Aadhaar: ಬೆರಳಿಲ್ಲವೇ? ಕಣ್ಣಿಂದಲೇ ಆಧಾರ್ ನೋಂದಣಿ
Team Udayavani, Dec 10, 2023, 12:15 AM IST
ಹೊಸದಿಲ್ಲಿ: ಆಧಾರ್ಗೆ ಅರ್ಹತೆ ಹೊಂದಿರುವ ವ್ಯಕ್ತಿಯ ಬೆರಳಚ್ಚು ಲಭ್ಯವಿಲ್ಲದ ಸಂದರ್ಭದಲ್ಲಿ ಕಣ್ಣಿನ ಸ್ಕ್ಯಾನ್ ಮೂಲಕ ಆಧಾರ್ಗೆ ನೋಂದಣಿಯಾಗ ಬಹುದಾಗಿದೆ ಎಂದು ಕೇಂದ್ರ ಸರಕಾರ ಶನಿವಾರ ತಿಳಿಸಿದೆ.
ಬೆರಳುಗಳು ಇಲ್ಲದ ಕೇರಳದ ಜೋಸಿಮೋಲ್ ಪಿ ಜೋಸ್ ಎಂಬ ಮಹಿಳೆಯು ಆಧಾರ್ಗೆ ನೋಂದಣಿ ವಿಚಾರದಲ್ಲಿ ಕೇಂದ್ರ ಎಲೆಕ್ಟ್ರಾನಿಕ್ ಮತ್ತು ಐಟಿ ಖಾತೆ ಸಹಾಯಕ ಸಚಿವ ರಾಜೀವ್ ಚಂದ್ರಶೇಖರ್ ಮಧ್ಯ ಪ್ರವೇಶಿಸಿದ ಬೆನ್ನಲ್ಲೇ ಈ ಪ್ರಕಟಣೆ ಹೊರಬಿದ್ದಿದೆ.
“ಆಧಾರ್ಗೆ ಅರ್ಹತೆ ಹೊಂದಿರುವ ವ್ಯಕ್ತಿಯ ಬೆರಳಚ್ಚು ಲಭ್ಯವಿಲ್ಲದಿದ್ದರೆ, ಕಣ್ಣಿನ ಸ್ಕ್ಯಾನ್ ಮೂಲಕ ಆಧಾರ್ ನೋಂದಣಿ ಮಾಡಬಹುದು. ಅದೇ ರೀತಿ, ಆಧಾರ್ಗೆ ಅರ್ಹತೆ ಹೊಂದಿರುವ ವ್ಯಕ್ತಿಗೆ ಯಾವುದೇ ಕಾರಣಕ್ಕೆ ಕಣ್ಣಿನ ಸ್ಕ್ಯಾನ್ ಸಾಧ್ಯವಿಲ್ಲದ ಸಂದರ್ಭದಲ್ಲಿ ಬೆರಳಚ್ಚು ಮೂಲಕ ಆಧಾರ್ ನೋಂದಣಿ ಮಾಡಬಹುದಾಗಿದೆ” ಎಂದು ಕೇಂದ್ರ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್