ಸರಪಾಡಿ ರಥಬೀದಿ ಬಳಿ ಧರೆಗುರುಳಿದ ಅಶ್ವತ್ಥ ಮರ

ವಿದ್ಯುತ್ ಕಂಬಗಳಿಗೆ ಹಾನಿ; ದೇವರ ಪಾವಡದ ರೀತಿ ತಪ್ಪಿದ ಅನಾಹುತ

Team Udayavani, Feb 9, 2023, 12:07 PM IST

2-bantwala

ಬಂಟ್ವಾಳ: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ರಥಬೀದಿಯಲ್ಲಿದ್ದ ಬೃಹತ್ ಗಾತ್ರದ ಅರಳಿ ಮರ(ಅಶ್ವತ್ಥ)ವೊಂದು ಗುರುವಾರ ಬೆಳೆಗ್ಗೆ ಧರೆಗುರುಳಿದ್ದು, ಮರ ವಿದ್ಯುತ್ ತಂತಿಯ ಮೇಲೆ ಬಿದ್ದು 5-6 ವಿದ್ಯುತ್ ಕಂಬಗಳು ಧರೆಗುರುಳಿರುವ ಜತೆಗೆ ರಸ್ತೆಗೆ ಬಿದ್ದ ಪರಿಣಾಮ ಕೆಲವೊತ್ತು ಸಂಚಾರ ವ್ಯತ್ಯಯ ಉಂಟಾಯಿತು.

ಬೆಳ್ಳಗ್ಗಿನ ಹೊತ್ತು ಜನಸಂಚಾರ ಹಾಗೂ ವಾಹನ ಸಂಚಾರ ಹೆಚ್ಚಿರುವ ಸಮಯವಾದರೂ, ದೇವರ ಪವಾಡದ ರೀತಿಯಲ್ಲಿ ಯಾವುದೇ ಜೀವಹಾನಿ ಉಂಟಾಗಿಲ್ಲ.‌ಕಳೆದೆರಡು ದಿನಗಳಲ್ಲಿ ಮರದ ರೆಂಬೆಗಳು ಬಿದ್ದಿದ್ದು, ಆಗಲೂ ಯಾವುದೇ ಹಾನಿ ಉಂಟಾಗಿಲ್ಲ.

ಗುರುವಾರ ಬೆಳಗ್ಗಿನ ಹೊತ್ತು ಮರ ಏಕಾಏಕಿ ಬುಡದ ಭಾಗದಲ್ಲಿ ತುಂಡಾಗಿ ಬಿದ್ದಿದ್ದು, ವಿದ್ಯುತ್ ಕಂಬಗಳು ಧರೆಗುರುಳಿರುವುದು ಬಿಟ್ಟರೆ, ಪಕ್ಕದಲ್ಲಿದ್ದ ಪ್ರಯಾಣಿಕರ ತಂಗುದಾಣ, ಅಂಗಡಿಗೆ ಯಾವುದೇ ಹಾನಿಯಾಗಿಲ್ಲ. ಮರ ಬೀಳುವ ಕೆಲ ಹೊತ್ತಿನ ಮೊದಲೇ ಶಾಲಾ ಬಸ್ಸುಗಳು, ಇತರ ವಾಹನಗಳು ಮರದ ಬಿದ್ದಿರುವ ಭಾಗದಲ್ಲೇ ಹಾದು ಹೋಗಿದ್ದವು. ಜತೆಗೆ ಬೀಳುವ ಹೊತ್ತಿನಲ್ಲೂ ದೂರದಲ್ಲಿ ದ್ವಿಚಕ್ರ ವಾಹನಗಳು ಅದೇ ಭಾಗಕ್ಕೆ ಆಗಮಿಸುತ್ತಿತ್ತು. ಬೀಳುವ ಹೊತ್ತಿನಲ್ಲಿ ಜೋರಾದ ಶಬ್ದ ಕೇಳಿಬಂದಿದ್ದು, ತಂಗುದಾಣದಲ್ಲಿ ಕೂತವರು ಕೂಡ ಬೀಳುತ್ತಿದ್ದಂತೆ ಹೆದರಿ ದೂರಕ್ಕೆ ಓಡಿದ್ದಾರೆ.

ಎರಡು ದಿನಗಳ ಹಿಂದಷ್ಟೇ ಹತ್ತಾರು ವಾಹನಗಳಿದ್ದವು.

ದೇವಸ್ಥಾನದ ವಠಾರದಲ್ಲಿ ಫೆ. 6ರಂದು ಯಕ್ಷಗಾನ ಸೇವೆಯಾಟ ನಡೆದಿದ್ದು, ಆ ಸಂದರ್ಭದಲ್ಲಿ ಬುಡದಲ್ಲೇ ಹತ್ತಾರು ವಾಹನಗಳು ನಿಂತಿದ್ದವು.‌ ಆ ವೇಳೆ ಬಿದ್ದಿದ್ದರೆ ಜೀವಹಾನಿಯ ಜತೆಗೆ ವಾಹನಗಳೂ ಜಖಂಗೊಳ್ಳುತ್ತಿದ್ದವು. ಈ ರೀತಿಯಲ್ಲಿ ಜೀವಕ್ಕೆ ಒಂದು ಸಣ್ಣ ಹಾನಿಯನ್ನೂ ಮಾಡದೆ ಅಶ್ವತ್ಥ ಮರ ಬಿದ್ದಿರುವುದಕ್ಕೆ ಶ್ರೀ ಶರಭೇಶ್ವರ ದೇವರ ಪವಾಡವೆಂದೇ ಗ್ರಾಮಸ್ಥರು ಅಭಿಪ್ರಾಯಿಸುತ್ತಿದ್ದಾರೆ.

ಟಾಪ್ ನ್ಯೂಸ್

ದಕ್ಷಿಣ ಆಗ್ನೇಯ ರೈಲ್ವೆ…ಒಂದು ವರ್ಷದಲ್ಲಿ 1ಕೋಟಿಗೂ ಅಧಿಕ ದಂಡ ವಸೂಲಿ ಮಾಡಿದ ಟಿಕೆಟ್ ಪರೀಕ್ಷಕ

ದಕ್ಷಿಣ ಆಗ್ನೇಯ ರೈಲ್ವೆ…ಒಂದು ವರ್ಷದಲ್ಲಿ 1ಕೋಟಿಗೂ ಅಧಿಕ ದಂಡ ವಸೂಲಿ ಮಾಡಿದ ಟಿಕೆಟ್ ಪರೀಕ್ಷಕ

After gathering the opinion of the activists, the candidate was selected: Nalin Kumar Kateel

ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿ ಆಯ್ಕೆ: ನಳಿನ್ ಕುಮಾರ್ ಕಟೀಲ್

5–sirsi

ಇಬ್ಬರು ಶಾಸಕರ ರಾಜೀನಾಮೆ? ಶಿರಸಿಯತ್ತ ಎಲ್ಲರ ಚಿತ್ತ!

IPL: Michael Vaughan Makes Bold Title Prediction

ಮುಂಬೈ-ಚೆನ್ನೈ ಅಲ್ಲ, ಐಪಿಎಲ್ ವಿಜೇತರ ಬಗ್ಗೆ ಭವಿಷ್ಯ ನುಡಿದ ಮೈಕಲ್ ವಾನ್

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

elephant

ಕಾಡಾನೆಯ ಹನಿಟ್ರ್ಯಾಪ್: ತೀರ್ಥಹಳ್ಳಿ ಪಟ್ಟಣಕ್ಕೆ ನುಗ್ಗಿದ್ದ ಕಾಡಾನೆಯ ಸೆರೆಯಾಗಿಸಿದ ಭಾನುಮತಿ

Gurudev hoysala

ಚಿತ್ರ ವಿಮರ್ಶೆ: ‘ಹೊಯ್ಸಳ’ ಸಾಮ್ರಾಜ್ಯದಲ್ಲಿ ಆ್ಯಕ್ಷನ್‌ ಅಬ್ಬರಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accuident

ದ್ವಿಚಕ್ರ ವಾಹನ ಅಪಘಾತ: ಬೈಕ್‌ ಸವಾರ ಸಾವು

ಬೆಳ್ತಂಗಡಿ: ಸವಣಾಲು ಬಳಿ ಎರಡು ಬೈಕ್‌ಗಳ ಮಧ್ಯೆ ಅಪಘಾತ; ಓರ್ವ ಸಾವು

ಬೆಳ್ತಂಗಡಿ: ಸವಣಾಲು ಬಳಿ ಎರಡು ಬೈಕ್‌ಗಳ ಮಧ್ಯೆ ಅಪಘಾತ; ಓರ್ವ ಸಾವು

ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ

ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ

3–sulya

ಕಾಣಿಯೂರು: ದೈವ ನರ್ತನದ ವೇಳೆ ಕುಸಿದು ಬಿದ್ದು ಇಹಲೋಕ ತ್ಯಜಿಸಿದ ದೈವ ನರ್ತಕ

ಬೆಳಕು ಯೋಜನೆಯಡಿ ಎಳನೀರಿನ 33 ಮನೆಗಳಿಗೆ ವಿದ್ಯುತ್‌ ಬೆಳಕು

ಬೆಳಕು ಯೋಜನೆಯಡಿ ಎಳನೀರಿನ 33 ಮನೆಗಳಿಗೆ ವಿದ್ಯುತ್‌ ಬೆಳಕು

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ದಕ್ಷಿಣ ಆಗ್ನೇಯ ರೈಲ್ವೆ…ಒಂದು ವರ್ಷದಲ್ಲಿ 1ಕೋಟಿಗೂ ಅಧಿಕ ದಂಡ ವಸೂಲಿ ಮಾಡಿದ ಟಿಕೆಟ್ ಪರೀಕ್ಷಕ

ದಕ್ಷಿಣ ಆಗ್ನೇಯ ರೈಲ್ವೆ…ಒಂದು ವರ್ಷದಲ್ಲಿ 1ಕೋಟಿಗೂ ಅಧಿಕ ದಂಡ ವಸೂಲಿ ಮಾಡಿದ ಟಿಕೆಟ್ ಪರೀಕ್ಷಕ

After gathering the opinion of the activists, the candidate was selected: Nalin Kumar Kateel

ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿ ಆಯ್ಕೆ: ನಳಿನ್ ಕುಮಾರ್ ಕಟೀಲ್

5–sirsi

ಇಬ್ಬರು ಶಾಸಕರ ರಾಜೀನಾಮೆ? ಶಿರಸಿಯತ್ತ ಎಲ್ಲರ ಚಿತ್ತ!

IPL: Michael Vaughan Makes Bold Title Prediction

ಮುಂಬೈ-ಚೆನ್ನೈ ಅಲ್ಲ, ಐಪಿಎಲ್ ವಿಜೇತರ ಬಗ್ಗೆ ಭವಿಷ್ಯ ನುಡಿದ ಮೈಕಲ್ ವಾನ್

4–hunsur

ಹುಣಸೂರು: ಮೊದಲ ವರ್ಷಧಾರೆಗೆ ನೂರಾರು ಎಕರೆ ಬಾಳೆ ಬೆಳೆ ನಾಶ, ಲಕ್ಷಾಂತರ ರೂ. ನಷ್ಟ