ಭೂ ವಿವಾದ ಬಗೆಹರಿಯದೇ ಆರೋಗ್ಯ ವಿವಿ ಸ್ಥಳಾಂತರ ಇಲ್ಲ : ಡಿಸಿಎಂ ಸ್ಪಷ್ಟನೆ

Team Udayavani, Oct 9, 2019, 7:45 PM IST

ಬೆಂಗಳೂರು: ಭೂ ವ್ಯಾಜ್ಯ ಪರಿಹಾರದ ಅನಂತರವೇ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಮುಖ್ಯ ಕ್ಯಾಂಪಸ್‌ನ್ನು ರಾಮನಗರಕ್ಕೆ ಸ್ಥಳಾಂತರಿಸಲಾಗುವುದು ಎಂದು ಡಿಸಿಎಂ, ವೈದ್ಯಕೀಯ ಶಿಕ್ಷಣ ಸಚಿವ ಡಾ|ಸಿ.ಎನ್‌.ಅಶ್ವತ್ಥ್ ನಾರಾಯಣ ಸ್ಪಷ್ಟಪಡಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜೀವ್‌ಗಾಂಧಿ ವಿಶ್ವವಿದ್ಯಾನಿಲಯವನ್ನು ಬೆಂಗಳೂರಿನಿಂದ ರಾಮನಗರಕ್ಕೆ ಸ್ಥಳಾಂತರಿಸಲು ನಮ್ಮ ವಿರೋಧ ಇರಲಿಲ್ಲ. ಆದರೆ ಕಾನೂನು ಬಾಹಿರವಾಗಿ ಸ್ಥಳಾಂತರ ಕಾರ್ಯ ಕೈಗೊಂಡಿರುವುದನ್ನು ವಿರೋಧಿಸಿದ್ದೇವೆ ಎಂದರು.

ವಿಶ್ವವಿದ್ಯಾನಿಲಯ ಕ್ಯಾಂಪಸ್‌ ನಿರ್ಮಾಣಕ್ಕೆ ಬೇಕಿರುವ ಭೂಮಿಯನ್ನು ಒದಗಿಸದೇ ತಾತ್ಕಾಲಿಕ ಸ್ಥಳಾಂತರ ಕಾರ್ಯ ಕೈಗೊಳ್ಳುವುದರಿಂದ ಯಾವುದೇ ಪ್ರಯೋಜನವಿಲ್ಲ. ಕ್ಯಾಂಪಸ್‌ ನಿರ್ಮಾಣಕ್ಕೆ ಭೂಮಿಯೇ ಇಲ್ಲದೇ ಸ್ಥಳಾಂತರ ಹೇಗೆ ಸಾಧ್ಯ ಎಂಬುದನ್ನು ನಾವು ಕೂಡ ಈ ಹಿಂದೆ ಪ್ರಶ್ನಿಸಿದ್ದೆವು. ನಮ್ಮ ಈ ನಿಲುವಿಗೆ ಈಗಲೂ ಬದ್ಧರಾಗಿದ್ದೇವೆ. ನಿರ್ದಿಷ್ಟ ಭೂಮಿಯನ್ನು ಒದಗಿಸದೇ ಇರುವುದಕ್ಕೆ ನ್ಯಾಯಾಲಯವು ತಡೆಯಾಜ್ಞೆ ನೀಡಿದೆ. ಹೀಗಾಗಿ ಭೂಮಿ ಒದಗಿಸಲು ಬೇಕಾದ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ರಾಜ್ಯದ ಬೇರೆಲ್ಲ ಜಿಲ್ಲೆಯಲ್ಲಿ ಸರಕಾರಿ ಅಥವಾ ಖಾಸಗಿ ವೈದ್ಯಕೀಯ ಕಾಲೇಜುಗಳಿವೆ. ಆದರೆ ರಾಮನಗರದಲ್ಲಿಲ್ಲ. ಹೀಗಾಗಿ ರಾಮನಗರಕ್ಕೆ ಕ್ಯಾಂಪಸ್‌ ಸ್ಥಳಾಂತರಿಸಲು ಕಾಯ್ದೆಗೆ ತಿದ್ದುಪಡಿ ಕೂಡ ಮಾಡಲಾಗಿದೆ. ಆದ್ದರಿಂದ ಕಾನೂನಿನಂತೆ ನಡೆದುಕೊಳ್ಳುತ್ತೇವೆ ಎಂದು ಹೇಳಿದರು.

ರಾಜ್ಯದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿದ್ದೇನೆ. ಅತಿ ಶೀಘ್ರದಲ್ಲಿ ಆಸ್ಪತ್ರೆಗಳಿಗೂ ಭೇಟಿ ನೀಡಲಿದ್ದೇನೆ.
-ಡಾ| ಸಿ.ಎನ್‌.ಅಶ್ವತ್ಥ್ ನಾರಾಯಣ, ಉಪಮುಖ್ಯಮಂತ್ರಿ

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಉಡುಪಿ: ಕರ್ನಾಟಕ ಜಾನಪದ ಅಕಾಡೆಮಿಯ 2019ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿ ಮತ್ತು ಜಾನಪದ ತಜ್ಞ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟವಾಗಿದೆ. ಉಡುಪಿಯಲ್ಲಿ ವಿದ್ಯಾರ್ಥಿಗಳಿಗಾಗಿ...

  • ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್‌.ದೊರೆಸ್ವಾಮಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ವಿಧಾನಸಭೆ ಸದಸ್ಯತ್ವ...

  • ಬೆಂಗಳೂರು: ದೇಶದಲ್ಲಿ ಸಮಾನ ನಾಗರಿಕ ಕಾನೂನು ಜಾರಿಯಾಗಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ...

  • ಬೆಂಗಳೂರು: ಕನ್ನಡ ಸಿನಿಮಾರಂಗದಲ್ಲಿ ಮತ್ತಷ್ಟು ಉತ್ತಮ ಗುಣಮಟ್ಟದ ಚಿತ್ರಗಳು ಮೂಡಿ ಬರಬೇಕಾದ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅಭಿಪ್ರಾಯಪಟ್ಟರು....

  • ಕೊಪ್ಪಳ: ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ಲಂ ಬೋರ್ಡ್‌ನ್ನು ರಾಜೀವ್‌ ಗಾಂಧಿ  ವಸತಿ ನಿಗಮದಲ್ಲಿ ವಿಲೀನ ಮಾಡುವ ಚಿಂತನೆ ನಡೆದಿದೆ. ಅದಕ್ಕೆ 2 ವರ್ಷ...

ಹೊಸ ಸೇರ್ಪಡೆ