ವರ್ಷ ಒಂದು ಕಳೆದರೂ ರಸ್ತೆ ಕಾಮಗಾರಿ ಅಪೂರ್ಣ: ಸಾರ್ವಜಕರಿಂದ ಹಿಡಿಶಾಪ

Team Udayavani, Oct 5, 2020, 3:08 PM IST

ವರ್ಷ ಒಂದು ಕಳೆದರೂ ರಸ್ತೆ ಕಾಮಗಾರಿ ಅಪೂರ್ಣ: ಸಾರ್ವಜಕರಿಂದ ಹಿಡಿಶಾಪ

ಅಡಹಳ್ಳಿ: ಅಥಣಿ ತಾಲೂಕಿನ ಕೊಕಟನೂರ-ಕೊಡಗಾನೂರ ಗ್ರಾಮ ಹಾಗೂ ಯಲ್ಲಮ್ಮನವಾಡಿ-ಐಗಳಿ ಕ್ರಾಸ್‌ ರಸ್ತೆ ಡಾಂಬರಿಕರಣ ಹಾಗೂ ದುರಸ್ತಿಗಾಗಿ ಅಡಿಗಲ್ಲಾಗಿ ಒಂದು ವರ್ಷ ಕಳೆದರೂ ಇನ್ನೂ ಕಾಮಗಾರಿ ಪೂರ್ಣವಾಗದಿರುವುದಕ್ಕೆ ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ.

ಕಳೆದ ವರ್ಷ 2019-20ರಲ್ಲಿ ಈ ಎರಡು ರಸ್ತೆ ಕಾಮಗಾರಿಗೆ ಶಾಸಕ ಮಹೇಶ ಕುಮಠಳ್ಳಿ ಗುದ್ದಲಿ ಪೂಜೆ ನೆರವೇರಿಸಿದ್ದರು. ಬಹು ದಿನಗಳ ಬೇಡಿಕೆಯಾಗಿದ್ದ ಈ ರಸ್ತೆಗಳ ನಿರ್ಮಾಣ ಸುದ್ದಿ ಕೇಳಿ ಈ ಭಾಗದ ರೈತರು ಹಾಗೂ ಸುತ್ತ-ಮುತ್ತಲಿನ ಗ್ರಾಮಸ್ಥರು ಸಂತೋಷಗೊಂಡಿದ್ದರು, ಆದರೆ ವರ್ಷ ಕಳೆದರೂ ಈ ಕಾಮಗಾರಿಗಳು ಇನ್ನೂ ಪೂರ್ಣಗೊಳ್ಳದ ಕಾರಣ ಈಗ ಕೆಸರುಗದ್ದೆಯಂತಾಗಿರುವ ರಸ್ತೆ ಮೇಲೆ ಸಂಚರಿಸುವ ವಾಹನ ಸವಾರರ ಗತಿ ಅಧೋಗತಿಯಾಗಿದೆ.

ಕೆ,ಆರ್‌,ಐ,ಡಿ,ಎಲ್‌ ಮೇಲೆ ಜನ ಗರಂ: ಯಲ್ಲಮ್ಮನವಾಡಿಯಿಂದ ಐಗಳಿ ಕ್ರಾಸ್‌ವರೆಗಿನ 2.3 ಕಿ.ಮೀ ರಸ್ತೆಗೆ 98.44 ಲಕ್ಷ ಮೊತ್ತದಲ್ಲಿ ಹಾಗೂ ಕೊಕಟನೂರದಿಂದ ಕೊಡಗಾನೂರ ಗ್ರಾಮದವರೆಗೆ 3.25 ಕಿ.ಮೀ ರಸ್ತೆಗೆ 1.26 ಕೋಟಿ ಮೊತ್ತದಲ್ಲಿ ಕರ್ನಾಟಕ ಗ್ರಾಮಾಭಿವೃದ್ಧಿ ನಿಗಮ (ಕೆ,ಆರ್‌,ಐ,ಡಿ,ಎಲ್‌-ಹಿಂದಿನ ಭೂಸೇನಾ ನಿಗಮ) ಈ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದು, ಇಲ್ಲಿಯವರೆಗೆ ಮುರಂ ಹಾಕಿ ಕೈಬಿಡಲಾಗಿದ್ದು, ಡಾಂಬರೀಕರಣ ಮಾಡುವ ಗೋಜಿಗೆ ಹೋಗಿಲ್ಲ. ಮಳೆ ಸುರಿದು ರಸ್ತೆಯೆಲ್ಲ ಕೆಸರುಗದ್ದೆಯಂತಾಗಿ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ.

ಇದನ್ನೂ ಓದಿ:ಉಪಚುನಾವಣೆ ಹೊಸ್ತಿಲಲ್ಲಿ ಸಿಬಿಐ ದಾಳಿ: ರಾಜಕೀಯ ಚದುರಂಗದಾಟದಲ್ಲಿ ಲಾಭ ಯಾರಿಗೆ?

ಈ ರಸ್ತೆ ಮೇಲೆ ಸಂಚರಿಸುವ ದ್ವಿಚಕ್ರವಾಹನ ಸವಾರರು ಜಾರಿ ಬಿದ್ದು ಗಾಯಗೊಂಡ ಉದಾಹರಣೆಗಳಿವೆ. ಕೂಡಲೇ ಕಾಮಗಾರಿ ಪ್ರಾರಂಭಿಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂಬುದು ಸಾರ್ವಜನಿಕರ ಆಗ್ರಹವಾಗಿದೆ.

ಇಲ್ಲಿಯ ಜನರ ಒತ್ತಾಯದ ಮೇರೆಗೆ ಶಾಸಕರು ಕಾಮಗಾರಿಗೆ ಚಾಲನೆ ನೀಡಿದ್ದರು. ಆದರೆ ಆ ಎರಡು ಕಾಮಗಾರಿಗಳಿಗೆ ಮಂಜೂರಾತಿ ಈಗ ದೊರೆತಿದ್ದು, ಮಳೆಗಾಲ ಇರುವುದರಿಂದ ಡಾಂಬರೀಕರಣ ಮಾಡಿಲ್ಲ. ಮಳೆ ಕಡಿಮೆಯಾದ ಕೂಡಲೇ ಕಾಮಗಾರಿ ಪ್ರಾರಂಭಿಸಿ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗುವುದು.
– ಎ.ಜಿ. ಷಣ್ಮುಗಪ್ಪ, ಸಹಾಯಕ ನಿರ್ದೇಶಕರು, ಕೆಆರ್‌ಐಡಿಎಲ್‌-ಅಥಣಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.