ನ. 18, 19: ನಿಗಮ, ಮಂಡಳಿಗಳ ನೇಮಕಾತಿ ಪರೀಕ್ಷೆ
ಶಿರವಸ್ತ್ರ ನಿಷೇಧ; ಮಂಗಳಸೂತ್ರ, ಕಾಲುಂಗುರಕ್ಕೆ ಅವಕಾಶ
Team Udayavani, Nov 11, 2023, 12:03 AM IST
ಬೆಂಗಳೂರು: ಈ ತಿಂಗಳ 18 ಮತ್ತು 19ರಂದು ನಡೆಯುವ ವಿವಿಧ ನಿಗಮ ಮಂಡಳಿಗಳ ನೇಮಕಾತಿ ಪರೀಕ್ಷೆಯಲ್ಲಿ ತಲೆ ಮೇಲೆ ಟೋಪಿ ಅಥವಾ ಯಾವುದೇ ವಸ್ತ್ರ ಧರಿಸುವುದನ್ನು, ಬಾಯಿ, ಕಿವಿ ಹಾಗೂ ತಲೆ ಮುಚ್ಚುವ ವಸ್ತ್ರ (ಹಿಜಾಬ್ ಮಾದರಿ) ಧರಿಸುವುದನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿಷೇಧಿಸಿದೆ.
ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್ಗಳು ಅಥವಾ ಬಟನ್ ಹೊಂದಿರುವ ಬಟ್ಟೆ ಧರಿಸುವುದು, ಪೂರ್ಣ ತೋಳಿನ ಬಟ್ಟೆ / ಜೀನ್ಸ್ ಪ್ಯಾಂಟ್ ಧರಿಸುವುದು, ಎತ್ತರವಾದ ಹಿಮ್ಮಡಿಯ ಶೂ, ಚಪ್ಪಲಿ, ದಪ್ಪವಾದ ಅಡಿ ಭಾಗ ಹೊಂದಿರುವ ಶೂ ಅಥವಾ ಚಪ್ಪಲಿ ಧರಿಸುವಂತಿಲ್ಲ.
ಮಂಗಳಸೂತ್ರ, ಕಾಲುಂಗುರಕ್ಕೆ ಅವಕಾಶ
ಮಹಿಳಾ ಅಭ್ಯರ್ಥಿಗಳಿಗೆ ಮಂಗಳಸೂತ್ರ ಮತ್ತು ಕಾಲುಂಗುರ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದೆ. ಉಳಿದಂತೆ ಯಾವುದೇ ರೀತಿಯ ಲೋಹದ ಆಭರಣ ಧರಿಸುವುದನ್ನು ನಿಷೇಧಿಸಿದೆ.
ಪುರುಷ ಅಭ್ಯರ್ಥಿಗಳು ಪೂರ್ಣ ತೋಳಿನ ಶರ್ಟ್, ಕುರ್ತಾ ಪೈಜಾಮ, ಜೀನ್ಸ್ ಪ್ಯಾಂಟ್, ಜಿಪ್ ಪಾಕೆಟ್ಗಳು, ಪಾಕೆಟ್ಗಳು, ದೊಡ್ಡ ಬಟನ್ ಮತ್ತು ವಿಸ್ತಾರವಾದ ಕಸೂತಿ ಇರುವ ಬಟ್ಟೆಗಳನ್ನು ಧರಿಸುವಂತಿಲ್ಲ. ಕುತ್ತಿಗೆಯ ಸುತ್ತ ಯಾವುದೇ ಲೋಹದ ಆಭರಣ ಧರಿಸುವುದು ಅಥವಾ ಕಿವಿಯೋಲೆ, ಉಂಗುರ, ಕಡಗ ಧರಿಸುವಂತಿಲ್ಲ.
ಜೇಬುಗಳು ಇಲ್ಲದಿರುವ, ಕಡಿಮೆ ಜೇಬುಗಳಿರುವ, ಹಗುರವಾದ ಬಟ್ಟೆಗಳನ್ನು ಧರಿಸಿದರೆ ಉತ್ತಮ ಎಂದು ಕೆಇಎ ಹೇಳಿದೆ. ಪರೀಕ್ಷಾ ಹಾಲ್ ಒಳಗೆ ಶೂಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಮೊಬೈಲ್ ಫೋನ್, ಪೆನ್ ಡ್ರೈವ್, ಇಯರ್ ಫೋನ್, ಮೈಕ್ರೋಫೋನ್, ಬ್ಲೂ ಟೂತ್, ಕೈ ಗಡಿಯಾರ, ತಿನ್ನಬಹುದಾದ ವಸ್ತು, ಪೆನ್ಸಿಲ್, ಪೇಪರ್, ಇರೇಸರ್, ಜಾಮಿಟ್ರಿ ಬಾಕ್ಸ್, ಲಾಗ್ ಟೇಬಲ್ ಅನ್ನು ತರುವಂತಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ