ಇಂಡೋ-ಆಸೀಸ್ ಸರಣಿ ಖಚಿತ: ಕೆವಿನ್ ರಾಬರ್ಟ್ಸ್
Team Udayavani, May 23, 2020, 6:10 AM IST
ಸಿಡ್ನಿ: ವರ್ಷಾಂತ್ಯದಲ್ಲಿ ಭಾರತದ ಆಸ್ಟ್ರೇಲಿಯ ಪ್ರವಾಸ ನಿಗದಿತ ವೇಳಾಪಟ್ಟಿಯಂತೆ ನಡೆಯಲಿದೆ ಎಂದು ಕ್ರಿಕೆಟ್ ಆಸ್ಟ್ರೇಲಿಯದ ಮುಖ್ಯ ಕಾರ್ಯನಿರ್ವಾಹಕ ಕೆವಿನ್ ರಾಬರ್ಟ್ಸ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಆಸ್ಟ್ರೇಲಿಯದಲ್ಲಿ ಆತಿಥ್ಯದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಆಯೋಜನೆ ಅನುಮಾನದಲ್ಲಿದೆ. ಆದರೆ ಭಾರತ ಆಸೀಸ್ ಪ್ರವಾಸ ಕೈಗೊಳ್ಳುವುದು 10ರಲ್ಲಿ 9ರಷ್ಟು ಸಾಧ್ಯತೆಯಿದೆ ಎಂದು ಆಶಾವಾದ ವ್ಯಕ್ತಪಡಿಸಿದ್ದಾರೆ.
ಭಾರತ ಹಾಗೂ ಆಸ್ಟ್ರೇಲಿಯ ನಡುವಣ ಸರಣಿಯು ನವೆಂಬರ್‌ತಿಂಗಳಲ್ಲಿ ಆರಂಭವಾಗಿ 2021 ಜನವರಿ ತಿಂಗಳವರೆಗೂ ಮುಂದುವರಿಯಲಿದೆ. ಈ ವೇಳೆಯಲ್ಲಿ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯೂ ನಡೆಯಲಿದೆ.
ಎಲ್ಲ ಮಂಡಳಿಗಳಂತೆ ಕ್ರಿಕೆಟ್ ಆಸ್ಟ್ರೇಲಿಯ ಕೂಡ ಕೋವಿಡ್ ವೈರಸ್‌ನಿಂದಾಗಿ ಭಾರಿ ನಷ್ಟವನ್ನು ಅನುಭವಿಸುತ್ತಿದೆ. ಹಾಗೊಂದು ವೇಳೆ ಭಾರತ ಸರಣಿ ನಡೆದರೆ ಕ್ರಿಕೆಟ್ ಆಸ್ಟ್ರೇಲಿಯ ಜಾಹೀರಾತು ಹಕ್ಕಿನಿಂದ 300 ಮಿಲಿಯನ್ ಆಸ್ಟ್ರೇಲಿಯನ್ ಡಾಲರ್ ಗಿಟ್ಟಿಸಿಕೊಳ್ಳಲಿದೆ ಎಂದು ಅವರು ಹೇಳಿದ್ದಾರೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444