ಗ್ರಾಪಂ ನೌಕರರೂ ಸೇನಾನಿಗಳು : ಕಂದಾಯ ಇಲಾಖೆ ಸಿಬಂದಿಯ ಸೌಲಭ್ಯಗಳು ವಿಸ್ತರಣೆ

Team Udayavani, May 27, 2021, 7:30 AM IST

ಗ್ರಾಪಂ ನೌಕರರೂ ಸೇನಾನಿಗಳು : ಕಂದಾಯ ಇಲಾಖೆ ಸಿಬಂದಿಯ ಸೌಲಭ್ಯಗಳು ವಿಸ್ತರಣೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಸಿಬಂದಿಯನ್ನು ಕೊರೊನಾ ವಾರಿಯರ್ಸ್‌ ಎಂದು ಪರಿಗಣಿಸಿ ಕಂದಾಯ ಇಲಾಖೆ ಸಿಬಂದಿಗೆ ನೀಡುತ್ತಿರುವ ಸೌಲಭ್ಯಗಳನ್ನೇ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದರು.

ಬುಧವಾರ ಬೆಳಗಾವಿ, ಬಳ್ಳಾರಿ, ಶಿವಮೊಗ್ಗ ಮತ್ತು ಮೈಸೂರು ಜಿಲ್ಲೆಗಳ ಆಯ್ದ ಗ್ರಾಮ ಪಂಚಾಯತ್‌ಗಳ ಅಧ್ಯಕ್ಷರು ಹಾಗೂ ಪಿಡಿಒಗಳೊಂದಿಗೆ ಅವರು ಸಂವಾದ ನಡೆಸಿದರು.

ಗ್ರಾಮೀಣಾಭಿವೃದ್ಧಿ ಸಚಿವರು ಹಾಗೂ ವಿವಿಧ ಪಂಚಾಯತ್‌ ಅಧ್ಯಕ್ಷರ ಮನವಿಗೆ ಸ್ಪಂದಿಸಿ ಅವರು ಈ ಘೋಷಣೆ ಮಾಡಿದರು. ಬಳಿಕ ಮಾತನಾಡಿದ ಸಿಎಂ, ಕೊರೊನಾ 2ನೇ ಅಲೆ ಮೊದಲಿಗಿಂತ ವಿಭಿನ್ನವಾಗಿದೆ. ಹೆಚ್ಚು ಹಾನಿಕಾರಕವಾಗಿದೆ. ಸೋಂಕು ತ್ವರಿತವಾಗಿ ವ್ಯಾಪಿಸುತ್ತಿದ್ದು ತುರ್ತು ನಿವಾರಣ ಕ್ರಮಗಳನ್ನು ಕೈಗೊಳ್ಳುವುದು ಅವಶ್ಯವಾಗಿದೆ ಎಂದು ಹೇಳಿದರು.

50 ಸಾವಿರ ರೂ. ಬಿಡುಗಡೆ
ಕಳೆದ ವಾರ ಘೋಷಿಸಿದ ಪ್ಯಾಕೇಜ್‌ನಲ್ಲಿ ಎಲ್ಲ ಗ್ರಾ.ಪಂ.ಗಳಿಗೂ ಎಸ್‌ಡಿಆರ್‌ಎಫ್ ನಿಧಿಯಿಂದ ತಲಾ 50,000 ರೂ. ಬಿಡುಗಡೆ ಮಾಡಲು ಆದೇಶಿಸಲಾಗಿದೆ. ಸದ್ಯದಲ್ಲಿಯೇ ಹಣ ತಮ್ಮ ಕೈ ಸೇರಲಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯಿಂದ ಈಗಾಗಲೇ 14ನೇ ಹಣಕಾಸು ಆಯೋಗದ ಅನುದಾನದ ಉಳಿಕೆ ಹಣ, 15ನೇ ಹಣಕಾಸು ಆಯೋಗದ ಅನಿರ್ಬಂಧಿತ ಅನುದಾನ ಹಾಗೂ ಗ್ರಾ.ಪಂ.ನ ಸ್ವಂತ ಸಂಪನ್ಮೂಲವನ್ನು ಬಳಸಿಕೊಳ್ಳಲು ಅನುಮತಿ ನೀಡಲಾಗಿದೆ ಎಂದರು.
ಕೋವಿಡ್‌ ನಿಯಂತ್ರಣಕ್ಕಾಗಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ಸಂತೆ, ಜಾತ್ರೆ ಮತ್ತಿತರ ಕಾರ್ಯಕ್ರಮಗಳ ನಿಷೇಧವನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸ ಬೇಕು ಎಂದು ತಿಳಿಸಿದರು.

ಅಧ್ಯಕ್ಷರಿಗೆ ಅಭಿನಂದನೆ
ಬಳ್ಳಾರಿ ಜಿಲ್ಲೆಯ ಅಲಬೂರು ಗ್ರಾ.ಪಂ. ಅಧ್ಯಕ್ಷ ಶಿವಾನಂದಪ್ಪ ಅವರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಸಕ್ರಿಯ ಪ್ರಕರಣಗಳನ್ನು 36ರಿಂದ 1ಕ್ಕೆ ಇಳಿಸಿರುವ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಗ್ರಾಮದಲ್ಲಿ ಶಾಂತಿ ಸಭೆಗಳನ್ನು ನಡೆಸಿ, ಜಾತ್ರೆ ಇತ್ಯಾದಿ ನಡೆಸದಂತೆ ಗ್ರಾಮಸ್ಥರ ಮನವೊಲಿಸಿರುವುದಾಗಿ ಶಿವಾನಂದಪ್ಪ ಮಾಹಿತಿ ನೀಡಿದರು.

ಮೈಸೂರು ಜಿಲ್ಲೆ ವರುಣಾ ಗ್ರಾ.ಪಂ. ಅಧ್ಯಕ್ಷ ರಾಜೇಶ್‌ ಮಾತನಾಡಿ, ಮನೆ ಮನೆಗೆ ಭೇಟಿ ನೀಡಿ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಮನವರಿಕೆ ಮಾಡಿ ಕೊಡಲಾಗಿದೆ ಎಂದರು.

ಶಿವಮೊಗ್ಗ ಜಿಲ್ಲೆಯ ಅರಕೇರಿ ಗ್ರಾ.ಪಂ. ಅಧ್ಯಕ್ಷ ಭಾಸ್ಕರ್‌ ಮಾತನಾಡಿ, ಗ್ರಾಮದಲ್ಲಿ ಸೋಂಕಿತರ ಪತ್ತೆಯಾದಾಗ, ಅವರ ಮನೆಗೇ ಔಷಧ, ಆಹಾರ ವಸ್ತುಗಳನ್ನು ಒದಗಿಸಲಾಗಿದೆ ಎಂದರು.

ಗ್ರಾಮೀಣ ಮನೆಗಳು ಸಣ್ಣದಾಗಿರುವ ಕುಟುಂಬ ಗಳಲ್ಲಿ ಸೋಂಕು ಕಾಣಿಸಿಕೊಂಡರೆ ಸೋಂಕಿತರನ್ನು ಕಡ್ಡಾಯವಾಗಿ ಕೇರ್‌ ಸೆಂಟರ್‌ಗಳಿಗೆ ದಾಖಲಿಸುವಂತೆ ಸಿಎಂ ಎಲ್ಲ ಗ್ರಾ.ಪಂ.ಗಳ ಅಧ್ಯಕ್ಷರಿಗೆ ಸೂಚಿಸಿದರು.

ಗ್ರಾ.ಪಂ.ಗಳಲ್ಲಿ ಹೆಲ್ಪ್ ಡೆಸ್ಕ್
ಸೋಂಕಿತರಿಗೆ ನೆರವಾಗಲು ಗ್ರಾಮ ಪಂಚಾಯತ್‌ ಗಳಲ್ಲಿ ಹೆಲ್ಪ್ಡೆಸ್ಕ್ ಮತ್ತು ಹಾಗೂ ಹೆಲ್ಪ್ಲೈನ್‌ ಗಳನ್ನು ಪ್ರಾರಂಭಿಸಬೇಕು. ಕಾರ್ಯಪಡೆ ಗಳ ಜತೆ ಕಾರ್ಯನಿರ್ವಹಿಸಲು ಸ್ವಯಂ ಸೇವಾ ಸಂಸ್ಥೆಗಳು ಮತ್ತು ದಾನಿಗಳ ನೆರವನ್ನು ಪಡೆಯಬಹುದು ಎಂದು ಮುಖ್ಯಮಂತ್ರಿ ಸಲಹೆ ನೀಡಿದರು.

ಮಕ್ಕಳು, ಮಹಿಳೆಯರು, ವಿಶೇಷ ಚೇತನರು ಹಾಗೂ ವೃದ್ಧರು ತೊಂದರೆಗೊಳಗಾಗಿದ್ದಲ್ಲಿ ಅವರಿಗೆ ಊಟೋಪಚಾರದ ವ್ಯವಸ್ಥೆ ಮಾಡಬೇಕು. ಒಂದು ಪಕ್ಷ ಸೋಂಕಿತರು ಮೃತಪಟ್ಟು ಮಕ್ಕಳು ಅನಾಥರಾದಲ್ಲಿ ಅವರನ್ನು ಯಾರೂ ದತ್ತು ತೆಗೆದುಕೊಳ್ಳಲು ಬಿಡಬಾರದು. ಬದಲಾಗಿ ಮಕ್ಕಳ ರಕ್ಷಣಾ ಸಮಿತಿಗಳಿಗೆ ಸೇರಿಸಬೇಕು ಎಂದು ಮುಖ್ಯಮಂತ್ರಿ ತಿಳಿಸಿದರು.

ಟಾಸ್ಕ್ಫೋರ್ಸ್‌ ಪಾತ್ರ ಮುಖ್ಯ
ಕೋವಿಡ್‌ 19 ಮೊದಲ ಅಲೆಯನ್ನು ಯಶಸ್ವಿಯಾಗಿ ನಿಯಂತ್ರಿಸುವಲ್ಲಿ ಗ್ರಾ.ಪಂ. ಟಾಸ್ಕ್ ಫೋರ್ಸ್‌ ಗಳು ಮಹತ್ವದ ಪಾತ್ರ ವಹಿಸಿವೆ. ಇದೀಗ ಎರಡನೇ ಅಲೆಯನ್ನೂ ನಿಯಂತ್ರಿಸುವಲ್ಲಿ ಈ ಟಾಸ್ಕ್ಫೋರ್ಸ್‌ ಗಳು ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ತಿಳಿಸಿದ್ದಾರೆ.

ವೀಡಿಯೋ ಸಂವಾದದ ಸಂದರ್ಭ ಮಾತನಾಡಿದ ಅವರು, ಸೋಂಕಿತರನ್ನು ಕೇರ್‌ ಸೆಂಟರ್‌ ಗಳಿಗೆ ದಾಖಲಿಸುವಲ್ಲಿ ಟಾಸ್ಕ್ ಫೋರ್ಸ್‌ ಪಾತ್ರ ಅತ್ಯಂತ ಮಹತ್ವಪೂರ್ಣ ಎಂದರು. ಕಂಟೈನ್‌ ಮೆಂಟ್‌ ಝೊàನ್‌ಗಳನ್ನು ಹೊರತುಪಡಿಸಿ ಇತರ ಪ್ರದೇಶಗಳಲ್ಲಿ ನರೇಗಾ ಕಾಮಗಾರಿ ನಡೆಸುತ್ತಿರುವುದಕ್ಕೆ ಸಚಿವರು ಹರ್ಷ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.