ಸರ್ಕಾರಿ ಶಾಲೆಗಳ ಸ್ವರೂಪ ಬದಲಿಸಿದ ನರೇಗಾ

ವಿದ್ಯಾರ್ಥಿಗಳ ಆಕರ್ಷಣೆಗೆ ಸಾಕ್ಷಿಯಾದ ಆಟದ ಮೈದಾನ ಅಡುಗೆ ಕೋಣೆ-ಶೌಚಾಲಯಕ್ಕೆ ಹೈಟೆಕ್‌ ಸ್ಪರ್ಶ

Team Udayavani, Jun 10, 2022, 12:57 PM IST

11

ಚಿಕ್ಕೋಡಿ: ಗ್ರಾಮೀಣ ಪ್ರದೇಶದ ಜನರಿಗೆ ಉದ್ಯೋಗ ನೀಡುವ ನರೇಗಾ ಯೋಜನೆ ರಸ್ತೆ, ಚರಂಡಿ, ಮನೆ ನಿರ್ಮಾಣಕ್ಕೆ ಸಹಕಾರಿಯಾಗಿತ್ತು. ಆದರೆ ಇದೀಗ ಸರ್ಕಾರಿ ಶಾಲೆಗಳಿಗೂ ಹೈಟೆಕ್‌ ಟಚ್‌ ನೀಡುತ್ತಿರುವುದರಿಂದ ಮಕ್ಕಳು ಶಾಲೆಯತ್ತ ಆಕರ್ಷಿತರಾಗುತ್ತಿದ್ದಾರೆ.

ತಾಲೂಕಿನ ಬಹುತೇಕ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ(ನರೇಗಾ) ಯೋಜನೆಯಡಿ ಪ್ರಾಥಮಿಕ, ಪ್ರೌಢ ಶಾಲೆಗಳ ಆವರಣದಲ್ಲಿ ಹೈಟೆಕ್‌ ಮೈದಾನ, ಶೌಚಾಲಯ, ಕಾಂಪೌಂಡ್‌, ಅಡುಗೆ ಕೋಣೆ ಹೀಗೆ ಹತ್ತು ಹಲವು ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಮೂಲಕ ಸರ್ಕಾರಿ ಶಾಲೆಗಳ ಸ್ವರೂಪವನ್ನು ನರೇಗಾ ಯೋಜನೆ ಬದಲಾಯಿಸಿದೆ.

ಚಿಕ್ಕೋಡಿ ತಾಲೂಕಿನ 36 ಗ್ರಾಮ ಪಂಚಾಯತಿ ವಾಪ್ತಿಯಲ್ಲಿ ಇಲ್ಲಿಯವರಿಗೆ ನರೇಗಾ ಯೋಜನೆ ಮೂಲಕ ರಸ್ತೆ, ಚರಂಡಿ, ಕೃಷಿ ಹೊಂಡ, ಬದು ನಿರ್ಮಾಣ ಮೊದಲಾದ ಕಾಮಗಾರಿ ಮಾಡಿಸಲಾಗುತ್ತಿತ್ತು. ಆದರೆ ಇದೀಗ ನರೇಗಾ ಯೋಜನೆ ಮೂಲಕ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸುವತ್ತ ಸರ್ಕಾರ ಯೋಜನೆ ರೂಪಿಸಿದ್ದು, ಇದರಿಂದ ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳು ಸುಂದರ ಹಾಗೂ ಮಾದರಿ ಶಾಲೆಗಳಾಗಿ ರೂಪುಗೊಳ್ಳುತ್ತಿವೆ.

ಚಿಕ್ಕೋಡಿ ತಾಲೂಕಿನ ಜೋಡಕುರಳಿ, ಕರಗಾಂವ, ನಾಗರಳಾ, ನವಲಿಹಾಳ, ಪಟ್ಟಣಕುಡಿ, ಬಂಬಲವಾಡ, ಬೆಳಕೂಡ, ಚಿಕ್ಕಲವಾಳ, ಹತ್ತರವಾಟ, ಚಿಂಚಣಿ, ಹಿರೇಕೊಡಿ, ಜಾಗನೂರ, ಕರೋಶಿ, ಕೇರೂರ, ನಾಯಿಂಗ್ಲಜ್‌, ಶಿರಗಾಂವ, ಉಮರಾಣಿ, ವಡ್ರಾಳ, ಮುಗಳಿ, ಕೊಥಳಿ, ಖಡಕಲಾಟ ಹೀಗೆ ಮುಂತಾದ ಗ್ರಾಮ ಪಂಚಾಯತಿ ವ್ಯಾಪ್ತಿಯ ಸರ್ಕಾರಿ ಶಾಲೆಗಳು ಅಭಿವೃದ್ಧಿ ಹೊಂದುತ್ತಿವೆ.

ಮೊದಲ ಹಂತದಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿ ಕಾಮಗಾರಿ ಆರಂಭಿಸಿದ ಸರ್ಕಾರ ಗ್ರಾಮೀಣ ಪ್ರದೇಶದಲ್ಲಿ ಸುಮಾರು 1.5 ಲಕ್ಷ ಮಾನವ ದಿನಗಳ ಕೆಲಸ ಸೃಜಿಸಿವೆ. ಖಾಸಗಿ ಶಾಲೆಗಳ ಮುಂದೆ ಸರ್ಕಾರಿ ಶಾಲೆಗಳು ಅಭಿವೃದ್ಧಿ ಕಾಣುತ್ತಿಲ್ಲ ಎಂಬ ಕೂಗು ಇಂದು ಸುಳ್ಳಾಗಿದೆ. ನರೇಗಾ ಯೋಜನೆ ಮೂಲಕ ಅಭಿವೃದ್ಧಿ ಕಾಮಗಾರಿಯಿಂದ ಸರ್ಕಾರಿ ಶಾಲೆಗಳ ಸ್ವರೂಪ ತೀವ್ರವಾಗಿ ಬದಲಾವಣೆಗೊಳ್ಳುತ್ತಿವೆ.

ಸಾಮಾಜಿಕ ಮೂಲ ಸೌಕರ್ಯಗಳನ್ನು ಒದಗಿಸುವ ದೃಷ್ಟಿಯಿಂದ ಚಿಕ್ಕೋಡಿ ತಾಲೂಕಾ ಪಂಚಾಯತಿ ಅಧಿಕಾರಿಗಳ ಪರಿಶ್ರಮ ಹಾಗೂ ಆಯಾ ಗ್ರಾಮ ಪಂಚಾಯತಿ ಅಧಿಕಾರಿಗಳ ಮೇಲೆ ನಿಗಾ ವಹಿಸಿ ಮೊದಲ ಹಂತದಲ್ಲಿ ಅಂದಾಜು ಶೇ 90 ರಷ್ಟ್ರು ಕಾಮಗಾರಿ ಮುಕ್ತಾಯಗೊಂಡಿದೆ. ಕಳೆದ 2021 ಮತ್ತು 2022 ನೇ ಸಾಲಿನಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿ ಕಾಮಗಾರಿ ಮಾಡುವ ದಿಸೆಯಲ್ಲಿ 248 ಶಾಲೆಗಳಲ್ಲಿ 15.63 ಕೋಟಿ ರೂ ಕ್ರಿಯಾ ಯೋಜನೆ ಸರ್ಕಾರಕ್ಕೆ ಸಲ್ಲಿಸಲಾಗಿತ್ತು.

ಉತ್ತಮ ಆಟದ ಮೈದಾನ: ನಗರ ಪ್ರದೇಶಕ್ಕೆ ಸೀಮಿತವಾಗಿದ್ದ ಹೈಟೆಕ್‌ ಮೈದಾನಗಳು ನರೇಗಾ ಮೂಲಕ ಗ್ರಾಮೀಣ ಪ್ರದೇಶದಲ್ಲಿ ನಿರ್ಮಾಣಗೊಂಡಿವೆ. 25 ಶಾಲೆಗಳಲ್ಲಿ ಬಾಸ್ಕೆಟ್‌ ಬಾಲ್‌ ಅಂಕಣ, ಮಕ್ಕಳು ಪ್ರಾರ್ಥನೆ ಮಾಡಲು 45 ಪೇವರ್‌ ಬ್ಲಾಕ್‌ ಅಂಕಣಗಳು ರೂಪುಗೊಂಡಿವೆ.

ಮೊದಲ ಹಂತದಲ್ಲಿ ಶಾಲಾ ಮೈದಾನ-25, ಶಾಲಾ ಶೌಚಾಲಯ-57, ಕಾಂಪೌಂಡ್‌ -25, ಅಡುಗೆ ಕೋಣೆ-30, ಪೇವರ ಬ್ಲಾಕ್‌ ಅಂಕಣ-45, ಶಾಲೆಗಳ ಗೋಡೆಗಳಿಗೆ ಬಣ್ಣ ಬಳಿಯುವಿಕೆ-18 ಹೀಗೆ ಸದ್ಯ 5.41 ಕೋಟಿ ರೂ ಖರ್ಚಾಗಿದೆ. ಎರಡನೆ ಹಂತದ ಶಾಲೆಗಳ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ ಎಂದು ನರೇಗಾ ಯೋಜನೆ ಚಿಕ್ಕೋಡಿ ಸಹಾಯಕ ನಿರ್ದೇಶಕ ಶಿವಾನಂದ ಶಿರಗಾಂವೆ ಪತ್ರಿಕೆಗೆ ಮಾಹಿತಿ ನೀಡಿದರು.

ನರೇಗಾ ಯೋಜನೆ ಮೂಲಕ ಶಿಕ್ಷಣ ಇಲಾಖೆಗೆ ದೊಡ್ಡ ಮಟ್ಟದಲ್ಲಿ ಅನುದಾನ ಖರ್ಚು ಮಾಡಲಾಗುತ್ತಿದೆ. ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಎಂದಿಗೂ ಅಭಿವೃದ್ಧಿ ಕಂಡಿರಲ್ಲಿಲ್ಲ, ಆದರೆ ಸದ್ಯ ತಾಲೂಕಿನಲ್ಲಿ ನರೇಗಾ ಯೋಜನೆ ಮೂಲಕ ಶಾಲೆಗಳ ಸ್ಥಿತಿ ಭಾರಿ ಬದಲಾವಣೆಗೊಂಡಿವೆ. ಆಟದ ಮೈದಾನ, ಶೌಚಾಲಯ, ಅಡುಗೆ ಕೋಣೆ ಹೀಗೆ ಸರ್ಕಾರಿ ಶಾಲೆಗಳು ಹೈಟೆಕ್‌ ಮಾದರಿಯಲ್ಲಿ ರೂಪೂಗೊಂಡಿವೆ.    –ಬಿ.ಎ.ಮೇಕನಮರಡಿ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಚಿಕ್ಕೋಡಿ

ಸರ್ಕಾರದ ಆದೇಶ ಹಾಗೂ ಬೆಳಗಾವಿ ಜಿಲ್ಲಾ ಪಂಚಾಯತಿ ಸಿಇಒ ಸಾಹೇಬರ ಮಾರ್ಗದರ್ಶನದಿಂದ ಚಿಕ್ಕೋಡಿ ತಾಲೂಕಿನ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಮಾಡಲಾಗುತ್ತಿದೆ. ನರೇಗಾ ಯೋಜನೆ ಶಾಲೆಗಳ ಸರ್ವತೋಮುಖ ಅಭಿವೃದ್ಧಿಗೆ ಅನುಕೂಲವಾಗಿದೆ.   –ನಿಂಗಪ್ಪ ಮಸಳಿ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ, ಚಿಕ್ಕೋಡಿ 

-ಮಹಾದೇವ ಪೂಜೇರಿ

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.