ಹಳ್ಳಿ ಮುತ್ತುಗಳಿಗೆ ವಿದ್ಯೆಯೇ ಶಕ್ತಿ

ವಿದ್ಯಾನಿಧಿ ಬಳಿಕ ಈಗ ವಿದ್ಯಾಶಕ್ತಿ ಸಿಂಪಿಗರ ಮಕ್ಕಳಿಗೂ ವಿಸ್ತರಣೆ

Team Udayavani, Feb 18, 2023, 5:50 AM IST

ಹಳ್ಳಿ ಮುತ್ತುಗಳಿಗೆ ವಿದ್ಯೆಯೇ ಶಕ್ತಿ

ಮುಖ್ಯಮಂತ್ರಿಗಳ “ರೈತ ವಿದ್ಯಾನಿಧಿ’ಯ ಭಾರಿ ಯಶ ಸ್ಸಿನ ಹಿನ್ನೆಲೆಯಲ್ಲಿ ಹೆಚ್ಚು-ಕಡಿಮೆ ಅಷ್ಟೇ ಜನ ಪ್ರಿಯತೆ ತಂದುಕೊಡುವ “ಮುಖ್ಯಮಂತ್ರಿ ವಿದ್ಯಾಶಕ್ತಿ’ ಯೋಜನೆ ಯನ್ನು ಪ್ರಕಟಿಸಲಾಗಿದೆ. ಇದು ಕೇವಲ ರೈತರ ಮಕ್ಕಳಿಗಲ್ಲ; ರಾಜ್ಯದ ಸರಕಾರಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ಎಲ್ಲ ವಿದ್ಯಾರ್ಥಿಗಳಿಗೆ ಶಿಕ್ಷಣ ಸಂಪೂರ್ಣ ಉಚಿತವಾಗಲಿದೆ.

ವಿದ್ಯಾನಿಧಿ ಅಡಿ ಪ್ರಸ್ತುತ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಈಗ ಅದರ ಮುಂದುವರಿದ ಭಾಗವಾಗಿ “ವಿದ್ಯಾಶಕ್ತಿ’ ಅಡಿ ಸರಕಾರಿ ಪದವಿಪೂರ್ವ ಮತ್ತು ಪದವಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ಎಲ್ಲ ವಿದ್ಯಾರ್ಥಿಗಳಿಗೆ ಶುಲ್ಕದಿಂದ ಸಂಪೂರ್ಣ ವಿನಾಯ್ತಿ ನೀಡಲು ನಿರ್ಧರಿಸಲಾಗಿದೆ. ಇದರಿಂದ ರಾಜ್ಯದ ಸುಮಾರು 8 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ ಆಗಲಿದೆ ಎಂದು ಅಂದಾಜಿಸಲಾಗಿದೆ.

ರಾಜ್ಯದ ಎಲ್ಲ ಪ್ರೌಢಶಾಲಾ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಅನುಕೂಲವಾಗುವ ದೃಷ್ಟಿಯಿಂದ ಈ ಯೋಜನೆ ಪ್ರಾರಂಭಿಸಲಾಗಿದೆ. ಪ್ರಸ್ತುತ ವಿದ್ಯಾನಿಧಿ ಯೋಜನೆ ಅಡಿ 10.32 ಲಕ್ಷ ರೈತ ಮಕ್ಕಳಿಗೆ 725 ಕೋಟಿ ರೂ. ನೀಡಲಾಗುತ್ತಿದೆ. ಇದನ್ನು ಕೃಷಿ ಕೂಲಿ ಕಾರ್ಮಿಕರು, ನೇಕಾರರು, ಮೀನುಗಾರರು, ಹಳದಿ ನಾಮಫ‌ಲಕ ಹೊಂದಿದ ಟ್ಯಾಕ್ಸಿ ಮತ್ತು ಆಟೋ ಚಾಲಕರ ಮಕ್ಕಳಿಗೂ ವಿಸ್ತರಿಸಿದ್ದು, ಹೆಚ್ಚುವರಿ 3 ಲಕ್ಷ ವಿದ್ಯಾರ್ಥಿಗಳು ಸೇರಿದ್ದಾರೆ. ಜತೆಗೆ ಪ್ರಸಕ್ತ ಸಾಲಿನಿಂದ ಸಿಂಪಿಗರ ಮಕ್ಕಳಿಗೂ ಈ ಯೋಜನೆ ವಿಸ್ತರಿಸಲಾಗಿದೆ.

ರಾಜ್ಯದ ಎಲ್ಲ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಆರ್ಥಿಕ ನೆರವಿಗಾಗಿ “ಅಕಾಡೆಮಿಕ್‌ ಬ್ಯಾಂಕ್‌ ಆಫ್ ಕ್ರೆಡಿಟ್ಸ್‌’ ಮತ್ತು “ಡಿಜಿಲಾಕರ್‌’ ವ್ಯವಸ್ಥೆ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗುವುದು. ಪಿಎಚ್‌ಡಿ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯಗಳಲ್ಲಿ ಸರಳ ಮತ್ತು ಪಾರದರ್ಶಕ ಪ್ರವೇಶಾವಕಾಶಕ್ಕೆ ಏಕರೂಪ ವ್ಯವಸ್ಥೆ ಕಲ್ಪಿಸಲಾ ಗುವುದು. ಪ್ರಸಕ್ತ ಸಾಲಿನಲ್ಲಿ ಚಿಕ್ಕಮಗಳೂರಿನಲ್ಲಿ ಗರಿಷ್ಠ ತಂತ್ರಜ್ಞಾನ ಬಳಕೆ ಹಾಗೂ ಕನಿಷ್ಠ ಮಾನವ ಸಂಪನ್ಮೂಲ ಒಳಗೊಂಡ ನೂತನ ವಿವಿ ಸ್ಥಾಪಿಸಲಾಗುವುದು. ಶಿಗ್ಗಾವಿ ತಾಲೂಕಿನ ಬಂಕಾಪುರ ದಲ್ಲಿರುವ ಪಾಲಿಟೆಕ್ನಿಕ್‌ ಅನ್ನು ಸರಕಾರಿ ಎಂಜಿನಿಯರಿಂಗ್‌ ಕಾಲೇಜು ಆಗಿ ಉನ್ನತೀಕರಿಸಲಾಗುವುದು.

8, 9ನೇ ತರಗತಿಗೆ “ಅಭ್ಯುದಯ’: ರಾಜ್ಯದಲ್ಲಿನ ಶಾಲಾ- ಕಾಲೇಜು ಗಳು, ವಿಶೇಷವಾಗಿ ಅಭಿವೃದ್ಧಿ ಆಕಾಂಕ್ಷಿ ತಾಲೂಕುಗಳಲ್ಲಿ ಶಿಕ್ಷಣ ಸಂಸ್ಥೆಗಳ ಮೂಲಸೌಕರ್ಯಕ್ಕೆ ಬಜೆಟ್‌ನಲ್ಲಿ ಒತ್ತು ನೀಡಲಾಗಿದೆ. ಇದರ ಭಾಗವಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫ‌ಲಿತಾಂಶ ಪಡೆಯುವ ಉದ್ದೇಶದಿಂದ 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಜೆ-ಪಾಲ್‌ ಲ್ಯಾಬ್‌ ಸಹಯೋಗದಲ್ಲಿ ಪರಿಹಾರಾತ್ಮಕ ಚಟುವಟಿಕೆ “ಅಭ್ಯುದಯ’ ಕಾರ್ಯಕ್ರಮ ಜಾರಿಗೊಳಿಸಲಾಗುತ್ತಿದೆ.

“ವಿವೇಕ’ ಕೊಠಡಿಗಳು: “ವಿವೇಕ’ ಯೋಜನೆ ಅಡಿ 7,601 ಶಾಲಾ- ಕಾಲೇಜುಗಳಲ್ಲಿ ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ 1,194 ಕೋಟಿ ರೂ., ಇಲಾಖೆಯ ಇತರೆ ಯೋಜನೆಗಳಡಿ 1,955 ಕೊಠಡಿಗಳ ನಿರ್ಮಾಣಕ್ಕೆ 382 ಕೋಟಿ ಅನು ಮೋದಿಸಲಾಗಿದೆ. ಉತ್ತಮ ಮೂಲಸೌಕರ್ಯ ಮತ್ತು ಸೂಕ್ತ ಕಲಿಕಾ ಸಂಪನ್ಮೂಲಗಳನ್ನು ಒದಗಿಸಲು ಹೊಸ ಕೇಂದ್ರ ಪುರಸ್ಕೃತ ಯೋಜನೆ “ಪಿಎಂ ಶ್ರೀ’ ಅನ್ನು 100 ಕೋಟಿ ವೆಚ್ಚದಲ್ಲಿ ಅನುಷ್ಠಾನ ಗ ೊಳಿಸಲು ಉದ್ದೇಶಿಸಲಾಗಿದೆ. ನರೇಗಾ ಸಹಯೋಗದಲ್ಲಿ 7,750 ಶೌಚಾಲಯಗಳನ್ನು ನಿರ್ಮಿಸಲು ಉದ್ದೇಶಿಸಿದ್ದು, ಈ ಪೈಕಿ 2023ರ ಅಂತ್ಯಕ್ಕೆ 2,169 ಶೌಚಾಲಯಗಳ ನಿರ್ಮಾಣ ಕಾರ್ಯ ಪೂರ್ಣಗೊಳಿಸಲಾಗುತ್ತಿದೆ. ಉಳಿದ 5,581 ಶೌಚಾಲಯಗಳನ್ನು 2023-24ನೇ ಸಾಲಿನಲ್ಲಿ ನಿರ್ಮಿಸಲಾಗುತ್ತಿದೆ.

ಪಾಲಿಟೆಕ್ನಿಕ್‌ಗಳಿಗೆ “ವೃದ್ಧಿ’: ಜಿಲ್ಲೆಗೊಂದರಂತೆ ಅತಿ ಹೆಚ್ಚು ದಾಖಲಾತಿ ಹೊಂದಿರುವ ಸರಕಾರಿ ಪ್ರಥಮದರ್ಜೆ ಮತ್ತು ಪಾಲಿಟೆಕ್ನಿಕ್‌ಗಳಿಗೆ “ವೃದ್ಧಿ’ ಯೋಜನೆ ಘೋಷಿಸಲಾಗಿದೆ. ಇದರಡಿ ತಲಾ ಎರಡು ಕೋಟಿಯಂತೆ 124 ಕೋಟಿ ಒದಗಿಸಲಾಗುತ್ತದೆ. ಅದರಿಂದ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ, ಅತ್ಯುತ್ತಮ ಶಿಕ್ಷಣ ಸಂಸ್ಥೆಗಳನ್ನಾಗಿ ರೂಪಿಸಲಾಗುವುದು. ಈ ಮಧ್ಯೆ ತುಮಕೂರಿನ ಚಿಕ್ಕನಾಯನಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್‌ ಆರಂಭಿಸಲಾಗುತ್ತಿದೆ.

ವಿವಿಗಳಿಗೆ 50 ಲಕ್ಷ ಪ್ರೋತ್ಸಾಹಧನ: ಸಾರ್ವಜನಿಕ ವಿವಿಗಳ ಆಡಳಿತ ವ್ಯವಸ್ಥೆ ಉತ್ತಮಪಡಿಸಲು 10 ಸುಶಾಸನ ಸೂಚ್ಯಂಕ ರಚಿಸಲಾಗಿದ್ದು, ಅದರನ್ವಯ ಅತ್ಯುತ್ತಮ ಸಾಧನೆ ಮಾಡುವ ವಿವಿಗಳಿಗೆ ತಲಾ 50 ಲಕ್ಷ ಪ್ರೋತ್ಸಾಹಧನ ನೀಡಲಾಗುವುದು.

ಕೆಐಟಿಗೆ 50 ಕೋಟಿ ಮೀಸಲು: ಐಐಟಿ ಮಾದರಿಯಲ್ಲಿ ಕರ್ನಾಟಕ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿ ಸ್ಥಾಪನೆಗೆ ಸರಕಾರ 50 ಕೋಟಿ ರೂ. ಮೀಸಲಿಟ್ಟಿದೆ. ಕಳೆದ ಆಯವ್ಯಯದಲ್ಲಿ ಬೆಂಗಳೂರು, ಹಾವೇರಿ, ಹಾಸನ, ಕೆ.ಆರ್‌. ಪೇಟೆ, ತಳ್ಕಲ್‌, ರಾಮನಗರ, ಕಾರವಾರ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜುಗಳನ್ನು ಕೆಐಟಿಗಳಾಗಿ ಪರಿವರ್ತಿಸಲು ಗುರುತಿಸಲಾಗಿತ್ತು. ಇದಕ್ಕಾಗಿ ಪ್ರೊ. ಸಡಗೋಪನ್‌ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಲಾಗಿತ್ತು. ಅದು ವರದಿ ಸಲ್ಲಿಸಿದ್ದು, ಕೆಐಟಿಗಳ ಅಭಿವೃದ್ಧಿಗೆ ಹಲವು ಶಿಫಾರಸು ಮಾಡಿದೆ. ಅದರನ್ವಯ ಕ್ರಮ ಕೈಗೊಳ್ಳಲು 50 ಕೋಟಿ ರೂ. ಈ ಸಲದ ಬಜೆಟ್‌ನಲ್ಲಿ ನೀಡಲಾಗಿದೆ.

“ಪಾರಂಪರಿಕ ಜಿಲ್ಲೆ’: ಬೆಂಗಳೂರು ನಗರದ ಕೇಂದ್ರ ಭಾಗದ 5 ಕಿ.ಮೀ. ವ್ಯಾಪ್ತಿಯಲ್ಲಿನ ಪಾರಂಪರಿಕ ಮತ್ತು ಶೈಕ್ಷಣಿಕ ಸಂಸ್ಥೆಗಳನ್ನು ಹೊಂದಿರುವ ಪ್ರದೇಶವನ್ನು “ಪಾರಂಪರಿಕ ಮತ್ತು ಶೈಕ್ಷಣಿಕ ಜಿಲ್ಲೆ’ಯಾಗಿ ಘೋಷಿಸಲಾಗುವುದು. ಈ ಸಂಬಂಧ ಕಾರ್ಯಸಾಧ್ಯತೆ ಅಧ್ಯಯನ ನಡೆಸಲು ಉದ್ದೇಶಿಸಿದೆ.

“ಬದುಕುವ ದಾರಿ’ “ಯುವಸ್ನೇಹಿ’: ಶಾಲಾ ಶಿಕ್ಷಣದ ನಂತರ ವಿದ್ಯಾಭ್ಯಾಸ ಮುಂದುವರಿಸಲಾಗದ ಯುವಕರಿಗೆ ಐಟಿಐಗಳಲ್ಲಿ 3 ತಿಂಗಳ ವೃತ್ತಿಪರ ಸರ್ಟಿಫಿಕೇಟ್‌ ತರಬೇತಿ ಪಡೆಯಲು “ಬದು ಕುವ ದಾರಿ’ ಯೋಜನೆ ಪ್ರಕಟಿಸಲಾಗಿದ್ದು, ಇದರಡಿ ಮಾಸಿಕ 1,500 ರೂ. ಶಿಷ್ಯವೇತನ ನೀಡಲಾಗುತ್ತದೆ. ಮೂರು ತಿಂಗಳಿಗೆ ಮಾತ್ರ ಇದು ಸೀಮಿತ. ಅದೇ ರೀತಿ, ಪದವಿ ಪೂರೈಸಿ 3 ವರ್ಷಗಳ ನಂತರವೂ ಯಾವುದೇ ಉದ್ಯೋಗ ದೊರೆಯದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹ ನೀಡಲು “ಯುವ ಸ್ನೇಹಿ’ ಯೋಜನೆ ಘೋಷಿಸಿದ್ದು, ಇದರಡಿ ತಲಾ 2 ಸಾವಿರ ರೂ. ಒಂದು ಬಾರಿಯ ಆರ್ಥಿಕ ನೆರವು ನೀಡಲಾಗುವುದು.

ಗ್ರಾಮೀಣ ಮಕ್ಕಳಿಗೆ
ಉಚಿತ ಶಿಕ್ಷಣದ ಗಿಫ್ಟ್
ಗ್ರಾಮೀಣ ಭಾಗದ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳ ಪ್ರತಿಭಾವಂತ ಮಕ್ಕಳನ್ನು “ಹಳ್ಳಿ ಮುತ್ತು’ಗಳು ಎಂದು ಬಣ್ಣಿಸಿರುವ ಬಸವರಾಜ ಬೊಮ್ಮಾಯಿ, ಅದೇ ಹೆಸರಿನಲ್ಲಿ ಆ ಮಕ್ಕಳ ವೃತ್ತಿಪರ ಶಿಕ್ಷಣದ ಸಂಪೂರ್ಣ ಶುಲ್ಕವನ್ನು ಸರಕಾರದಿಮದ ಭರಿಸುವುದಾಗಿ ಪ್ರಕಟಿಸಿದ್ದಾರೆ. “ಹಳ್ಳಿ ಮುತ್ತು’ ಯೋಜನೆ ಅಡಿ ಗ್ರಾಮೀಣ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಶಾಲಾ ಶಿಕ್ಷಣ ಪೂರೈಸುವ 500 ಅತ್ಯುತ್ತಮ ವಿದ್ಯಾರ್ಥಿಗಳಿಗೆ ಸಿಇಟಿ ಮೂಲಕ ಸರಕಾರಿ ಕೋಟಾದಡಿ ಆಯ್ಕೆಯಾದ ವೃತ್ತಿಪರ ಶಿಕ್ಷಣದ ಸಂಪೂರ್ಣ ಶುಲ್ಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಭರಿಸಲಾಗುವುದು ಎಂದಿದ್ದಾರೆ. ಈ ಹಿಂದೆ ಗ್ರಾಮೀಣ ಭಾಗದಲ್ಲಿ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ಮಕ್ಕಳಿಗೆ “ಗ್ರಾಮೀಣ ಕೃಪಾಂಕ’ ಇದ್ದುದನ್ನು ಇಲ್ಲಿ ಸ್ಮರಿಸಬಹುದು.

ಸಿಎಂ “ಕನ್ನಡ ಮಕ್ಕಳ’ ಪ್ರೀತಿ
ಉನ್ನತ ಶಿಕ್ಷಣ ಪಡೆಯಲು ಇರುವ ಭಾಷೆಯ ತೊಡಕು ನಿವಾರಣೆಗೆ ರಾಜ್ಯದ ಎಲ್ಲ ವಿವಿಗಳಲ್ಲಿ ಮತ್ತು ವೃತ್ತಿಪರ ಕೋರ್ಸ್‌ಗಳಲ್ಲಿ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅನುವಾಗುವಂತೆ ಮುಂದಿನ ಒಂದು ವರ್ಷದಲ್ಲಿ ರೆಫ‌ರೆನ್ಸ್‌ ಪುಸ್ತಕಗಳು ಮತ್ತು ಪಠ್ಯ ವಿಷಯಗಳನ್ನು ಭಾಷಾಂತರಿಸಿ ಒದಗಿಸುವುದಾಗಿ ಅವರು ತಿಳಿಸಿದ್ದಾರೆ.

ರಸ್ತೆಗಿಳಿಯಲಿವೆ ಮಕ್ಕಳ ಬಸ್ಸು
ಮಹಿಳಾ ಬಸ್ಸು, ಕಾರ್ಮಿಕರ ಬಸ್ಸುಗಳಂತೆ ಇನ್ಮುಂದೆ “ಮಕ್ಕಳ ಬಸ್ಸು’ಗಳು ರಸ್ತೆಗಿಳಿಯಲಿವೆ. ಇದಕ್ಕಾಗಿ ಸರಕಾರ 100 ಕೋಟಿ ರೂ. ಮೀಸಲಿಟ್ಟಿದೆ. ಈ ಮೊತ್ತದಲ್ಲಿ ಸಾರಿಗೆ ನಿಗಮಗಳಿಗೆ ಹೆಚ್ಚುವರಿಯಾಗಿ ಸಾವಿರ ಬಸ್ಸುಗಳು ಸೇರ್ಪಡೆಗೊಳ್ಳಲಿವೆ. ಅವುಗಳು “ಮಕ್ಕಳ ಬಸ್ಸು’ಗಳಾಗಿ ಕಾರ್ಯಾಚರಣೆ ಮಾಡಲಿವೆ. ಪ್ರಸ್ತುತ 19 ಲಕ್ಷ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಾರ್ವಜನಿಕ ಸೇವೆಗಳನ್ನು ಅವಲಂಬಿಸಿದ್ದಾರೆ. ಈ ಯೋಜನೆಯಿಂದ ಹೆಚ್ಚುವರಿ 2 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ ಆಗಲಿದೆ.

ಪ್ರಮುಖಾಂಶಗಳು
1. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಂದರಂತೆ ಪ್ರತಿ ಶಾಲೆಗೆ 18 ಕೋಟಿ ವೆಚ್ಚದಲ್ಲಿ ನಾರಾಯಣಗುರು ವಸತಿ ಶಾಲೆ ಆರಂಭ
2. 1,282 ಮೆಟ್ರಿಕ್‌ಪೂರ್ವ ವಸತಿ ನಿಲಯಗಳಲ್ಲಿನ 8, 9 ಮತ್ತು 10ನೇ ತರಗತಿಯ ಶೇ. 25ರಷ್ಟು ಅಂದರೆ 10 ಸಾವಿರ ವಿದ್ಯಾರ್ಥಿಗಳಿಗೆ ವಿಜ್ಞಾನ, ಗಣಿತ ವಿಷಯಗಳ ಬಗ್ಗೆ ಬುನಾದಿ ತರಬೇತಿ. 8.50 ಕೋಟಿ ಮೀಸಲು
3. 11 ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಗಳಿಗೆ 596 ಕೋಟಿ ರೂ. ಅನುದಾನ ಘೋಷಣೆ
4. 20 ಹೊಸ ಮೆಟ್ರಿಕ್‌ ನಂತರದ ವಿದ್ಯಾರ್ಥಿ ನಿಲಯಗಳನ್ನು “ಬಿಲ್ಡ್‌ ಟು ಸೂಟ್‌’ ಮಾದರಿಯಲ್ಲಿ ನಿರ್ಮಾಣ
5. ಶಿಕ್ಷಣ ಇಲಾಖೆ ಅಡಿ ಇರುವ 160 ವಿದ್ಯಾರ್ಥಿ ನಿಲಯಗಳನ್ನು ಇಲಾಖೆಗೆ ಹಸ್ತಾಂತರ. ಇದರಿಂದ 1 ಲಕ್ಷ ಹೆಚ್ಚುವರಿ ವಿದ್ಯಾರ್ಥಿಗಳಿಗೆ ಅವಕಾಶ

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.