ಆಂಧ್ರಪ್ರದೇಶದಲ್ಲಿ ಪಕ್ಷ ಸಂಘಟನೆ: ಸಾಕೆ ಶೈಲಜನಾಥ

Team Udayavani, Jan 23, 2020, 11:10 PM IST

ಬೆಂಗಳೂರು: ಆಂಧ್ರಪ್ರದೇಶದಲ್ಲಿ ಎಲ್ಲ ಪಕ್ಷಗಳು ಬಿಜೆಪಿ ಪರವಾಗಿದ್ದು, ಅಲ್ಲಿನ ಜನರನ್ನು ಕಾಪಾಡುವುದಕ್ಕೆ ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ ಎಂದು ಆಂಧ್ರಪ್ರದೇಶ ಪ್ರದೇಶ ಕಾಂಗ್ರೆಸ್‌ ನೂತನ ಅಧ್ಯಕ್ಷ ಸಾಕೆ ಶೈಲಜನಾಥ ಹೇಳಿದ್ದಾರೆ.

ನೂತನ ಅಧ್ಯಕ್ಷರಾಗಿ ಕೆಪಿಸಿಸಿ ಕಚೇರಿಗೆ ಆಗಮಿಸಿದ ಅವರು, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕಾರ್ಯದರ್ಶಿಯಾಗಿ ಕಲಬುರಗಿ ವಿಭಾಗದಲ್ಲಿ ಕೆಲಸ ಮಾಡುವಾಗ ಕೆಲವು ಸಿಹಿ ಕಹಿ ಘಟನೆಗಳನ್ನು ನೋಡಿದ್ದೇನೆ. ಪಕ್ಷದ ಹೈಕಮಾಂಡ್‌ ಗುರುತರ ಜವಾಬ್ದಾರಿ ವಹಿಸಿದ್ದು, ಕರ್ನಾಟಕದಲ್ಲಿ ಕಾಂಗ್ರೆಸ್‌ ಬಲಿಷ್ಠವಾಗಿದೆ. ಇಲ್ಲಿ ಪಕ್ಷ ಸಂಘಟನೆಯ ಬಗ್ಗೆ ಕಲಿತಿರುವ ಪಾಠವನ್ನು ಆಂಧ್ರ ಪ್ರದೇಶದಲ್ಲಿ ಆಳವಡಿಸುವ ಪ್ರಯತ್ನ ಮಾಡುತ್ತೇನೆ ಎಂದರು.

ಈಗಿರುವ ಕೇಂದ್ರ ಸರ್ಕಾರ ಜನ ವಿರೋಧಿಯಾಗಿದ್ದು. ತತ್ವ ಸಿದ್ದಾಂತಗಳ ಮೇಲೆ ನಡೆಯುವ ಪಕ್ಷ ಕಾಂಗ್ರೆಸ್‌ ಮಾತ್ರ. ದೇಶದಲ್ಲಿ ನಕಲಿ ದೇಶ ಭಕ್ತರ ಹೆಸರಿನಲ್ಲಿ ಸಮಾಜ ಒಡೆಯುವ ಕೆಲಸವಾಗುತ್ತಿದೆ. ಪ್ರಜಾಪ್ರಭುತ್ವ ನಶಿಸುವ ಸಂದರ್ಭ ಬಂದಿದೆ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಬೇಕಿದೆ ಎಂದು ಹೇಳಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ