ಪಶ್ಚಿಮ ಘಟ್ಟದ ತಪ್ಪಲಲ್ಲಿ ನಕ್ಸಲರ ಓಡಾಟ- ANF ಕಾರ್ಯಾಚರಣೆ ಚುರುಕು

Team Udayavani, Feb 8, 2024, 12:32 AM IST

naxals

ಕೊಲ್ಲೂರು: ಮುದೂರು ಬೆಳ್ಕಲ್‌ ಪರಿಸರದಲ್ಲಿ ನಕ್ಸಲರ ಚಲನವಲನ ಕಂಡು ಬಂದಿರುವ ಹಿನ್ನೆಲೆಯಲ್ಲಿ ನಕ್ಸಲ್‌ ನಿಗ್ರಹ ದಳ (ಎಎನ್‌ಎಫ್) ಕಾರ್ಯಾಚರಣೆಯನ್ನು ಚುರುಕುಗೊಳಿಸಿದೆ. ನಕ್ಸಲರು ಭೇಟಿ ನೀಡಿ ತೆರಳಿದ್ದಾರೆ ಎನ್ನಲಾದ ಮನೆಗಳು, ವ್ಯಕ್ತಿಗಳಿಂದ ಎಎನ್‌ಎಫ್ ಸಿಬಂದಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ನಕ್ಸಲ್‌ ಮುಖಂಡ ಸಾಕೇತ್‌ ರಾಜನ್‌ ಸಾವಿನ ಬಳಿಕ ವಿಕ್ರಂ ಗೌಡ ನೇತೃತ್ವದ ತಂಡವು ಸದ್ದು ಮಾಡುತ್ತಿದೆ. ಕೇರಳ – ಕರ್ನಾಟಕ ಗಡಿಪ್ರದೇಶವಾದ ವಯನಾಡಿನ ಅರಣ್ಯದಲ್ಲಿ ಕೇರಳ ವಿಶೇಷ ಪೊಲೀಸ್‌ ಪಡೆ “ಥಂಡರ್‌ಬೋಲ್ಟ್’ ಮತ್ತು ನಕ್ಸಲರ ಮಧ್ಯೆ ಕಳೆದ ತಿಂಗಳು ತೀವ್ರ ಗುಂಡಿನ ಚಕಮಕಿ ನಡೆದಿತ್ತು. ಬಳಿಕ ಅಲ್ಲಿಂದ ತಂಡವು ಕರ್ನಾಟಕ ಪ್ರವೇಶಿಸಿರುವ ಬಗ್ಗೆ ವರದಿಯಾಗಿತ್ತು.
ಹಲವು ವರ್ಷಗಳ ಹಿಂದೆ ಕುಂದಾ ಪುರದ ಜಡ್ಕಲ್‌, ಮುದೂರು, ದೇವರಬಾಳು ಪರಿಸರದಲ್ಲಿ ಕಾಣಿಸಿಕೊಂಡಿದ್ದ ನಕ್ಸಲ್‌ ತಂಡವು ಭೂಮಿ ವಿವಾದ, ಪೈಪ್‌ ಅಳವಡಿಕೆ, ದಿನಗೂಲಿ ಇನ್ನಿತರ ವಿಷಯಗಳಲ್ಲಿ ಜನರಿಗೆ ಬೆಂಬಲಿಸತೊಡಗಿದದರು. ಆ ಮೂಲಕ ಆಹಾರ ಸಾಮಗ್ರಿ ಕ್ರೋಢೀಕರಣದಲ್ಲಿ ತೊಡಗಿದ್ದ ಅವರು, ಭೂಮಾಲಕರನ್ನು ಗುಂಡಿಕ್ಕಿ ಕೊಲ್ಲುವಂಥ ಚಟುವಟಿಕೆಯಲ್ಲೂ ಭಾಗಿಯಾಗಿದ್ದರು.

ನಕ್ಸಲ್‌ ಮುಖಂಡರೆನಿಸಿಕೊಂಡಿದ್ದ ಬಿ.ಜೆ. ಕೃಷ್ಣಮೂರ್ತಿ ಮತ್ತು ಸಾವಿತ್ರಿ ಯನ್ನು ಕೇರಳ ಭಯೋತ್ಪಾದನ ನಿಗ್ರಹ ಪಡೆ 2021ರ ನ. 10ರಂದು ವಯನಾಡಿನಲ್ಲಿ ಬಂಧಿಸಿತ್ತು. 2022ರ ಫೆ. 24ರಂದು ಇಬ್ಬರನ್ನು ಕರ್ನಾಟಕ ಪೊಲೀಸರಿಗೆ ಹಸ್ತಾಂತರಿಸಲಾಗಿತ್ತು. 2006ರಲ್ಲಿ ಕುಂದಾಪುರದ ಅಮಾಸೆ ಬೈಲ್‌ ಠಾಣೆಯಲ್ಲಿ ದಾಖಲಾದ ಪ್ರಕರಣ ಹಾಗೂ 2005ರಲ್ಲಿ ಶಂಕರ ನಾರಾಯಣ ಠಾಣೆ  ವ್ಯಾಪ್ತಿಯ ಕೇಶವ ಯಡಿಯಾಳ್‌ ಹತ್ಯೆ ಸೇರಿದಂತೆ ಇನ್ನಿತರ ಪ್ರಕರಣಗಳ ವಿಚಾರಣೆಗಾಗಿ ಕುಂದಾಪುರ ಉಪವಿಭಾಗದ ಪೊಲೀಸರು ಕೃಷ್ಣಮೂರ್ತಿ, ಸಾವಿತ್ರಿ ಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಅವರ ವಿರುದ್ಧ ಅಮಾಸೆಬೈಲು ಪೊಲೀಸ್‌ ಠಾಣೆಯಲ್ಲಿ 4, ಶಂಕರನಾರಾಯಣದಲ್ಲಿ 6 ಪ್ರಕರಣ, ಕೊಲ್ಲೂರಿನಲ್ಲಿ 1 ಪ್ರಕರಣ ದಾಖಲಾಗಿದೆ.

ಚಿಕ್ಕಮಗಳೂರಿನಲ್ಲೂ ಕಟ್ಟೆಚ್ಚರ
ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಎಎನ್‌ಎಫ್‌ ಕಟ್ಟೆಚ್ಚರ ವಹಿಸಿದೆ. ನಕ್ಸಲ್‌ ನಾಯಕ ಸಾಕೇತ್‌ ರಾಜನ್‌ ಸಾವಿಗೆ ರೆಡ್‌ ಸೆಲ್ಯೂಟ್‌ ದಿನ ಆಚರಿಸ ಬಹುದೆಂಬ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎನ್ನಲಾಗುತ್ತಿದೆ.

ಕುಂದಾಪುರ ಭಾಗದಲ್ಲಿ ಮತ್ತೆ ನಕ್ಸಲ್‌ ಚಟುವಟಿಕೆ ಹೆಚ್ಚುತ್ತಿರುವ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಎಎನ್‌ಎಫ್‌ ತಂಡವನ್ನು ಕೊಲ್ಲೂರು ಸುತ್ತಲಿನ ಸೂಕ್ಷ್ಮ ಪ್ರದೇಶಗಳಿಗೆ ರವಾನಿಸಲಾಗಿದೆ.
– ಡಾ| ಅರುಣ್‌ ಕುಮಾರ್‌, ಪೊಲೀಸ್‌ ವರಿಷ್ಠಾಧಿಕಾರಿ, ಉಡುಪಿ ಜಿಲ್ಲೆ

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.