ಪಾಕಿಸ್ಥಾನ ಕ್ರಿಕೆಟ್ ತಂಡದ ಮಾಜಿ ನಾಯಕ ಇಂಜಮಾಮ್ಗೆ ಹೃದಯಾಘಾತ
Team Udayavani, Sep 28, 2021, 10:35 PM IST
ಲಾಹೋರ್: ಪಾಕಿಸ್ಥಾನ ಕ್ರಿಕೆಟ್ ತಂಡದ ಮಾಜಿ ನಾಯಕ ಇಂಝಮಾಮ್ ಉಲ್ ಹಕ್ ಅವರಿಗೆ ಲಘು ಹೃದಯಾಘಾತವಾಗಿದ್ದು, ಲಾಹೋರ್ನ ಆಸ್ಪತ್ರೆಯೊಂದರಲ್ಲಿ ಯಶಸ್ವಿಯಾಗಿ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ನಡೆಸಲಾಗಿದೆ.
“ಕಳೆದ ಮೂರು ದಿನಗಳಿಂದ ಇಂಝಮಾಮ್ಗೆ ಎದೆನೋವಿನ ಅನುಭವವಾಗಿತ್ತು. ಆರಂಭಿಕ ತಪಾಸಣೆಯ ವೇಳೆ ಅವರಲ್ಲಿ ಯಾವುದೇ ಸಮಸ್ಯೆ ಕಂಡುಬಂದಿರಲಿಲ್ಲ.
ಆದರೆ ಸೋಮವಾರ ರಾತ್ರಿ ಮತ್ತೆ ಉಸಿರಾಟದ ಸಮಸ್ಯೆ ಕಂಡುಬಂದ ಕಾರಣ ಆಸ್ಪತ್ರೆಗೆ ದಾಖಲಿಸಲಾಯಿತು.
ಈ ವೇಳೆ ಅವರಿಗೆ ಹೃದಯಾಘಾತವಾಗಿರುವುದು ತಿಳಿದು ಬಂದಿದೆ. ಅದರಂತೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ’ ಎಂದು ಕುಟುಂಬದ ಮೂಲಗಳು ತಿಳಿಸಿದೆ.
ಇದನ್ನೂ ಓದಿ:ಐಪಿಎಲ್: ಡೆಲ್ಲಿ ಮೇಲೆ ಕೋಲ್ಕತಾ ರೈಡ್