ಶಾಲೆ ಮುಚ್ಚುವ ಭೀತಿ: ಹೆತ್ತವರು, ವಿದ್ಯಾರ್ಥಿಗಳ ಆತಂಕ

ಮುಳ್ಳುಗುಡ್ಡೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ

Team Udayavani, Nov 23, 2021, 5:00 AM IST

ಶಾಲೆ ಮುಚ್ಚುವ ಭೀತಿ: ಹೆತ್ತವರು, ವಿದ್ಯಾರ್ಥಿಗಳ ಆತಂಕ

ಹೆಬ್ರಿ: ಸುಮಾರು 68 ವರ್ಷ ಇತಿಹಾಸ ವಿರುವ ಹೆಬ್ರಿ ತಾಲೂಕಿನ ಶಿವಪುರ ಗ್ರಾಮದ ಮುಳ್ಳುಗುಡ್ಡೆ ಅನುದಾನಿತ ಹಿ.ಪ್ರಾ. ಶಾಲೆಯ ಮಾನ್ಯತೆ ನವೀಕರಣಗೊಳ್ಳದ ಕಾರಣ ಮುಚ್ಚುವ ಭೀತಿಯಲ್ಲಿದ್ದು ವಿದ್ಯಾರ್ಥಿಗಳು, ಹೆತ್ತ ವರು ಆತಂಕಕ್ಕೊಳಗಾಗಿದ್ದಾರೆ.

ಮಾನ್ಯತೆ ನವೀಕರಿಸಿಲ್ಲ
ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಲಿಯುತ್ತಿರುವ ಈ ಶಾಲೆಯ ಮಾನ್ಯತೆ ನವೀಕರಣ ವಾಯಿದೆಯು 2020ಕ್ಕೆ ಮುಗಿದಿದ್ದು ಈ ಬಗ್ಗೆ ಕ್ಷೇತ್ರ ಶಿಕ್ಷಣಾ ಧಿಕಾರಿಗೆ ಜನವರಿಯಲ್ಲಿ ಅರ್ಜಿಯನ್ನು ಸಲ್ಲಿಸ ಲಾಗಿತ್ತು. ಆದರೆ ಸಮಿತಿಯಲ್ಲಿ ಗೊಂದಲವಿರುವ ಕಾರಣ ನವೀಕರಣವಾಗಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿದೆ. ಈ ಬಗ್ಗೆ ಆಡಳಿತ ಮಂಡಳಿಯ ಅಧ್ಯಕ್ಷ ಮೋಹನದಾಸ ನಾಯಕ್‌ ಸರಕಾರಕ್ಕೆ ಮನವಿ ಸಲ್ಲಿಸಿ ಮಕ್ಕಳ ಭವಿಷ್ಯಕ್ಕೆ ಯಾವುದೇ ತೊಂದರೆಯಾಗ ದಂತೆ ವಿನಂತಿಸಿದ್ದಾರೆ. ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಮುಖ್ಯ ಮಂತ್ರಿಗಳು ಈ ಬಗ್ಗೆ ಸಂಬಂಧಪಟ್ಟ ಇಲಾಖೆಯಲ್ಲಿ, ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಶಾಲೆಯನ್ನು ಉಳಿಸುವ, ಮಾನ್ಯತೆ ನವೀಕರಿಸುವ ಅಥವಾ ಸರಕಾರವೇ ಮುನ್ನಡೆಸುವ ಬಗ್ಗೆ ತೀರ್ಮಾನ ತೆಗೆದು ಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ದಾನಿಗಳ ನೆರವಿನಿಂದ ಶಾಲೆ ಅಭಿವೃದ್ಧಿ
1953ನೇ ಇಸವಿಯಲ್ಲಿ ಊರಿನ ಪಟೇಲರು ಮತ್ತು ಶಾನುಭೋಗರ ಸಹಕಾರದಲ್ಲಿ ಶಾಲೆ ಪ್ರಾರಂಭವಾಗಿತ್ತು.ಶಾಲೆಗೆ ಹೆಬ್ರಿ ಸಿಟಿ ಲಯನ್ಸ್‌ ಕ್ಲಬ್‌ ಸೇರಿದಂತೆ ವಿವಿಧ ಸಂಘ ಸಂಸ್ಥೆ ದಾನಿಗಳಿಂದ ಕಂಪ್ಯೂಟರ್‌, ಪುಸ್ತಕ ಭಂಡಾರ, ಪೀಠೊಪಕರಣಗಳು ಕೊಡುಗೆಯಾಗಿ ಬಂದಿದೆ. ಶಾಸಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಸಹಕಾರದಿಂದ ಶಾಲೆ ಅಭಿವೃದ್ಧಿಯನ್ನು ಕಂಡಿದೆ. ಶಾಲೆಯಲ್ಲಿ ಅತಿಥಿ ಶಿಕ್ಷಕರ ನೇಮಕ ಮಾಡಿದ್ದು, ಆಡಳಿತ ಮಂಡಳಿಯ ಅಧ್ಯಕ್ಷ ಮೋಹನ್‌ದಾಸ್‌ ನಾಯಕ್‌ ಅವರು ದಾನಿಗಳ ನೆರವಿನೊಂದಿಗೆ ವೇತನ ನೀಡುತ್ತಿದ್ದಾರೆ.

ಇದನ್ನೂ ಓದಿ:ವಿಜಯಪುರ: ಪಕ್ಷೇತರ ಸ್ಪರ್ಧೆಯ ಭೀತಿ; ಸುನಿಲ ಗೌಡಗೆ ಕಾಂಗ್ರೆಸ್ ಟಿಕೇಟ್

ಗೊಂದಲದಲ್ಲಿ ಹೆತ್ತವರು
ಗ್ರಾಮೀಣ ಪ್ರದೇಶವಾದ ಮುಳ್ಳುಗುಡ್ಡೆ ಶಾಲೆಯಲ್ಲಿ ಉತ್ತಮ ಶಿಕ್ಷಣ ನೀಡಲಾಗುತ್ತದೆ. ಸುತ್ತಮುತ್ತಲಿನ ಶಾಲೆಗಳಿಗೆ ಹೋಲಿಸಿದರೆ ಇಲ್ಲಿ ಮಕ್ಕಳ ಸಂಖ್ಯೆ ಜಾಸ್ತಿ ಇದೆ. ಆದರೆ ಮಾನ್ಯತೆ ನವೀಕರಣವಾಗದೆ ಇರುವುದರಿಂದ ಶಾಲೆಯನ್ನು ಮುಚ್ಚಿದರೆ ಮಕ್ಕಳ ಭವಿಷ್ಯ ಏನು ಎಂಬ ಗೊಂದಲದಲ್ಲಿ ಹೆತ್ತ ವರಿದ್ದು ಕೆಲವರು ಹತ್ತಿರ ಶಾಲೆಗಳಿಗೆ ಮಕ್ಕಳನ್ನು ಸೇರ್ಪಡೆ ಮಾಡಿದ್ದಾರೆ. ಶಾಲೆಯಲ್ಲಿ ಕೇವಲ ಓರ್ವ ಶಿಕ್ಷಕಿ ಪೂರ್ಣಕಾಲಿಕವಾಗಿದ್ದು ಅವರು ಕೂಡ ನಿವೃತ್ತಿಯ ಹಂತದಲ್ಲಿದ್ದು ಹೆತ್ತವರ ಆತಂಕಕ್ಕೆ ಕಾರಣವಾಗಿದೆ.

ಸರಕಾರವೇ ಶಾಲೆ ನಡೆಸಲಿ
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳೇ ಹೆಚ್ಚಾಗಿರುವ ಶಾಲೆಯ ಕಟ್ಟಡ ಸರಕಾರ ಹಾಗೂ ಖಾಸಗಿ ಸ್ಥಳದಲ್ಲಿದೆ. ಒಂದು ವೇಳೆ ಸರಕಾರವೇ ಸುಪರ್ದಿಗೆ ತೆಗೆದುಕೊಂಡು ಶಾಲೆ ನಡೆಸುವುದಾದರೆ ಸಮಿತಿಯು ಎಲ್ಲ ಸಹಕಾರವನ್ನು ನೀಡುವುದಾಗಿ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ಮೋಹನ್‌ದಾಸ್‌ ನಾಯಕ್‌ ತಿಳಿಸಿದ್ದಾರೆ.

ಶೀಘ್ರ ಕ್ರಮ
ಮುಳ್ಳುಗುಡ್ಡೆ ಅನುದಾನಿತ ಶಾಲೆಯ ಮಾನ್ಯತೆ ನವೀಕರಣವಾಗದಿರಲು ಏನು ಕಾರಣ ಎಂಬ ಬಗ್ಗೆ ವಿವರವಾದ ಮಾಹಿತಿಯನ್ನು ನೀಡುವಂತೆ ಈಗಾಗಲೇ ಅಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿಗೆ ಸೂಚನೆ ನೀಡಲಾಗಿದೆ. ಹೆತ್ತವ‌ರು ಹಾಗೂ ವಿದ್ಯಾರ್ಥಿಗಳು ಭಯಪಡುವ ಅಗತ್ಯವಿಲ್ಲ. ವರದಿ ಗಮನಿಸಿ ಸಮಸ್ಯೆ ಬಗೆಹರಿಸಲಾಗುವುದು.
-ಎನ್‌.ಎಚ್‌.ನಾಗೂರ, ಡಿಡಿಐಪಿ, ಉಡುಪಿ

ಉಳಿವಿಗಾಗಿ ಹೋರಾಟ
ಹಲವಾರು ವರ್ಷಗಳ ಇತಿಹಾಸವಿರುವ ಗ್ರಾಮೀಣ ಪ್ರದೇಶದ ಶಾಲೆ ಉಳಿಯಬೇಕು.ಬಡಮಕ್ಕಳಿಗೆ ಯಾವುದೇ ಸಮಸ್ಯೆಯಾಗಬಾರದು ಎಂಬ ಉದ್ದೇಶದಿಂದ ಶಾಲೆ‌ಯ ಉಳಿವಿಗಾಗಿ ಹೋರಾಟ ನಡೆದಿದೆ. ಈ ಬಗ್ಗೆ ಸರಕಾರ, ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಇಲಾಖೆ ಯಾವುದೇ ಸಮಸ್ಯೆ ಇದ್ದರೂ ಬಗೆಹರಿಸಿ ಮಕ್ಕಳ ಭವಿಷ್ಯದ ರಕ್ಷಣೆ ಮಾಡಬೇಕು.
ಮೋಹನದಾಸ ನಾಯಕ್‌
ಅಧ್ಯಕ್ಷರು,ಮುಳ್ಳುಗುಡ್ಡೆ ಶಾಲಾ ಆಡಳಿತ ಪರಿಷತ್‌

– ಹೆಬ್ರಿ ಉದಯಕುಮಾರ್‌ ಶೆಟ್ಟಿ

ಟಾಪ್ ನ್ಯೂಸ್

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.