ಹತ್ತು ಸಾವಿರ ಮೆಗಾವ್ಯಾಟ್ ಉತ್ಪಾದನ ಗುರಿಯ ನೂತನ ಇಂಧನ ನೀತಿ: ಸುನಿಲ್
Team Udayavani, Sep 29, 2021, 11:23 PM IST
ಬೆಂಗಳೂರು: ರಾಜ್ಯದಲ್ಲಿ ಹತ್ತು ಸಾವಿರ ಮೆಗಾ ವ್ಯಾಟ್ ಉತ್ಪಾದನೆಯ ಗುರಿಯೊಂದಿಗೆ ನೂತನ ನವೀಕರಿಸಬಹುದಾದ ಇಂಧನ ನೀತಿಯನ್ನು ತರಲಾಗುವುದು ಎಂದು ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.
ಬುಧವಾರ ಪಾವಗಡ ಸೋಲಾರ್ ಪಾರ್ಕ್ ಪರಿಶೀಲನ ಸಭೆಯ ಬಳಿಕ ಮಾತನಾಡಿದ ಅವರು, ಸೋಲಾರ್ ಪಾರ್ಕ್ ನಿಂದ 1,850 ಮೆಗಾ ವ್ಯಾಟ್ ವಿದ್ಯುತ್ ರಾಜ್ಯಕ್ಕೆ ಲಭಿಸುತ್ತಿದ್ದು, 200 ಮೆಗಾವ್ಯಾಟ್ ಹೊರರಾಜ್ಯಕ್ಕೆ ಪೂರೈ ಸಲಾಗುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಯವರು 2022ರ ವೇಳೆಗೆ ನವೀಕರಿಸಬಹುದಾದ ಇಂಧನ ಉತ್ಪಾದನ ಸಾಮರ್ಥ್ಯವನ್ನು ಹೆಚ್ಚಿಸುವ ಗುರಿ ನೀಡಿದ್ದು, ಈ ನಿಟ್ಟಿನಲ್ಲಿ ನೂತನ ನೀತಿಯನ್ನು ತರಲಾಗುವುದು ಎಂದು ಹೇಳಿದರು.
ಇದನ್ನೂ ಓದಿ:ಸ್ವಾತಂತ್ರ್ಯ ಹೋರಾಟಕ್ಕೂ ಸಿದ್ದರಾಮಯ್ಯರಿಗೂ ಏನು ಸಂಬಂಧ: ಆರಗ ಪ್ರಶ್ನೆ
ದೇಶದ ಅತಿದೊಡ್ಡ ಸೋಲಾರ್ ಪಾರ್ಕ್ ನಿರ್ಮಾಣಕ್ಕಾಗಿ ಭೂಮಿ ನೀಡಿದ ರೈತರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು. ಅವರಿಗೆ ಅಗತ್ಯವಾದ ಸೌಲಭ್ಯ ಕಲ್ಪಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?