ಸಿದ್ದರಾಮಯ್ಯ ಕನ್ನಡಿ ನೋಡಿಕೊಳ್ಳಲಿ: ನಳಿನ್
Team Udayavani, Jul 12, 2020, 10:53 AM IST
ಮಡಿಕೇರಿ: ಕೋವಿಡ್ ಸೋಂಕು ವ್ಯಾಪಿಸುವುದನ್ನು ತಡೆಯಲು ರಾಜ್ಯ ಸರಕಾರ ಕೈಗೊಂಡ ಕಾರ್ಯಗಳ ಬಗ್ಗೆ ಆರೋಪ ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮುಖವನ್ನೊಮ್ಮೆ ಕನ್ನಡಿಯಲ್ಲಿ ನೋಡಿಕೊಳ್ಳಲಿ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ತಿರುಗೇಟು ನೀಡಿದ್ದಾರೆ.
ಮಡಿಕೇರಿಯಲ್ಲಿ ಮಾತನಾಡಿದ ಅವರು, ಕೊರೊನಾ ನಿಯಂತ್ರಣದ ಸಾಮಗ್ರಿ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎನ್ನುವ ಸಿದ್ದರಾಮಯ್ಯ ಅವರ ಆರೋಪಕ್ಕೆ ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ನಿಮಗಿರುವ ಸಂಶಯಗಳ ಬಗ್ಗೆ ಎಲ್ಲ ಮಾಹಿತಿ ನೀಡಿ, ನಾವು ಉತ್ತರ ಕೊಡುತ್ತೇವೆ ಎಂದು ತಿಳಿಸಿರುವುದಾಗಿ ಹೇಳಿದರು.
ತಮ್ಮ ಅವಧಿಯ ಅವ್ಯವಹಾರ ಬಗ್ಗೆ ಮಾತನಾಡಲಿ
ಸಿದ್ದರಾಮಯ್ಯ ತಮ್ಮ ಅಧಿಕಾರಾವಧಿಯಲ್ಲಿನ ಇಂದಿರಾ ಕ್ಯಾಂಟಿನ್ಗಳಲ್ಲಿ ನಡೆದ ಅವ್ಯವಹಾರಗಳ ಬಗ್ಗೆ ಮಾತನಾಡುತ್ತಿಲ್ಲ. ಕಾಂಗ್ರೆಸ್ ಮುಖಂಡ ಈಶ್ವರ ಖಂಡ್ರೆ ಅವರ ಮೇಲಿನ ಆರೋಪಗಳಿಗೆ ಯಾವುದೇ ಉತ್ತರ ನೀಡುತ್ತಿಲ್ಲ. ಇದೀಗ ಬಿಜೆಪಿ ಸರಕಾರದ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ನಳಿನ್ ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ
Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ