಾಲಕ ಹಾರೀಸ್ ಎಂಬಾತ ಅತೀ ವೇಗದಿಂದ ಟಿಪ್ಪರ್ ಚಲಾಯಿಸಿಕೊಂಡು ಹೋಗಿದ್ದಾನೆ. ಆಗ ಅಲ್ಲೇ ನಡೆದುಕೊಂಡು ಹೋಗುತ್ತಿದ್ದ ಫಯಾಝ್ ಅವರ ಮೇಲೆ ಧೂಳನ್ನು ಹಾರಿಸಿದ್ದಾನೆ.
ಕೋಪಗೊಂಡ ಫಯಾಝ್ ಅವರು ನಿಧಾನ ಹೋಗುವಂತೆ ಹೇಳಿದ್ದು, ಈ ಸಂದರ್ಭ ಇಬ್ಬರ ಮದ್ಯೆ ಮಾತಿನ ಚಕಾಮಕಿ ನಡೆದಿದೆ. ನಮಾಝ್ ಮುಗಿಸಿಕೊಂಡು ಹಿಂತಿರುವ ಸಂದರ್ಭದಲ್ಲಿಯೂ ಇವರಿಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದಿದ್ದು, ಈ ಸಂಧರ್ಭ ಫಯಾಝ್ ಅವರು ಟಿಪ್ಪರ್‌ನ ಮೆಟ್ಟಿಲು ಮೇಲೆ ಹೋಗಿ ಮಾತನಾಡಿದ್ದು ಆಗ ಹಾರೀಸ್ ಮಾರಾಕಾಸ್ತ್ರದಿಂದ ತಲೆ ಭಾಗಕ್ಕೆ ಹೊಡೆದು ಟಿಪ್ಪರನ್ನು ಸ್ಟಾರ್ಟ್ ಮಾಡಿ ಮುಂದಕ್ಕೆ ಚಲಾಯಿಸಿದ್ದಾನೆ.
ಆಯತಪ್ಪಿ ಫಯಾಝ್ ಅವರು ರಸ್ತೆಗೆ ಬಿದ್ದಿದ್ದಾರೆ. ಬಿದ್ದ ಅವರ ಮೇಲೆಯೇ ಟಿಪ್ಪರನ್ನು ಹಾಯಿಸಿದ್ದಾನೆ. ರಾಡ್‌ನ ಏಟು ಮತ್ತು ಟಿಪ್ಪರ್‌ನ ಅಡಿಗೆ ಬಿದ್ದ ಫಯಾಝ್ ಅವರನ್ನು ಸಾರ್ವಜನಿಕರು ಆಸ್ಪತ್ರೆಗೆ ಸಾಗಿಸುವ ಸಂದರ್ಭ ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸೋನು ನಿಗಮ್ ತಂದೆ ಮನೆಯಲ್ಲಿ 72 ಲಕ್ಷ ರೂ. ಕಳ್ಳತನ: ಮಾಜಿ ಚಾಲಕನ ವಿರುದ್ಧ FIR
ನಾಳೆ ರಾಜ್ಯ ಸರಕಾರದಿಂದ ಪಂಚಮಸಾಲಿ ಸಮುದಾಯಕ್ಕೆ ಕೊಡುಗೆ: ವಚನಾನಂದ ಸ್ವಾಮೀಜಿ ವಿಶ್ವಾಸ
ನುಗ್ಗೆ ಆರೋಗ್ಯಕ್ಕೆ ಮಾತ್ರವಲ್ಲ ಸೌಂದರ್ಯಕ್ಕೂ ಉತ್ತಮ…
ಸುರಕ್ಷಿತ ಕ್ಷೇತ್ರ ಹಿಡಿದುಕೊಂಡು ಒಂದೇ ಕಡೆ ಗೂಟ ಹೊಡೆದುಕೊಂಡು ಕೂತಿಲ್ಲ: ಆಯನೂರು
ಮಣಿಪಾಲ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಆರೋಪ; ಐವರು ವಿದ್ಯಾರ್ಥಿಗಳು ವಶಕ್ಕೆ