ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಮರುತನಿಖೆಗೆ ಒಕ್ಕಲಿಗರ ಸಂಘ ಒತ್ತಾಯ

Team Udayavani, Aug 4, 2023, 11:18 PM IST

soujanya case …

ಮಂಗಳೂರು: ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸಿ ನೈಜ ಅಪರಾಧಿಯನ್ನು ಪತ್ತೆ ಹಚ್ಚಿ ಸೂಕ್ತ ಶಿಕ್ಷೆ ಕೊಡಿಸಬೇಕು ಎಂದು ಮಂಗಳೂರಿನ ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಸರಕಾರವನ್ನು ಒತ್ತಾಯಿಸಿದೆ.

ಮಾತೃಸಂಘದ ಅಧ್ಯಕ್ಷ ಗುರುದೇವ್‌ ಯು.ಬಿ. ಅವರು ಶುಕ್ರವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪೊಲೀಸರು ಬಂಧಿಸಿದ್ದ ಸಂತೋಷ್‌ ರಾವ್‌ ನಿರಪರಾಧಿ ಎಂಬುದಾಗಿ ಸಿಬಿಐ ನ್ಯಾಯಾಲಯ ತೀರ್ಪು ನೀಡಿದೆ. ಹಾಗಾಗಿ ನಿಜವಾದ ಅಪರಾಧಿ ಯಾರು? ತನಿಖಾ ಸಂಸ್ಥೆಗಳು ಎಡವಿದ್ದೆಲ್ಲಿ? ಎಂಬ ಪ್ರಶ್ನೆಗಳಿಗೆ ಉತ್ತರ ಬೇಕಾಗಿದೆ. ನೈಜ ಅಪರಾಧಿಗಳಿಗೆ ಶಿಕ್ಷೆಯಾಗದಿದ್ದರೆ ಸಮಾಜಕ್ಕೆ ಕಟ್ಟ ಸಂದೇಶ ಹೋಗುತ್ತದೆ. ಸಮಾಜದಲ್ಲಿ ಇಂತಹ ಅಪರಾಧ ಕೃತ್ಯಗಳು ಹೆಚ್ಚಾಗುವ ಅಪಾಯವಿದೆ. ರಾಜ್ಯ ಸರಕಾರ ಕೂಡಲೇ ಮರು ತನಿಖೆ ಮಾಡಿಸಬೇಕು. ಇಲ್ಲದಿದ್ದರೆ ಹೋರಾಟವನ್ನು ರಾಜ್ಯದಾದ್ಯಂತ ತೀವ್ರಗೊಳಿಸಲಾಗುವುದು ಎಂದು ಹೇಳಿದರು.

ನಿವೃತ್ತ ನ್ಯಾಯಾಧೀಶರಿಂದ ತನಿಖೆಯಾಗಲಿ
ಸಂಘದ ಯುವ ಘಟಕದ ಅಧ್ಯಕ್ಷ ಕಿರಣ್‌ ಬುಡ್ಲೆಗುತ್ತು ಮಾತನಾಡಿ, ಈ ಕೃತ್ಯ ಒಬ್ಬನಿಂದ ನಡೆದಿಲ್ಲ. ಒಂದಕ್ಕಿಂತ ಹೆಚ್ಚು ಜನ ಸೇರಿ ಮಾಡಿದ್ದಾರೆ ಎಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ಉಲ್ಲೇಖೀಸಿದೆ. ಹಾಗಾದರೆ ಅವರು ಯಾರು? ಎಂಬ ಬಗ್ಗೆ ತನಿಖೆಯಾಗಬೇಕು. ನೈಜ ಅಪರಾಧಿಯ ಬಂಧನ ಆಗದಿರುವುದಕ್ಕೆ ಪ್ರಕರಣದ ತನಿಖಾಧಿಕಾರಿ ಮುಖ್ಯ ಕಾರಣ. ಅವರನ್ನು ತನಿಖೆಗೊಳಪಡಿಸಬೇಕು. ಐದು ಮಂದಿ ನಿವೃತ್ತ ನ್ಯಾಯಾಧೀಶರಿಂದ ತನಿಖೆ ಮಾಡಿಸಬೇಕು ಎಂದು ಹೇಳಿದರು.

ಪುತ್ತೂರಿನಲ್ಲಿ ಸಭೆ
ಸೌಜನ್ಯಾ ಪ್ರಕರಣದ ಮರುತನಿಖೆಗೆ ಒತ್ತಾಯಿಸಿ ಮುಂದಿನ ದಿನಗಳಲ್ಲಿ ಯಾವ ರೀತಿಯ ಹೋರಾಟ ನಡೆಸಬೇಕು ಎಂಬ ಬಗ್ಗೆ ತೀರ್ಮಾನಿಸಲು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ಜಿಲ್ಲಾ ಮಟ್ಟದ ಸಭೆ ಆ.6ರಂದು ಪುತ್ತೂರಿನ ಸಂಘದ ಸಭಾಭವನದಲ್ಲಿ ನಡೆಯಲಿದೆ ಎಂದವರು ತಿಳಿಸಿದರು.

ತನಿಖಾಧಿಕಾರಿಯನ್ನು ವಿಚಾರಿಸಿ
ಸಂಘದ ಖಜಾಂಚಿ, ನ್ಯಾಯವಾದಿ ನವೀನ್‌ ಚಿಲ್ಪಾರ್‌ ಮಾತನಾಡಿ, ತನಿಖಾಧಿಕಾರಿ ವಿರುದ್ಧ ಎಫ್ಐಆರ್‌ ದಾಖಲಿಸಿ ಅವರನ್ನು ವಿಚಾರಣೆಗೊಳ ಪಡಿಸಬೇಕು. ಯಾವ ಪ್ರೇರಣೆಯಿಂದ ಸಾಕ್ಷ್ಯ ನಾಶ ಮಾಡಿದ್ದಾರೆ ಎಂಬುದನ್ನು ತಿಳಿದುಕೊಳ್ಳಬೇಕು. ಸರಕಾರ ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕಾರ್ಯ ದರ್ಶಿ ಬಾಲಕೃಷ್ಣ ಡಿ.ಬಿ., ಯುವ ಘಟಕದ ಕಾರ್ಯದರ್ಶಿ ಕಿರಣ್‌ ಹೊಸವಳಿಕೆ, ಮಹಿಳಾ ಘಟಕದ ಅಧ್ಯಕ್ಷೆ ಪೂರ್ಣಿಮಾ ಕೆ.ಎಂ., ಕಾರ್ಯದರ್ಶಿ ಸಾರಿಕಾ ಸುರೇಶ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.