ಅಂಚೆ ಕಾರ್ಡ್ ಮಹಾ ಅಭಿಯಾನ : ಪ್ರಧಾನಿಗೆ ಪತ್ರ ಬರೆದ ನಳಿನ್ಕುಮಾರ್ ಕಟೀಲ್
Team Udayavani, Oct 4, 2021, 6:53 PM IST
ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 20 ವರ್ಷಗಳ ಸೇವೆ ಮತ್ತು ಸಮರ್ಪಣೆಯ ಆಡಳಿತ ಪೂರೈಸಿದ ಹಿನ್ನೆಲೆಯಲ್ಲಿ ಮತ್ತು ಅವರ ಜನ್ಮದಿನವಾದ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 7ರ ವರೆಗೆ ಪ್ರಧಾನಮಂತ್ರಿಗಳಿಗೆ ಶುಭಾಶಯ, ಅಭಿನಂದನಾ ಪತ್ರ ಬರೆಯುವ ಪೋಸ್ಟ್ ಕಾರ್ಡ್ ಮಹಾ ಅಭಿಯಾನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾದರಿ ಎನಿಸಿಕೊಂಡಿದ್ದಾರೆ.
ನಮ್ಮ ನೆಚ್ಚಿನ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರಿಗೆ ಸಾದರ ವಂದನೆಗಳು ಮತ್ತು ಜನುಮದಿನದ ಹಾರ್ಧಿಕ ಶುಭಾಶಯಗಳು. ತಮ್ಮ 20 ವರ್ಷದ ಅಧಿಕಾರಾವಧಿಯಲ್ಲಿ ಶೋಷಿತರ, ಹಿಂದುಳಿದ ವರ್ಗಗಳ, ಬಡವರ ಹಾಗೂ ಸರ್ವ ವರ್ಗದ ಪರ ಯೋಜನೆಗಳು- ಅಭಿವೃದ್ಧಿ ಪರವಾದ ಆಡಳಿತ, ಭ್ರಷ್ಟಾಚಾರರಹಿತ ಅಧಿಕಾರಾವಧಿ, ಅತ್ಯುತ್ತಮ ಆಡಳಿತ- ದಾಖಲೆಯ ಪ್ರಮಾಣದಲ್ಲಿ ಕೋವಿಡ್ ಲಸಿಕೆ ನೀಡುತ್ತಿರುವುದು ಅಭಿನಂದನೀಯ ಎಂದು ನಳಿನ್ ಕುಮಾರ್ ಕಟೀಲ್ ಅವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
ಭಾರತವನ್ನು ವಿಶ್ವಗುರುವನ್ನಾಗಿಸುವ ತಮ್ಮ ಮಹೋನ್ನತ ಸಂಕಲ್ಪ ಸಾಕಾರಗೊಳಿಸುವಂತಹ ಸೌಭಾಗ, ಆಯುರಾರೋಗ್ಯವನ್ನು ತಾಯಿ ಭಾರತಾಂಬೆ ಕರುಣಿಸಲಿ ಎಂದು ಅವರು ಹಾರೈಸಿದ್ದಾರೆ.
ಇದನ್ನೂ ಓದಿ :12 ವರ್ಷಗಳಿಂದ ಮೃತ ತಾಯಿ ಹೆಸರಲ್ಲಿ ಸಾಲ ಪಡೆದ ಭೂಪ !
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ