ಒಮಿಕ್ರಾನ್ ಆತಂಕ ಇಲ್ಲ: ಸಚಿವ ಡಾ.ಕೆ.ಸುಧಾಕರ್
Team Udayavani, Dec 17, 2021, 11:00 PM IST
ಬೆಳಗಾವಿ: ರಾಜ್ಯದಲ್ಲಿ ಎಂಟು ಮಂದಿಗೆ ಒಮಿಕ್ರಾನ್ ಪತ್ತೆಯಾಗಿದ್ದು ಪರೀಕ್ಷೆ ಮಾಡಿ ಅವರ ಮೂಲಕ ಬೇರೆಯವರಿಗೆ ಹರಡದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿ, ತಾಂತ್ರಿಕ ಸಲಹಾ ಸಮಿತಿ ಜತೆಯೂ ಸಭೆ ನಡೆಸಿ ಯಾವ ರೀತಿಯ ಕ್ರಮ ಕೈಗೊಳ್ಳಬೇಕೆಂಬ ಸಲಹೆ ಪಡೆಯುತ್ತೇವೆ. ಕಡ್ಡಾಯವಾಗಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕಾಗಿದೆ. ಸಾರ್ವಜನಿಕರು ಸಹ ಎಚ್ಚರವಹಿಸಬೇಕು ಎಂದು ಹೇಳಿದರು.
ಸಚಿವ ಬೈರತಿ ಬಸವರಾಜ್ ವಿಚಾರದಲ್ಲಿ ಕಾಂಗ್ರೆಸ್ ಷಡ್ಯಂತ್ರ್ಯ ಮಾಡುತ್ತಿರಬಹುದು. 13 ವರ್ಷದ ಹಿಂದೆ ಬಸವರಾಜ್ ಪರವಾಗಿಯೇ ತೀರ್ಪು ಬಂದಿತ್ತು. ಹೈಕೋರ್ಟ್‌ನಲ್ಲೂ ಪ್ರಕರಣ ಬಾಕಿ ಇದೆ. ಪ್ರತಿಪಕ್ಷ ನಾಯಕರು ಹೇಳಿದಂತೆ ಚರ್ಚೆಗೆ ಅವಕಾಶ ಕೊಡಲು ಬರಲ್ಲ. ಅದೇ ವಿಚಾರ ಅವರಿಗೆ ತಿಳಿಸಿದ್ದೇನೆ ಅಷ್ಟೇ ಎಂದರು.
ಇದನ್ನೂ ಓದಿ:ದೆಹಲಿ: ಮಹಿಳೆಯನ್ನು ಸ್ಕೂಟರ್ ನಲ್ಲೇ ರಸ್ತೆಯುದ್ದಕ್ಕೂ ಎಳೆದೊಯ್ದ ಕಳ್ಳರು
ರಮೇಶ್‌ಕುಮಾರ್ ವಿವಾದಾತ್ಮಕ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಎರಡು ಬಾರಿ ಸ್ಪೀಕರ್ ಆಗಿದ್ದು, ಮೌಲ್ಯಗಳಿಗೆ ರಾಯಭಾರಿ ಆಗಿದ್ದವರು. ನನಗೆ ಅವರ ಬಗ್ಗೆ ವೈಯಕ್ತಿಕ ದ್ವೇಷ ಇಲ್ಲ, ಆದರೆ ಅವರು ಮುಖವಾಡ ಹಾಕಿಕೊಂಡು ಬದುಕುತ್ತಿರುವುದರಲ್ಲಿ ಅನುಮಾನವಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯಕ್ಕೆ ವರ್ಷಾಘಾತ: ಹಲವೆಡೆ ಗುಡ್ಡ ಕುಸಿದು ಸಂಚಾರಕ್ಕೆ ಅಡ್ಡಿ
ದ್ವಿತೀಯ ಪಿಯು ಪರೀಕ್ಷೆ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಲಭ್ಯ
ಕಾಮೆಡ್ ಕೆ ಫಲಿತಾಂಶ ಪ್ರಕಟ: ಟಾಪ್ 10ರಲ್ಲಿ ರಾಜ್ಯದ ಐವರಿಗೆ ಸ್ಥಾನ
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನ ವಿರುದ್ಧದ ಎಫ್ಐಆರ್ ರದ್ದತಿಗೆ ನಕಾರ
ಪಿರಿಯಾಪಟ್ಟಣ : ಕನ್ನಯ್ಯಲಾಲ್ ಹತ್ಯೆ ಖಂಡಿಸಿ ಹಿಂದೂ ಜಾಗರಣಾ ವೇದಿಕೆ ಪ್ರತಿಭಟನೆ