ಚೊಚ್ಚಲ ಮೇಯರ್‌ ಸ್ಥಾನ ಧಕ್ಕಿಸಿಕೊಳ್ಳಲು ಬಿಜೆಪಿ ಯತ್ನ

ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಂಡು ಮೇಯರ್‌ ಸ್ಥಾನಕ್ಕೇರಲು ಬಿಜೆಪಿ ತಂತ್ರ; ದಳಪತಿಗಳ ಚಿತ್ತ ಇನ್ನೂ ನಿಗೂಢ

Team Udayavani, Aug 19, 2021, 4:41 PM IST

ಚೊಚ್ಚಲ ಮೇಯರ್‌ ಸ್ಥಾನ ಧಕ್ಕಿಸಿಕೊಳ್ಳಲು ಬಿಜೆಪಿ ಯತ್ನ

ಮೈಸೂರು: ಒಮ್ಮೆಯೂ ಮೈಸೂರು ಮಹಾನಗರ ಪಾಲಿಕೆಯ ಮೇಯರ್‌ ಗಾದಿ ಹಿಡಿಯದ ಬಿಜೆಪಿ, ಈ ಬಾರಿಯಾದರೂ ಮೇಯರ್‌ ಪಟ್ಟ ಗಿಟ್ಟಿಸಿಕೊಳ್ಳಲು ಇನ್ನಿಲ್ಲದಕಸರತ್ತು ನಡೆಸುತ್ತಿದೆ.

ಕಳೆದ ಮೇಯರ್‌ ಚುನಾವಣೆಯಲ್ಲಿ ಅನಿರೀಕ್ಷಿತ ಬೆಳವಣಿಗೆಯಿಂದ ಮೇಯರ್‌ ಸ್ಥಾನದಿಂದ ವಂಚಿತವಾಗಿ ಕಂಗಾಲಾಗಿದ್ದ ಬಿಜೆಪಿಗೆ ಈಗ ಮತ್ತೊಂದು ಅವಕಾಶ ಲಭಿಸಿದ್ದು, ಹೇಗಾದರು ಮಾಡಿ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಂಡು ಮೇಯರ್‌ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ಆರಂಭಿಸಿದೆ.

ಕಳೆದ ಬಾರಿಯ ಮೇಯರ್‌ ಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ನ ಮೈತ್ರಿ ಮುಂದುವರಿದ ಕೆಲವೆ ದಿನಗಳಲ್ಲಿ ಎರಡೂ ಪಕ್ಷಗಳ ನಾಯಕರಲ್ಲಿ ಹೊಂದಾಣಿಕೆ ಕೊರತೆಯಿಂಟಾಗಿ, ಬಿರುಕು ಕಾಣಿಸಿಕೊಂಡಿತ್ತು. ಈ ನಡುವೆ ಹೈಕೋರ್ಟ್‌ ಮೇಯರ್‌ ಸದಸ್ಯತ್ವವನ್ನು ಅನರ್ಹಗೊಳಿಸಿದ್ದು, ಮೇಯರ್‌ ಗದ್ದುಗೆ ಏರಲೇಬೇಕು ಎನ್ನುವ ಬಿಜೆಪಿ ಆಸೆಗೆ ಮತ್ತೆ ರೆಕ್ಕೆಪುಕ್ಕ ಬಂದಂತಾಗಿದೆ. ಆ.25ರಂದು ನಡೆಯುವ ಚುನಾವಣೆಯ ಮೇಲೆ ಮೂರು ಪಕ್ಷಗಳ ನಾಯಕರು ತಮ್ಮ ಚಿತ್ರ ಹರಿಸಿದ್ದಾರೆ.

ಇದನ್ನೂ ಓದಿ:ಭಾರತ, ಪಾಕಿಸ್ತಾನ ಕಾಶ್ಮೀರವನ್ನು ಅಕ್ರಮವಾಗಿ ವಶಪಡಿಸಿಕೊಳ್ಳಲು ಯತ್ನಿಸುತ್ತಿವೆ: ಮಲ್ವಿಂದರ್

ಹಿಂದಿನ ಚುನಾವಣೆಯಲ್ಲಿ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಮೈತ್ರಿಯಲ್ಲಿ ಬಿರುಕು ಕಾಣಿಸಿಕೊಂಡಿದ್ದರಿಂದ ಮೈಸೂರು ನಗರ ಪಾಲಿಕೆಯ ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ಬಿಜೆಪಿ ತಂತ್ರಗಾರಿಕೆ ರೂಪಿಸಿತ್ತು. ಇದಕ್ಕೆ ಪೂರಕವಾಗಿ ಮೇಯರ್‌ ಸ್ಥಾನಕ್ಕೆ “ಸಾಮಾನ್ಯ ಮಹಿಳೆ’ ಮೀಸಲಾತಿ ನಿಗದಿ ಯಾಯಿತು. ಬಿಜೆಪಿಯ ಹಿರಿಯ ಸದಸ್ಯೆ ಸುನಂದಾ ಪಾಲನೇತ್ರ ಮೇಯರ್‌ ಆಗುವುದು ಬಹುತೇಕ ಖಚಿತ ಎನ್ನುವಂತೆ ಸಾಕಷ್ಟು ಬೆಳವಣಿಗೆ ನಡೆದಿತ್ತು. ಅತ್ತ ಜೆಡಿಎಸ್‌-ಕಾಂಗ್ರೆಸ್‌ ನಡುವಿನ ಹೊಂದಾಣಿಕೆಯೂ ಮುರಿದು ಬೀಳುವ ಹಂತ ತಲುಪಿತ್ತು. ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷ ಗಳೊಂದಿಗೆ ಮೈತ್ರಿ ವಿಚಾರವಾಗಿ ಸ್ಪಷ್ಟಪಡಿಸದ ಜೆಡಿಎಸ್‌, ಕಡೇ ಕ್ಷಣದಲ್ಲಿ ಏಕಾಂಗಿ ಸ್ಪರ್ಧೆಗೆ ನಿರ್ಧರಿಸಿತ್ತು. ಅದರಂತೆ ಚುನಾವಣೆ ದಿನದಂದು ಜೆಡಿಎಸ್‌ನ ರುಕ್ಮಿಣಿ ಮಾದೇಗೌಡ ಹಾಗೂ ಬಿಜೆಪಿಯ ಸುನಂದ ಪಾಲನೇತ್ರ ನಾಮಪತ್ರ ಸಲ್ಲಿಸಿದ್ದರು. ಆದರೆ ಬಿಜೆಪಿಗೆ ಯಾವುದೇ ಕಾರಣಕ್ಕೂ ಅಧಿಕಾರ ನೀಡಬಾರದು ಎಂಬ ಕಾರಣಕ್ಕೆ ಕಾಂಗ್ರೆಸ್‌ನ ಶಾಸಕ ತನ್ವೀರ್‌ ಸೇಠ್ ಸೂಚನೆ ಮೇರೆಗೆ ಕೈ ಸದಸ್ಯರು ಜೆಡಿಎಸ್‌ ಅಭ್ಯರ್ಥಿಯನ್ನು ಬೆಂಬಲಿಸುವ ಮೂಲಕ ಪಾಲಿಕೆಯಲ್ಲಿ ಮೈತ್ರಿ ಉಳಿಸಿಕೊಂಡರು.

ನಂತರದ ಬೆಳವಣಿಗೆಯಲ್ಲಿ ರುಕ್ಮಿಣಿ ಮಾದೇಗೌಡರ ಸದಸ್ಯತ್ವ ರದ್ದಾದ ಕಾರಣ ಮೇಯರ್‌ ಸ್ಥಾನವನ್ನು ಕಾಂಗ್ರೆಸ್‌ಗೆ ನೀಡಲು ಜೆಡಿಎಸ್‌ ಒಪ್ಪಿದ್ದರಿಂದ ಹಿರಿಯ ಸದಸ್ಯೆ ಶಾಂತಕುಮಾರಿ ಅವರನ್ನು ಅಭ್ಯರ್ಥಿಯನ್ನಾಗಿಸಲು ಕಾಂಗ್ರೆಸ್‌ನಲ್ಲಿ ನಿರ್ಧಾರವಾಗಿತ್ತು. ಆದರೆ ಅವರದೇ ಪಕ್ಷದ ಸದಸ್ಯ ನ್ಯಾಯಾಲಯ ಮೆಟ್ಟಿಲೇರಿದ್ದರಿಂದ ಚುನಾವಣೆಗೆ ತಡೆಬಿದ್ದಿತು. ಇದೀಗ ಮತ್ತೆ ಚುನಾವಣಾ ದಿನಾಂಕ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಪಾಳಯದಲ್ಲಿ ಅಧಿಕಾರಕ್ಕೆ ತಂತ್ರ ರೂಪಿಸಲಾಗುತ್ತಿದೆ.

ಪಾಲಿಕೆಯಲ್ಲಿ ಪಕ್ಷಗಳ ಬಲಾಬಲ
ಶಾಸಕ ಜಿ.ಟಿ.ದೇವೇಗೌಡರು, ವಿಧಾನಪರಿಷತ್‌ ಸದಸ್ಯರಾದ ಸಂದೇಶ್‌ ನಾಗರಾಜ್‌, ಮರಿತಿಬ್ಬೇಗೌಡ,ಕೆ.ಟಿ. ಶ್ರೀಕಂಠೇಗೌಡ ಹಾಗೂ 16 ಮಂದಿ ಪಾಲಿಕೆ ಸದಸ್ಯರು ಸೇರಿ ಜೆಡಿಎಸ್‌ನಲ್ಲಿ 21 ಹಾಗೂ ಶಾಸಕ ತನ್ವೀರ್‌ ಸೇಠ್ ಹಾಗೂ 19 ಕಾರ್ಪೊರೇಟರ್‌ಗಳು ಸೇರಿ ಕಾಂಗ್ರೆಸ್‌ ನಲ್ಲಿ 20 ಮತ್ತು ಸಂಸದ ಪ್ರತಾಪ್‌ಸಿಂಹ, ಶಾಸಕರಾದ ಎಸ್‌.ಎ.ರಾಮದಾಸ್‌, ಎಲ್‌. ನಾಗೇಂದ್ರ ಹಾಗೂ 23 ಕಾರ್ಪೊರೇಟರ್‌ಗಳು ಸೇರಿ ಬಿಜೆಪಿಯಲ್ಲಿ26 ಮತ ಬಲವಿದೆ. ಜೊತೆಗೆ ನಾಲ್ವರು ಪಕ್ಷೇತರರು, ಓರ್ವ ಬಿಎಸ್ಪಿ ಸದಸ್ಯೆ ಸೇರಿ ಒಟ್ಟು72 ಮತದಾರರಿದ್ದಾರೆ.

4 ತಿಂಗಳು ಬಿಜೆಪಿಗೆ, 2 ವರ್ಷ ಜೆಡಿಎಸ್‌ಗೆ ಮೇಯರ್‌ ಸ್ಥಾನ?
ಹಿಂದಿನ ಪಾಲಿಕೆ ಮೇಯರ್‌ ಚುನಾವಣೆಯಲ್ಲಿ ಅಧಿಕಾರ ಹಿಡಿಯಲು ವಿಫ‌ಲವಾಗಿದ್ದ ಸಚಿವ ಎಸ್‌ .ಟಿ.ಸೋಮಶೇಖರ್‌ ಈ ಬಾರಿ ಯಶಸ್ವಿ ಯಾಗುವ ನಿಟ್ಟಿನಲ್ಲಿ ಪ್ರಯತ್ನ ನಡೆಸಿದ್ದಾರೆ. ಮೇಯರ್‌ ಅವಧಿ ಕೇವಲ ನಾಲ್ಕು ತಿಂಗಳು ಮಾತ್ರ ಬಾಕಿ ಉಳಿದಿದ್ದು, ಈ ಅವಧಿಗೆ ಮೇಯರ್‌ ಆಗಲು ಜೆಡಿಎಸ್‌ ಆಸಕ್ತಿ ತೋರದೆ ಇರುವುದನ್ನೇ ಬಂಡವಾಳ ಮಾಡಿಕೊಂಡಿರುವ ಬಿಜೆಪಿ ಕೊನೆಯ ಎರಡು ವರ್ಷ ಮೇಯರ್‌ ಅವಧಿಯನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟು, ಈಗಿರುವ ನಾಲ್ಕು ತಿಂಗಳಕಾಲವಕಾಶದಲ್ಲಿ ಬಿಜೆಪಿ ಮೇಯರ್‌ ಸ್ಥಾನ ಬಿಟ್ಟುಕೊಡುವಂತೆ ಬಿಜೆಪಿ ನಾಯಕರು ಜೆಡಿಎಸ್‌ ಜೊತೆಗೆ ಮಾತಿಗಿಳಿದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿಗೆ ಮೇಯರ್‌ ಸ್ಥಾನ ಬಿಟ್ಟುಕೊಟ್ಟರೆ, ನಾವು ಜೆಡಿಎಸ್‌ ಜೊತೆ ಮೈತ್ರಿ ಮಾಡಿಕೊಳ್ಳುತ್ತೇವೆ. ಈ ಬಗ್ಗೆ ಪಕ್ಷದ ರಾಜ್ಯಾಧ್ಯಕ್ಷರು, ಎಚ್‌.ಡಿ.ಕುಮಾರಸ್ವಾಮಿ ಜತೆ ಮಾತುಕತೆ ನಡೆಸುವ ಸಾಧ್ಯತೆ ಇದೆ. ಅವರು ಮಾತನಾಡಿದ ನಂತರ ಜೆಡಿಎಸ್‌ ಸ್ಥಳೀಯ ನಾಯಕರು ಹಾಗೂ ಶಾಸಕರ ಜೊತೆಗೆ ನಾವು ಚರ್ಚಿಸುತ್ತೇವೆ. 23 ಸ್ಥಾನಗಳೊಂದಿಗೆ ಅತಿ ಹೆಚ್ಚು ಸದಸ್ಯರು ನಮ್ಮ ಪಕ್ಷದಲ್ಲಿ ಇರುವಕಾರಣ ನಾವು ಮೇಯರ್‌ ಸ್ಥಾನಕೇಳುತ್ತಿದ್ದೇವೆ.ಕಳೆದ ಬಾರಿ ಮೇಯರ್‌ ಆಕಾಂಕ್ಷಿಯಾಗಿದ್ದ ಸುನಂದಾರನ್ನೇಕಣಕ್ಕಿಳಿಸುತ್ತೇವೆ. ಪ್ರಮೀಳಾ ಸಹ ಆಕಾಂಕ್ಷಿಯಾಗಿದ್ದಾರೆ.
-ಟಿ.ಎಸ್‌. ಶ್ರೀವತ್ಸ, ಬಿಜೆಪಿ ನಗರಾಧ್ಯಕ್ಷ.

-ಸತೀಶ್‌ ದೇಪುರ

ಟಾಪ್ ನ್ಯೂಸ್

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.