ಆರ್ಯಾಪು: ತೋಡಿನ ಹೂಳೆತ್ತಿದ ಮಹಿಳೆಯರು

ನರೇಗಾ ಯೋಜನೆ ಸದ್ವಿನಿಯೋಗ

Team Udayavani, Jul 4, 2020, 5:16 AM IST

ಆರ್ಯಾಪು: ತೋಡಿನ ಹೂಳೆತ್ತಿದ ಮಹಿಳೆಯರು

ಪುತ್ತೂರು: ನರೇಗಾ ಯೋಜನೆ ಮೂಲಕ ಮಹಿಳಾ ತಂಡದ ಸದಸ್ಯರು ಸೇರಿ ಮಳೆ ನೀರು ಹರಿದು ಹೋಗುವ ತೋಡಿನ ಹೂಳೆತ್ತುವ ಮೂಲಕ ಗಮನ ಸೆಳೆದಿದ್ದಾರೆ. ಆರ್ಯಾಪು ಗ್ರಾ.ಪಂ. ವ್ಯಾಪ್ತಿಯ ಕಾರ್ಪಾಡಿ ಸರೋವರ ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯರ ಈ ಹೊಸ ಪ್ರಯತ್ನ ಯಶಸ್ವಿಯಾಗಿದೆ.

ಮಹಿಳಾ ತಂಡ
ಆರ್ಯಾಪು ಗ್ರಾ.ಪಂ. ವ್ಯಾಪ್ತಿಯ ಕಾರ್ಪಾಡಿ ಸರೋವರ- ಸಂಜೀವಿನಿ ಗ್ರಾಮ ಪಂಚಾಯತ್‌ ಮಟ್ಟದ ಮಹಿಳಾ ಒಕ್ಕೂಟದ ಸದಸ್ಯರು ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ಸಣ್ಣ ತೋಡಿನಲ್ಲಿ ತುಂಬಿದ್ದ ಹೂಳು, ಹುಲ್ಲು ಹಾಗೂ ಪೊದೆಗಳನ್ನು ತೆಗೆದು ಮಳೆ ನೀರು ಹರಿಯಲು ವ್ಯವಸ್ಥೆ ಮಾಡಿದ್ದಾರೆ. ಒಂದೇ ದಿನದಲ್ಲಿ ಸುಮಾರು 200 ಮೀ. ದೂರವನ್ನು ಸ್ವಚ್ಛಗೊಳಿಸಿದ್ದಾರೆ.

ಒಕ್ಕೂಟದ ಅಧ್ಯಕ್ಷೆ ಅಂಬಿಕಾ ರಮೇಶ್‌, ಎನ್‌ಆರ್‌ಎಲ್‌ಎಂನ ನಯನಾ, ಅವನಿ ಗುಂಪಿನ ಅಧ್ಯಕ್ಷೆ ಲಲಿತಾ, ಸದಸ್ಯರಾದ ಭಾರತಿ, ಶಾಲಿನಿ, ಜಯಂತಿ, ವೇದಾವತಿ, ಲೀಲಾವತಿ, ಚಂದ್ರಕಲಾ, ವನಿತಾ, ಗಿರಿಜಾ, ಸುಮಲತಾ, ಇಂದಿರಾ, ಯಮುನಾ ಹಾಗೂ ಗೀತಾ ಸಹಿತ ಒಟ್ಟು ಒಕ್ಕೂಟದ 14 ಮಂದಿ ಪಾಲ್ಗೊಂಡಿದ್ದರು.

ತಾಲೂಕಿನಲ್ಲೇ ಪ್ರಥಮ
ಉದ್ಯೋಗ ಖಾತರಿ ಯೋಜನೆ ಮೂಲಕ ಮಹಿಳೆಯರು ಉದ್ಯೋಗ ಚೀಟಿ ಮಾಡಿಸಿಕೊಂಡು ಅದರ ಮೂಲಕ ಸಾರ್ವಜನಿಕ ಕೆಲಸದಲ್ಲಿ ತೊಡಗಿ ರುವುದು ಇದೇ ಪ್ರಥಮ. ಉದ್ಯೋಗ ಚೀಟಿ ಹೊಂದಿರುವವರು ಉದ್ಯೋಗ ಖಾತರಿ ಯೋಜನೆಯಲ್ಲಿ ಕೆಲಸ ಮಾಡಲು ಅರ್ಹರಾಗಿದ್ದು, ಖಾತೆಗೆ ಹಣ ಜಮೆಯಾಗುತ್ತದೆ. ದಿನವೊಂದಕ್ಕೆ ಕನಿಷ್ಠ ರೂ. 275ರಂತೆ ವೇತನ ಪಾವತಿಸಲಾಗುತ್ತಿದೆ.

ಗಿಡ ನೆಡುವ ಗುರಿ
ಮುಂದಿನ ದಿನಗಳಲ್ಲಿ ಒಕ್ಕೂಟದ ವತಿಯಿಂದ ಇಂಗು ಗುಂಡಿ, ಗೇರು ಸಸಿ ನೆಡುವುದು ಸಹಿತ ಹಲವು ಸಾರ್ವಜನಿಕ ಕೆಲಸಗಳನ್ನು ನಿರ್ವಹಿಸಲಿದ್ದೇವೆ.
-ಅಂಬಿಕಾ ರಮೇಶ್‌, ಒಕ್ಕೂಟದ ಅಧ್ಯಕ್ಷೆ

ಉತ್ತಮ ಕಾರ್ಯ
ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಮೂಲಕ ತಾಲೂಕಿನಲ್ಲಿ ಪ್ರಥಮ ಬಾರಿಗೆ ಮಹಿಳೆಯರೇ ಹೂಳೆತ್ತಿರುವ ಮಾದರಿ ಕಾರ್ಯ ನಡೆದಿದೆ. ಪ್ರತಿಯೊಬ್ಬರಿಗೆ ರೂ. 275ರಂತೆ ಕೂಲಿ ನೀಡಲಾಗುತ್ತದೆ. ಅವರ ಕೆಲಸ ಪ್ರಮಾಣವನ್ನು ಅವಲಂಬಿಸಿ ಹಣವನ್ನು ಅವರವರ ಖಾತೆ ಜಮೆ ಮಾಡಲಾಗುತ್ತಿದೆ. ಇಂಗು ಗುಂಡಿಗೂ ಅವಕಾಶವಿದ್ದು, ಒಂದು ಗುಂಡಿಗೆ ರೂ. 300ರಂತೆ ನೀಡಲಾಗುತ್ತಿದೆ.
-ನವೀನ್‌ ಭಂಡಾರಿ
ತಾ.ಪಂ. ಕಾರ್ಯನಿರ್ವಹಣಾಧಿಕಾರಿ

ಟಾಪ್ ನ್ಯೂಸ್

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಕೊಚ್ಚಿ ಏರ್‌ಪೋರ್ಟಲ್ಲಿ ಶಬರಿಮಲೆ ದೇಗುಲ ಸಹಾಯಕೇಂದ್ರ

ಕೊಚ್ಚಿ ಏರ್ ಪೋರ್ಟ್ ನಲ್ಲಿ ಶಬರಿಮಲೆ ದೇಗುಲದ ಸಹಾಯಕೇಂದ್ರ

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್‌

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್‌

Param-Bir-Singh

ಐಪಿಎಸ್‌ ಅಧಿಕಾರಿ ಪರಂಬೀರ್‌ ಸಿಂಗ್‌ ವಿರುದ್ಧ ಶಿಸ್ತಿನ ಕ್ರಮ?ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವ್ಯಾಪ್ತಿ ಸಣ್ಣದಾದರೂ ಸಮಸ್ಯೆ ಬಗೆಹರಿದಿಲ್ಲ

ವ್ಯಾಪ್ತಿ ಸಣ್ಣದಾದರೂ ಸಮಸ್ಯೆ ಬಗೆಹರಿದಿಲ್ಲ

ವಿದ್ಯಾರ್ಥಿಗಳಲ್ಲಿ ಫಿಟ್‌ನೆಸ್‌ ಸಮಸ್ಯೆ! 2 ವರ್ಷಗಳಿಂದ ಮೈದಾನ ಆಟದ ಪಾಠ ಸ್ತಬ್ಧ

ವಿದ್ಯಾರ್ಥಿಗಳಲ್ಲಿ ಫಿಟ್‌ನೆಸ್‌ ಸಮಸ್ಯೆ! 2 ವರ್ಷಗಳಿಂದ ಮೈದಾನ ಆಟದ ಪಾಠ ಸ್ತಬ್ಧ

ಶ್ರೀ ಕ್ಷೇತ್ರ ಧರ್ಮಸ್ಥಳ ಇಂದಿನಿಂದ ಲಕ್ಷದೀಪೋತ್ಸವ

ಶ್ರೀ ಕ್ಷೇತ್ರ ಧರ್ಮಸ್ಥಳ ಇಂದಿನಿಂದ ಲಕ್ಷದೀಪೋತ್ಸವ

ಡಾ| ಹೆಗ್ಗಡೆ: ದೃಷ್ಟಿ -ಸೃಷ್ಟಿ ಗ್ರಂಥ ಲೋಕಾರ್ಪಣೆ

ಡಾ| ಹೆಗ್ಗಡೆ: ದೃಷ್ಟಿ -ಸೃಷ್ಟಿ ಗ್ರಂಥ ಲೋಕಾರ್ಪಣೆ

ಸಂವಿಧಾನದ ಸಮರ್ಪಕ ಅನುಷ್ಠಾನ ಅಗತ್ಯ

ಸಂವಿಧಾನದ ಸಮರ್ಪಕ ಅನುಷ್ಠಾನ ಅಗತ್ಯ

MUST WATCH

udayavani youtube

‘Car’bar with Merwyn Shirva | Episode 1

udayavani youtube

ಭಾರತ – ನ್ಯೂಜಿಲ್ಯಾಂಡ್ ಟೆಸ್ಟ್ ಪಂದ್ಯ ಡ್ರಾ : ಜಯದ ಸನಿಹದಲ್ಲಿದ್ದ ಟೀಂ ಇಂಡಿಯಾಗೆ ನಿರಾಸೆ

udayavani youtube

ಫ್ರೆಂಡ್ ಪೆನ್ಸಿಲ್ ಕದ್ದ ಎಂದು ಪೊಲೀಸ್ ಠಾಣೆಗೆದೂರು ದಾಖಲಿಸಲು ಹೋದ ಪುಟ್ಟ ವಿದ್ಯಾರ್ಥಿಗಳು!

udayavani youtube

ಕಟ್ಟಡ ತೆರವಿಗೆ ಕೂಡಿ ಬರದ ಗಳಿಗೆ : ಅವಘಡ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಿ

udayavani youtube

ನೋಂದಣೆ ಕಚೇರಿಗೆ ವಕೀಲರು ಬರದಂತೆ ಅಧಿಕಾರಿಗಳ ತಾಕೀತು : ಪ್ರತಿಭಟನೆಗಿಳಿದ ವಕೀಲರು

ಹೊಸ ಸೇರ್ಪಡೆ

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಕೊಚ್ಚಿ ಏರ್‌ಪೋರ್ಟಲ್ಲಿ ಶಬರಿಮಲೆ ದೇಗುಲ ಸಹಾಯಕೇಂದ್ರ

ಕೊಚ್ಚಿ ಏರ್ ಪೋರ್ಟ್ ನಲ್ಲಿ ಶಬರಿಮಲೆ ದೇಗುಲದ ಸಹಾಯಕೇಂದ್ರ

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.