
ಮೂಲ ಕಾಂಗ್ರೆಸ್ಸಿಗರ ಕಾಯೋದೇ ನನ್ನ ಕೆಲಸ: ವೀರಪ್ಪ ಮೊಯ್ಲಿ
Team Udayavani, Feb 4, 2023, 10:28 PM IST

ಮೈಸೂರು: ಕಾಂಗ್ರೆಸ್‌ನಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು ಮೂಲ ಕಾಂಗ್ರೆಸ್ಸಿಗರನ್ನು ಕಾಯುವುದೇ ನನ್ನ ಕೆಲಸ ಎಂದು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಹೇಳಿದರು.
ಮಾಜಿ ಶಾಸಕ ವಾಸು ಅವರ ನಿವಾಸಕ್ಕೆ ಶನಿ ವಾರ ಭೇಟಿ ನೀಡಿ ಔಪಚಾರಿಕ ಸಮಾಲೋಚನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಶಾಸಕ ವಾಸು ಅವರಿಗೆ ಚಾಮರಾಜ ಕ್ಷೇತ್ರದಲ್ಲಿ ಟಿಕೆಟ್ ಖಚಿತ, ಅವರಿಗೆ ಟಿಕೆಟ್ ತಪ್ಪಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ನಾನು ಮತ್ತು ಮಾಜಿ ಶಾಸಕ ವಾಸು ಮೂಲ ಕಾಂಗ್ರೆಸ್ಸಿಗರು. ಯಾರಿಗೂ ಯಾರ ಟಿಕೆಟ್ ತಪ್ಪಿಸಲು ಸಾಧ್ಯವಿಲ್ಲ. ವಾಸು ಚಾಮ ರಾಜ ಕ್ಷೇತ್ರಕ್ಕೆ ಬಲಿಷ್ಠ ಅಭ್ಯರ್ಥಿ. ಮೊದಲ ಪಟ್ಟಿಯಲ್ಲಿ ವಾಸು ಅವರ ಹೆಸರು ಇರುತ್ತದೆ. ವಾಸುಗೆ ಟಿಕೆಟ್ ತಪ್ಪಿಸಿ ಬೇರೆಯವರಿಗೆ ಕೊಡಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಬಣ ಅಥವಾ ಬೇರೆ ಬಣ ಇಲ್ಲ. ಇರುವುದೊಂದೇ ಬಣ, ಅದು ಕಾಂಗ್ರೆಸ್ ಬಣ. ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಅವರು ಶಾಸಕರಾಗಿ, ಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ಅವರ ಬೇರು ಕಾಂಗ್ರೆಸ್‌ನಲ್ಲಿ ಬಲವಾಗಿದೆ ಎಂದರು.
ಟಾಪ್ ನ್ಯೂಸ್
