ಭಾರಿ ಮಳೆ ಸಾಧ್ಯತೆ :ಕರಾವಳಿ ಭಾಗದಲ್ಲಿ ಎರಡು ದಿನ ಆರೆಂಜ್ ಅಲರ್ಟ್
Team Udayavani, Oct 12, 2020, 6:10 PM IST
ಮಂಗಳೂರು ; ಕರಾವಳಿ ಭಾಗದಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ದಕ್ಷಿಣಕನ್ನಡ , ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು ಮುಂದಿನ ಎರಡು ದಿನಗಳು ಭಾರಿ ಮಳೆಯಾಗಲಿದೆ ಎಂದು ಹೇಳಿದೆ .
ಕಳೆದ ಕೆಲವು ದಿನಗಳ ಹಿಂದೆ ರಾಜ್ಯದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಪ್ರವಾಹಗಳು ಉಂಟಾದ ಪರಿಣಾಮ ಸಾಕಷ್ಟು ಆಸ್ತಿ ಪಾಸ್ತಿಗಳು ನಾಶವಾಗಿತ್ತು, ಅಲ್ಲದೆ ಉಡುಪಿ ಜಿಲ್ಲೆಯಲ್ಲಿ ಪ್ರವಾಹದಿಂದ ತಗ್ಗು ಪ್ರದೇಶಗಳು ಮುಳುಗಿ ಅಪಾರ ಹಾನಿಯು ಸಂಭವಿಸಿತ್ತು.
ದಕ್ಷಿಣಕನ್ನಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಕೆಲವು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದು ಸುಳ್ಯ ತಾಲೂಕಿನ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ಹೊರಾಂಗಣ ಮತ್ತು ಒಳಾಂಗಣಕ್ಕೆ ಮಳೆ ನೀರು ನುಗ್ಗಿ ಜಲಾವೃತಗೊಂಡಿತು.