ಪಾಣೆಮಂಗಳೂರು ಸೇತುವೆಯಿಂದ ಹಾರಿ ಯುವಕ ಆತ್ಮಹತ್ಯೆ
Team Udayavani, May 24, 2020, 2:43 PM IST
ಬಂಟ್ವಾಳ: ಪಾಣೆಮಂಗಳೂರು ಹಳೆಸೇತುವೆಯಿಂದ ಯುವಕನೊಬ್ಬ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ನಡೆದಿದೆ.
ಕಲ್ಲಡ್ಕ ಸಮೀಪದ ಕೊಳಕೀರು ನಿವಾಸಿ ನಿಶಾಂತ್ ಆತ್ಮಹತ್ಯೆ ಮಾಡಿಕೊಂಡ ಯುವಕ, ನದಿಗೆ ಹಾರಿದ ತಕ್ಷಣ ಅಲ್ಲಿನ ಸ್ಥಳೀಯ ಯುವಕರು ನದಿಗೆ ದುಮುಕಿದ್ದು ಆತನನ್ನು ಮೇಲಕ್ಕೆತ್ತಿದರೂ ಯಾವುದೇ ಪ್ರಯೋಜನವಾಗಿಲ್ಲ. ಬಂಟ್ವಾಳ ನಗರ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ.