Pakistan: ಪಾಕ್ ಅರ್ಥವ್ಯವಸ್ಥೆ ಉಳಿಸಲು ಸೇನಾ ನೆರವು
Team Udayavani, Sep 5, 2023, 8:02 PM IST
ಕರಾಚಿ: ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿರುವ ಪಾಕಿಸ್ತಾನದಲ್ಲಿ ಪರಿಸ್ಥಿತಿ ಸುಧಾರಿಸುವ ನಿಟ್ಟಿನಲ್ಲಿ ಅಲ್ಲಿನ ಪ್ರಬಲ ಸೇನೆಯೇ ಮಧ್ಯ ಪ್ರವೇಶ ಮಾಡಬೇಕಾಗಿ ಬಂದಿದೆ. ಸೇನಾ ಮುಖ್ಯಸ್ಥ ಜ.ಆಸಿಫ್ ಮುನೀರ್ ಅವರು ಉದ್ದಿಮೆ ವಲಯ, ಹಣಕಾಸು ಕ್ಷೇತ್ರದ ತಜ್ಞರು ಸೇರಿದಂತೆ ವಿವಿಧ ವಲಯಗಳ ಪ್ರಮುಖರ ಜತೆಗೆ ಸರಣಿ ಸಭೆಗಳನ್ನು ನಡೆಸಿದ್ದಾರೆ.
ವಿದೇಶದಿಂದ ಬಂಡವಾಳ ತರುವ ವಿಚಾರ ಸೇರಿದಂತೆ ಹಲವು ಅಂಶಗಳ ಬಗ್ಗೆ ಸರ್ಕಾರದ ವತಿಯಿಂದ ಕೈಗೊಳ್ಳಬೇಕಾದ ಕ್ರಮಗಳನ್ನು ಅವರು ಪರಿಶೀಲನೆ ನಡೆಸಿದ್ದಾರೆ. ಸೌದಿ ಅರೇಬಿಯಾ ವತಿಯಿಂದ 25 ಬಿಲಿಯನ್ ಅಮೆರಿಕನ್ ಡಾಲರ್ ಮೊತ್ತದ ನೆರವು ಸಿಗುವ ಬಗ್ಗೆಯೂ ಅವರು ಮಾಹಿತಿ ನೀಡಿದ್ದಾರೆ. ಕಳೆದ ಶನಿವಾರ ವರ್ತಕರು ಇಂಧನ ಬೆಲೆ ಏರಿಕೆ ಸೇರಿದಂತೆ ಹಲವು ಸಮಸ್ಯೆಗಳ ವಿರುದ್ಧ ಪ್ರತಿಭಟನೆ ನಡೆಸಿದ್ದ ಬೆನ್ನಲ್ಲಿಯೇ ಈ ಸಭೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ