ಜಾಮೀನು ರದ್ದು: ಬಂಧನದ ಭೀತಿಯಲ್ಲಿ ನಿತ್ಯಾನಂದ ಸ್ವಾಮಿ
Team Udayavani, Feb 5, 2020, 10:11 PM IST
ಬೆಂಗಳೂರು: ಅತ್ಯಾಚಾರ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಪ್ರಕರಣದ ಪ್ರಮುಖ ಆರೋಪಿ ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮೀಜಿಗೆ 2010ರಲ್ಲಿ ಮಂಜೂರು ಮಾಡಿದ್ದ ಜಾಮೀನನ್ನು ಹೈಕೋರ್ಟ್ ರದ್ದುಗೊಳಿಸಿದೆ. ಇದರಿಂದಾಗಿ ಸದ್ಯ ತಲೆಮರೆಸಿಕೊಂಡಿರುವ ನಿತ್ಯಾನಂದ ಸ್ವಾಮೀಜಿಗೆ ಮತ್ತೇ ಬಂಧನದ ಭೀತಿ ಎದುರಾಗಿದೆ.
ನಿತ್ಯಾನಂದ ಸ್ವಾಮೀಗೆ ನೀಡಲಾಗಿರುವ ಜಾಮೀನು ರದ್ದುಗೊಳಿಸುವಂತೆ ಕೋರಿ ಪ್ರಕರಣದ ದೂರುದಾರ ಲೆನಿನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ಬುಧವಾರ ಪ್ರಕಟಿಸಿದ ನ್ಯಾ| ಜಾನ್ ಮೈಕೆಲ್ ಕುನ್ಹಾ ಅವರಿದ್ದ ಏಕಸದಸ್ಯ ನ್ಯಾಯಪೀಠ, ಜಾಮೀನು ರದ್ದುಗೊಳಿಸಿ ಆದೇಶಿಸಿದ್ದಾರೆ. ತತ್ಕ್ಷಣ ಆರೋಪಿಯನ್ನು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್ ಆದೇಶಿಸಿದೆ.