ಈಗ ಪಾಕ್ ವೈದ್ಯಕೀಯ ಪದವಿ ಮಾನ್ಯತೆಯೂ ರದ್ದು
Team Udayavani, May 1, 2022, 8:25 AM IST
ಹೊಸದಿಲ್ಲಿ: ಪಾಕಿಸ್ಥಾನದಲ್ಲಿ ಪಡೆದಿರುವ ಎಂಬಿಬಿಎಸ್ ಅಥವಾ ದಂತ ವೈದ್ಯ ಪದವಿಗಳಿಗೆ ಭಾರತದಲ್ಲಿ ಮಾನ್ಯತೆ ನೀಡುವುದಿಲ್ಲ ಹಾಗೂ ಅಲ್ಲಿನ ವೈದ್ಯಶಿಕ್ಷಣ ಸಂಸ್ಥೆಗಳಿಂದ ವೈದ್ಯ ಪದವೀಧರರಾಗುವ ಭಾರತೀಯರಿಗೆ ಅಥವಾ ಅನಿವಾಸಿ ಭಾರತೀಯರಿಗೆ ಭಾರತದಲ್ಲಿ ವೈದ್ಯ ವೃತ್ತಿ ಅವಕಾಶ ನೀಡುವುದಿಲ್ಲ ಎಂದು ಭಾರತೀಯ ವೈದ್ಯ ಕೀಯ ಮಂಡಳಿ (ಎನ್ಎಂಸಿ) ಹೇಳಿದೆ.
ಆದರೆ ಇಲ್ಲಿ ಕೆಲವು ವಿನಾಯಿತಿಗಳನ್ನು ಎನ್ಎಂಸಿ ನೀಡಿದೆ. 2018ರ ಡಿಸೆಂಬರ್ಗೂ ಹಿಂದೆ ಹಾಗೂ ಆನಂತರದಲ್ಲಿ ಭಾರತೀಯ ವಿದೇಶಾಂಗ ಇಲಾಖೆಯಿಂದ ಒಪ್ಪಿಗೆ ಪಡೆದು ಪಾಕಿಸ್ಥಾನದಲ್ಲಿ ವೈದ್ಯ ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಳಿಗೆ ಈ ಹೊಸ ನಿಯಮದಿಂದ ವಿನಾಯಿತಿ ನೀಡಲಾಗಿದೆ.
ಅಲ್ಲದೆ ಪಾಕಿಸ್ಥಾನದಲ್ಲಿ ವೈದ್ಯಕೀಯ ಪದವಿಗಳನ್ನು ಪಡೆದ ಅನಂತರ ಭಾರತ ಸರಕಾರದ ಮಾನ್ಯತೆಯ ಮೇರೆಗೆ ಭಾರತಕ್ಕೆ ವಲಸೆ ಬಂದಿರುವವರಿಗೂ ಈ ನಿಯಮ ಅನ್ವಯವಾಗದು ಎಂದು ಎನ್ಎಂಸಿ ತಿಳಿಸಿದೆ.
ಇತ್ತೀಚೆಗೆ ಪಾಕಿಸ್ಥಾನದಲ್ಲಿ ಭಾರತೀಯ ವಿದ್ಯಾರ್ಥಿಗಳು ಪಡೆಯುವ ಉನ್ನತ ವ್ಯಾಸಂಗದ ಪದವಿ ಹಾಗೂ ಯಾವುದೇ ಎಂಜಿನಿಯರಿಂಗ್ ಪದವಿಗಳಿಗೆ ಭಾರತದಲ್ಲಿ ಮಾನ್ಯತೆಯಿಲ್ಲ ಎಂದು ವಿಶ್ವವಿದ್ಯಾನಿಲಯಗಳ ಧನಸಹಾಯ ಆಯೋಗ (ಯುಜಿಸಿ) ಹಾಗೂ ಭಾರತೀಯ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಇತ್ತೀಚೆಗೆ ನೀಡಿದ್ದವು. ಈ ಬಗ್ಗೆ ಪಾಕಿಸ್ಥಾನದ ವಿದೇಶಾಂಗ ಸಚಿವಾಲಯ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಅದರ ಬೆನ್ನಲ್ಲೇ ಎನ್ಎಂಸಿ ಕೂಡ ಅದೇ ರೀತಿಯ ಪ್ರಕಟನೆಯನ್ನು ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು