ಹಳೇ ಬಸ್‌ಪಾಸ್‌ ಪರಿಗಣಿಸದ ನಿರ್ವಾಹಕರು

ವಿದ್ಯಾರ್ಥಿಗಳು ನಿತ್ಯ ದುಬಾರಿ ಟಿಕೆಟ್‌ ಪಡೆದು ಶಾಲಾ-ಕಾಲೇಜುಗಳಿಗೆ ತೆರಳಬೇಕಾದ ಸ್ಥಿತಿ ನಿರ್ಮಾಣ

Team Udayavani, Sep 4, 2021, 6:38 PM IST

ಹಳೇ ಬಸ್‌ಪಾಸ್‌ ಪರಿಗಣಿಸದ ನಿರ್ವಾಹಕರು

ಹಾವೇರಿ: ವಿದ್ಯಾರ್ಥಿಗಳಿಗೆ ಹೊಸ ಬಸ್‌ಪಾಸ್‌ ಸಿಗುವ ತನಕ ಹಳೇ ಬಸ್‌ಪಾಸ್‌ ಪರಿಗಣಿಸಬೇಕೆಂದು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಅಧಿಕಾರಿಗಳು ಸೂಚಿಸಿದೆ. ಆದರೂ ಸಹ ಸಾರಿಗೆ ಸಂಸ್ಥೆ ನಿರ್ವಾಹಕರು ಹಳೇ ಬಸ್‌ಪಾಸ್‌ ಪರಿಗಣಿಸದ ಹಿನ್ನೆಲೆಯಲ್ಲಿ ನಗರದ ಶಾಲಾ, ಕಾಲೇಜುಗಳಿಗೆ ನಿತ್ಯ ಬರುವ ವಿದ್ಯಾರ್ಥಿಗಳು ದುಬಾರಿ ಟಿಕೆಟ್‌ ಪಡೆದು ಪ್ರಯಾಣ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ರಾಜ್ಯ ಸರ್ಕಾರ ಕೋವಿಡ್‌ ಮೂರನೇ ಅಲೆ ಆತಂಕದ ನಡುವೆಯೂ ಈಗಾಗಲೇ 9ರಿಂದ 12ನೇ ತರಗತಿಗಳ ಶಾಲಾ, ಕಾಲೇಜು ಆರಂಭಿಸಿದೆ. ಇದೀಗ 6ರಿಂದ 8ನೇ ತರಗತಿವರೆಗೂ ಸೆ.6ರಿಂದ ಶಾಲೆ ಆರಂಭಕ್ಕೆ ಮುಂದಾಗಿದೆ. ಮತ್ತೊಂದೆಡೆ ಜಿಲ್ಲೆಯಲ್ಲಿ ಈಗಾಗಲೇ ಪದವಿ ಕಾಲೇಜುಗಳು ಸಹ ಆರಂಭಗೊಂಡಿವೆ.

ಆದರೆ, ಇನ್ನು ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆ ಮುಗಿಯದ ಕಾರಣ ವಿದ್ಯಾರ್ಥಿ ಗಳಿಗೆ ಬಸ್‌ಪಾಸ್‌ ದೊರತಿಲ್ಲ. ಇದರಿಂದ ವಿದ್ಯಾರ್ಥಿ ಗಳು ನಿತ್ಯ ತೊಂದರೆ ಅನುಭವಿಸುವಂತಾಗಿದೆ.

ಆದೇಶ ಕಡೆಗಣನೆ: ರಾಜ್ಯ ಸಾರಿಗೆ ಸಂಸ್ಥೆ ಅಧಿಕಾರಿಗಳೇ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಳೇ ಬಸ್‌ಪಾಸ್‌ ತೋರಿಸಿ ವಿದ್ಯಾರ್ಥಿಗಳು ಪ್ರಯಾಣಿಸಬಹುದೆಂದು ಹೇಳಿದೆ. ಆದರೂ ಸಾರಿಗೆ ಸಂಸ್ಥೆ ನಿರ್ವಾಹಕರು ಆದೇಶ ಧಿಕ್ಕರಿಸಿ ವಿದ್ಯಾರ್ಥಿಗಳಿಗೆ ಟಿಕೆಟ್‌ ನೀಡಿ ಹಣ ವಸೂಲಿ ಮಾಡುತ್ತಿದ್ದಾರೆ. ಇನ್ನು ಕೆಲವರು ನಡು ರಸ್ತೆಯಲ್ಲೇ ವಿದ್ಯಾರ್ಥಿಗಳನ್ನು ಬಸ್‌ನಿಂದ ಕೆಳಗಿಳಿಸಿ ತೆರಳುತ್ತಿರುವುದು ಕಂಡು ಬಂದಿದೆ. ಇದರಿಂದ ನಿತ್ಯ ಪಟ್ಟಣದ ಶಾಲಾ, ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದೆ.

ಇದನ್ನೂ ಓದಿ:ಸಂತೆಕಟ್ಟೆ ಕೊಲೆ ಪ್ರಕರಣ: ಕಿರುಕುಳ, ಮದುವೆ ವಿಳಂಬವೇ ಕೊಲೆಗೆ ಕಾರಣ :ಯುವತಿ ಪೋಷಕರ ಹೇಳಿಕೆ

ವಿದ್ಯಾರ್ಥಿಗಳಿಗೆ ಹೊರೆ: ಪೆಟ್ರೋಲ್‌, ಡೀಸೆಲ್‌ ಬೆಲೆ ಹೆಚ್ಚಳದಿಂದ ಖಾಸಗಿ ಸೇರಿದಂತೆ ಸರ್ಕಾರಿ ಬಸ್‌ಗಳ ಪ್ರಯಣ ದರ ಹೆಚ್ಚಳಗೊಂಡಿದೆ. ಹೀಗಾಗಿ, ನಿತ್ಯ ತರಗತಿಗಳಿಗೆ ಬರಬೇಕಾದ ವಿದ್ಯಾರ್ಥಿಗಳು ಬಸ್‌ ಪ್ರಯಾಣಕ್ಕಾಗಿ ನೂರಾರು ರೂ. ವೆಚ್ಚ ಮಾಡಬೇಕಾದ ದುಸ್ಥಿತಿ ಬಂದಿದೆ. ಗ್ರಾಮೀಣ ವಿದ್ಯಾರ್ಥಿಗಳು ನಗರಗಳಿಗೆ ಬರಲು ಬಹುತೇಕ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಅವಲಂಬಿಸಬೇಕಾಗಿದೆ. ಆದರೆ, ಹೊಸ ಬಸ್‌ಪಾಸ್‌ ಬರುವವರೆಗೂ ಹಳೇ ಬಸ್‌ಪಾಸ್‌ ತೋರಿಸಿ ಪ್ರಯಾಣಿಸಬಹುದೆಂಬ ಸರ್ಕಾರದ ಆದೇಶವನ್ನು ನಿರ್ವಾಹಕರು ಕಡೆಗಣಿಸುತ್ತಿರುವುದು ವಿದ್ಯಾರ್ಥಿಗಳಿಗೆ ತೆಲೆನೋವಾಗಿ ಪರಿಣಮಿಸಿದೆ.

ಸಮಯಾವಕಾಶಕ್ಕೆ ಆಗ್ರಹ: ಈಗಷ್ಟೇ ಶಾಲಾ, ಕಾಲೇಜುಗಳಲ್ಲಿ ದಾಖಲಾತಿ ಪ್ರಕ್ರಿಯೆ ಶುರುವಾಗಿದೆ. ದಾಖಲಾತಿ ಪ್ರಕ್ರಿಯೆ ಮುಗಿದು ಗುರುತಿನ ಚೀಟಿ ಪಡೆದು ಬಳಿಕ ಕಾಲೇಜು ಪ್ರಾಚಾರ್ಯರ ದೃಢೀಕರಣದೊಂದಿಗೆ ಹೊಸ ಬಸ್‌ಪಾಸ್‌ಗೆ ಅರ್ಜಿ ಸಲ್ಲಿಸಬೇಕು. ಈ ಪ್ರಕ್ರಿಯೆ ಮುಗಿಯಲು ಇನ್ನೂ ಒಂದು ತಿಂಗಳು ಬೇಕಾಗಬಹುದು. ಅಲ್ಲಿಯವರೆಗೂ ವಿದ್ಯಾರ್ಥಿಗಳಿಗೆ ಹಳೆ ಬಸ್‌ಪಾಸ್‌ ತೋರಿಸಿ ಪ್ರಯಾಣಿಸಲು ಅವಕಾಶ ನೀಡಿದರೆ ಜಿಲ್ಲೆಯ ಬಹಳಷ್ಟು ಬಡ ಹಾಗೂ ಮಧ್ಯಮ ಮತ್ತು ರೈತ ಕುಟುಂಬಗಳ ಮಕ್ಕಳಿಗೆ ಅನುಕೂಲವಾಗಲಿದೆ ಎಂಬುದು ವಿದ್ಯಾರ್ಥಿ ಸಂಘಟನೆಗಳ ಆಗ್ರಹವಾಗಿದೆ.

ಈಗಾಗಲೇ ರಾಜ್ಯ ಸಾರಿಗೆ ಸಂಸ್ಥೆ ಅಧಿಕಾರಿಗಳ ಆದೇಶದಂತೆ ಹಳೇ ಬಸ್‌ಪಾಸ್‌ ತೋರಿಸುವ ವಿದ್ಯಾರ್ಥಿಗಳ ಪ್ರಯಾಣಕ್ಕೆ ಅವಕಾಶ ನೀಡಬೇಕು. ಆದರೆ, ರಾಜ್ಯ ಸಾರಿಗೆ ಸಂಸ್ಥೆಯ ಬಸ್‌ ನಿರ್ವಾಹಕರು ಆದೇಶ ಧಿಕ್ಕರಿಸಿ ವಿದ್ಯಾರ್ಥಿಗಳ ಪ್ರಯಾಣಕ್ಕೆ ತೊಂದರೆ ನೀಡುತ್ತಿದ್ದಾರೆ. ಹಳೇ ಬಸ್‌ಪಾಸ್‌ ಇದ್ದರೂ ಟಿಕೆಟ್‌ ಪಡೆಯುವಂತೆ ಒತ್ತಾಯಿಸುತ್ತಿದ್ದಾರೆ. ಇನ್ನು ಕೆಲವು ಬಸ್‌ ನಿರ್ವಾಹಕರು ನಡು ರಸ್ತೆಯಲ್ಲಿಯೇ ವಿದ್ಯಾರ್ಥಿ ಗಳನ್ನು ಬಸ್‌ನಿಂದ ಕೆಳಗೆ ಇಳಿಸಿ ತೆರಳುತ್ತಿರುವ ಘಟನೆಗಳು ನಡೆಯುತ್ತಿವೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಹಳೇ ಬಸ್‌ಪಾಸ್‌ ಪರಿಗಣಿಸುವಂತೆ ನಿರ್ವಾಹಕರಿಗೆ ಸೂಚನೆ ನೀಡಬೇಕು.
-ಬಸವರಾಜ ಭೋವಿ, ಎಸ್‌ಎಫ್‌ಐ ಮುಖಂಡ

ಜಿಲ್ಲೆಯಲ್ಲಿ ಹಳೇ ಬಸ್‌ಪಾಸ್‌
ಪರಿಗಣಿಸದಿರುವ ಘಟನೆಗಳು ಗಮನಕ್ಕೆ ಬಂದಿದೆ. ಈ ಬಗ್ಗೆ ಬಸ್‌ ಚಾಲಕರು ಹಾಗೂ ನಿರ್ವಾಹಕರಿಗೆ ಮತ್ತೊಮ್ಮೆ ಸೂಚನೆ ನೀಡಲಾಗುವುದು.
ವಿದ್ಯಾರ್ಥಿಗಳು ಶಾಲಾ ಶುಲ್ಕ ರಶೀದಿ ಹಾಗೂ ಆಧಾರ್‌ ಕಾರ್ಡ್‌ ತೋರಿಸಿದರೆ ಬಸ್‌ ಪ್ರಯಾಣಕ್ಕೆ ಅವಕಾಶ ನೀಡಲಾಗುವುದು. ಈಗಾಗಲೇ ಹೊಸಬಸ್‌ಪಾಸ್‌ ವಿತರಣೆ ಆರಂಭಗೊಂಡಿದ್ದು, ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಿ ಹೊಸ ಬಸ್‌ಪಾಸ್‌ ಪಡೆಯಬೇಕು. ವಿ.ಎಸ್‌.ಜಗದೀಶ, ವಿಭಾಗೀಯ ನಿಯಂತ್ರಣಾಧಿಕಾರಿ, ಹಾವೇರಿ

-ವೀರೇಶ ಮಡ್ಲೂರ

ಟಾಪ್ ನ್ಯೂಸ್

kannada actress prema

ವಕಾಲತ್ತು ವಹಿಸಿ ಬಂದರು ಪ್ರೇಮಾ

1-ghate

ಬಿಜೆಪಿ ಹಿರಿಯ ನಾಯಕ,ಉದ್ಯಮಿ ಸುಧೀರ್ ಘಾಟೆ ವಿಧಿವಶ

1-11

ಮುಂಬಯಿಯ 60 ಅಂತಸ್ತಿನ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ

sakath movie

ಅ. 24ಕ್ಕೆ ಗಣಿ-ಸುನಿ ಕಾಂಬಿನೇಶನ್‌ “ಸಖತ್‌’ ಟೀಸರ್‌

ishwarappa-15

ಕಾಂಗ್ರೆಸ್‍ಗೆ ನಾಯಕತ್ವ, ಸಂಘಟನೆ, ಸಾಧನೆ ಇಲ್ಲ: ಈಶ್ವರಪ್ಪ

ಟ್ರೇಲರ್‌, ಟೀಸರ್‌, ಸಾಂಗ್ಸ್‌ ಧಮಾಕ: ರಿಲೀಸ್ ಗೆ ತಯಾರಾದ ಚಿತ್ರಗಳ ಶರವೇಗದ ಪ್ರಮೋಷನ್

ಟ್ರೇಲರ್‌, ಟೀಸರ್‌, ಸಾಂಗ್ಸ್‌ ಧಮಾಕ: ರಿಲೀಸ್ ಗೆ ತಯಾರಾದ ಚಿತ್ರಗಳ ಶರವೇಗದ ಪ್ರಮೋಷನ್

ಸರಕಾರದ ನಿರ್ಲಕ್ಷದಿಂದಾಗಿ 50 ಲಕ್ಷ ಜನರು ಕೋವಿಡ್ ದಿಂದಾಗಿ ಮೃತಪಟ್ಟಿದ್ದಾರೆ: ಸಿದ್ದರಾಮಯ್ಯ

ಸರಕಾರದ ನಿರ್ಲಕ್ಷದಿಂದಾಗಿ 50 ಲಕ್ಷ ಜನರು ಕೋವಿಡ್ ದಿಂದಾಗಿ ಮೃತಪಟ್ಟಿದ್ದಾರೆ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21hkr1

ಜಿಲ್ಲಾದ್ಯಂತ ಬಿಸಿಯೂಟ ಕಾರ್ಯಕ್ರಮಕ್ಕೆ ಚಾಲನೆ

21hvr8

ಹಣ ದೋಚಲು ಸಚಿವರ ಕಿತ್ತಾಟ: ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ

21hvr15

ಕಳೆದ ಬಾರಿ ಸೋತರೂ ನುಡಿದಂತೆ ನಡೆದಿದ್ದೇನೆ: ಶ್ರೀನಿವಾಸ ಮಾನೆ

ಧರ್ಮಗಳನ್ನು ಒಡೆಯುವುದೇ ಕಾಂಗ್ರೆಸ್ ಪಕ್ಷದವರ ಕೆಲಸ ಸಿಎಂ ಬೊಮಾಯಿ ಆರೋಪ

ಧರ್ಮಗಳನ್ನು ಒಡೆಯುವುದೇ ಕಾಂಗ್ರೆಸ್ ಪಕ್ಷದವರ ಕೆಲಸ ಸಿಎಂ ಬೊಮ್ಮಾಯಿ ಆರೋಪ

hjgjgyjy

ಹಾವೇರಿ ಜಿಲ್ಲೆ ಉದಯಕ್ಕೆ ದಿ| ಉದಾಸಿ ಕಾರಣ : ಸಿಎಂ ಬಸವರಾಜ ಬೊಮ್ಮಾಯಿ

MUST WATCH

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

udayavani youtube

Video Viral : ಜಾನಪದ ಶೈಲಿಯ ಹಾಡಿನ ಮೂಲಕ ಒಡ್ಡೋಲಗದ ಆಮಂತ್ರಣ

udayavani youtube

ದುಬಾರಿ ಗಿಫ್ಟ್ ಗಳನ್ನು ಮಾರಿ ತಿಂದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ?

udayavani youtube

Brazilian Golden Spoon Cherry ಸುಲಭವಾಗಿ ಬೆಳೆಸಿ ಕೈತುಂಬಾ ಸಂಪಾದಿಸಿ

udayavani youtube

ಶ್ರೀರಂಗಪಟ್ಟಣ ಬಾರಿ ಮಳೆಗೆ ಕೊಚ್ಚಿ ಹೋದ ರೈತರ ಬದುಕು

ಹೊಸ ಸೇರ್ಪಡೆ

kannada actress prema

ವಕಾಲತ್ತು ವಹಿಸಿ ಬಂದರು ಪ್ರೇಮಾ

davanagere news

ಸರ್ಕಾರಿ ನೌಕರರ ಕ್ರೀಡಾಕೂಟದ ಕಲರವ

chitradurga news

ಕಪ್ಪುಪಟ್ಟಿ ಧರಿಸಿ ಶಿಕ್ಷಕರು ಕೆಲಸಕ್ಕೆ ಹಾಜರ್‌

davanagere news

ವಿದ್ಯಾರ್ಥಿಗಳಿಗೆ ಮಧ್ಯಾಹದ ಬಿಸಿಯೂಟ ಪುನಾರಂಭ

28

ಅಪಪ್ರಚಾರ ಮಾಡಿದವರ ಬಾಯಿ ಮುಚ್ಚಿಸಿದ್ದೇವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.