ಅದಮಾರು ಮಠದ ಪರ್ಯಾಯ ಆರಂಭ

Team Udayavani, Jan 19, 2020, 3:07 AM IST

adamau

ಉಡುಪಿ: ಉಡುಪಿ ಶ್ರೀಕೃಷ್ಣ ಮಠದಲ್ಲಿ ಎರಡು ವರ್ಷಗಳಿಗೊಮ್ಮೆ ನಡೆಯುವ ಪರ್ಯಾಯ ಉತ್ಸವದಲ್ಲಿ ಅದಮಾರು ಮಠದ ಶ್ರೀ ಈಶ ಪ್ರಿಯತೀರ್ಥ ಶ್ರೀಪಾದರು ಶನಿವಾರ ಮುಂಜಾವ ಶ್ರೀಕೃಷ್ಣ ದೇವರ ಪೂಜಾಕೈಂಕರ್ಯದ ಸಂಕಲ್ಪ ಮಾಡಿದರು. 1,522ರಲ್ಲಿ ಎರಡು ವರ್ಷಗಳ ಪರ್ಯಾಯ ಪೂಜಾ ಕ್ರಮ ಆರಂಭವಾಗಿದ್ದು, ಈಗ 250ನೆಯ ಪರ್ಯಾಯ ಪೂಜಾವಧಿಯ ಅಧಿಕಾರ ಹಸ್ತಾಂತರಕ್ಕೆ ಸಂಬಂಧಿಸಿದಂತೆ ವಿವಿಧ ಧಾರ್ಮಿಕ ವಿಧಿಗಳು ಶನಿವಾರ ಬೆಳಗಿನ ಜಾವ ನಡೆದವು.

ಪರ್ಯಾಯದ ವಿಧಿ, ವಿಧಾನಗಳು
* ಶುಕ್ರವಾರ ಮಧ್ಯರಾತ್ರಿಯ ಬಳಿಕ ಕಾಪು ದಂಡತೀರ್ಥದಲ್ಲಿ ಪವಿತ್ರ ಸ್ನಾನ ಮಾಡಿ ಬಂದ ಶ್ರೀ ಈಶಪ್ರಿಯತೀರ್ಥರು, ಉಡುಪಿ ಜೋಡುಕಟ್ಟೆ ಮಂಟಪದಲ್ಲಿ ಪಟ್ಟದ ದೇವರ ಪೂಜೆ ನಡೆಸಿದರು.

* ಬಳಿಕ, ಪರ್ಯಾಯ ಮೆರವಣಿಗೆ ಆರಂಭಗೊಂಡಿತು. ವಿವಿಧ ಮಠಾಧೀಶರೂ ಮೆರವಣಿಗೆಯಲ್ಲಿ ಸಾಗಿ ಬಂದರು.

* ಮೆರವಣಿಗೆ ಶನಿವಾರ ಬೆಳಗ್ಗೆ ರಥಬೀದಿಯನ್ನು ತಲುಪಿದಾಗ, ಮೇನೆಯಿಂದ ಇಳಿದ ಶ್ರೀಪಾದರು ಹಾಸುಗಂಬಳಿಯ ಮೇಲೆ ನಡೆದುಕೊಂಡು ಬಂದು ಕನಕನಕಿಂಡಿಯಲ್ಲಿ ಶ್ರೀಕೃಷ್ಣ ದೇವರ ದರ್ಶನ ಪಡೆದರು. ಅಲ್ಲಿ ಶಿಬರೂರು ವಾಸುದೇವ ಆಚಾರ್ಯರು ಎರಡು ವರ್ಷಗಳ ಪರ್ಯಾಯ ಪೂಜಾ ವ್ರತವನ್ನು ಕೈಗೊಳ್ಳುವ ಸಂಕಲ್ಪವನ್ನು ಸ್ವಾಮೀಜಿಯವರಿಂದ ಮಾಡಿಸಿದರು. ಬಳಿಕ, ನವಗ್ರಹದಾನಗಳನ್ನು ನೀಡಲಾಯಿತು.

* ಅಲ್ಲಿಂದ ಶ್ರೀಪಾದರು ಚಂದ್ರಮೌಳೀಶ್ವರ, ಅನಂತೇಶ್ವರ ದೇಗುಲಗಳಿಗೆ ತೆರಳಿ ದೇವರ ದರ್ಶನ ಪಡೆದರು. ಅನಂತೇಶ್ವರ ದೇವಸ್ಥಾನದೊಳಗೆ ಇರುವ ಮಾಧ್ವರು ಕೊನೆಯದಾಗಿ ಕಾಣಿಸಿಕೊಂಡ ಸ್ಥಳದಲ್ಲಿ ಪ್ರಾರ್ಥಿಸಿದರು. ಶ್ರೀಪಾದರ ದೇವರ ದರ್ಶನದ ವೇಳೆ ಚಂದ್ರಮೌಳೀಶ್ವರ ಮತ್ತು ಅನಂತೇಶ್ವರನ ಸನ್ನಿಧಿಯಲ್ಲಿ ಆಯಾ ದೇವತಾ ಧ್ಯಾನಶ್ಲೋಕಗಳನ್ನು ಅರ್ಚಕರು ಪಠಿಸಿದರು.

ಪಲಿಮಾರು ಶ್ರೀಗಳಿಂದ ನೈರ್ಮಲ್ಯ ವಿಸರ್ಜನ ಪೂಜೆ: ಶ್ರೀಕೃಷ್ಣ ಮಠದಲ್ಲಿ ನಿರ್ಗಮನ ಪರ್ಯಾಯ ಪೀಠಾಧೀಶ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥರು ಶುಕ್ರವಾರ ಮಧ್ಯರಾತ್ರಿಯಿಂದಲೇ ಪರ್ಯಾಯ ಪೀಠದಲ್ಲಿ ಕುಳಿತುಕೊಂಡು, ಭಕ್ತರಿಗೆ ಪ್ರಸಾದ ವಿತರಿಸಿದರು. ಪ್ರಾತಃಕಾಲ ಸ್ನಾನ ಮಾಡಿ, ಶ್ರೀಕೃಷ್ಣನಿಗೆ ನೈರ್ಮಲ್ಯ ವಿಸರ್ಜನೆ ಪೂಜೆ ನಡೆಸಿದರು. ಅದಮಾರು ಮಠದ ವಿಶ್ವಪ್ರಿಯತೀರ್ಥರೂ ಉಪಸ್ಥಿತರಿದ್ದು, ಪೂಜೆಗೆ ಸಹಕರಿಸಿದರು.

ಅದಮಾರು ಕಿರಿಯ ಶ್ರೀಗಳಿಗೆ ಸ್ವಾಗತ: ಈಶಪ್ರಿಯತೀರ್ಥರು ಶ್ರೀಕೃಷ್ಣ ಮಠವನ್ನು ಪ್ರವೇಶಿಸುವಾಗ ಪಲಿಮಾರು ಮಠದ ವಿದ್ಯಾಧೀಶತೀರ್ಥ ಶ್ರೀಪಾದರು ಇದಿರುಗೊಂಡು ಮಠದೊಳಗೆ ಕರೆದೊಯ್ದರು. ಮಧ್ವಸರೋವರದಲ್ಲಿ ಪಾದಪ್ರಾಕ್ಷಾಳನ ನಡೆಸಿದ ಬಳಿಕ ದೇವರ ದರ್ಶನ ಮಾಡಿಸಿದರು. ಶ್ರೀಕೃಷ್ಣಮಠದ ಗರ್ಭಗುಡಿಯ ಹೊರಗೆ ಇರುವ ಆಚಾರ್ಯ ಮಧ್ವರ ಪ್ರತಿಮೆ ಎದುರು ಪಲಿಮಾರು ಮಠಾಧೀಶರು ಅಕ್ಷಯಪಾತ್ರೆ, ಬೀಗದ ಕೀಲಿಗಳನ್ನು ಅದಮಾರು ಮಠದ ಹಿರಿಯ ಮತ್ತು ಕಿರಿಯ ಶ್ರೀಗಳಿಗೆ ಹಸ್ತಾಂತರಿಸಿದರು. ಈ ವೇಳೆ, ಮಂಗಲದ ಸಂಕೇತವಾಗಿ ವೈದಿಕರು ವೇದಗಳ ವಿವಿಧ ಸೂಕ್ತಗಳನ್ನು ಪಠಿಸಿದರು.

ಸರ್ವಜ್ಞ ಪೀಠಾರೋಹಣ: ಸರ್ವಜ್ಞ ಪೀಠಾರೋಹಣ ಮಾಡುವ ಸಂದರ್ಭದಲ್ಲಿ ಮೊದಲಿಗೆ ಪಲಿಮಾರು ಶ್ರೀಪಾದರು ಅದಮಾರು ಹಿರಿಯ ಶ್ರೀಗಳನ್ನು ಪೀಠದಲ್ಲಿ ಕುಳ್ಳಿರಿಸಿದರು. ಬಳಿಕ, ಹಿರಿಯ ಶ್ರೀಗಳು ತಮ್ಮ ಪಟ್ಟಶಿಷ್ಯ ಈಶಪ್ರಿಯತೀರ್ಥರನ್ನು ಪೀಠದಲ್ಲಿ ಕುಳ್ಳಿರಿಸಿದರು. ಅಲ್ಲಿಂದ ನೇರವಾಗಿ ಬಡಗುಮಾಳಿಗೆಯಲ್ಲಿ ನಿರ್ಮಿಸಲಾದ ಅರಳು ಗದ್ದಿಗೆಯಲ್ಲಿ ವಿವಿಧ ಮಠಾಧೀಶರು ಅಲಂಕೃತರಾದರು.

ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥರು, ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥರು, ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥರು, ಸೋದೆ ಮಠದ ಶ್ರೀ ವಿಶ್ವವಲ್ಲಭತೀರ್ಥರು, ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥರು ಮತ್ತು ಶ್ರೀ ವಿದ್ಯಾರಾಜೇಶ್ವರತೀರ್ಥರಿಗೆ ಶ್ರೀ ಈಶ ಪ್ರಿಯತೀರ್ಥರು ಗಂಧಾದಿ ಉಪಚಾರಗಳನ್ನು ಮಾಡಿದರು.

ಇತರ ಮಠಾಧೀಶರು ಶ್ರೀ ಈಶ ಪ್ರಿಯತೀರ್ಥರಿಗೆ ಪಟ್ಟದ ಕಾಣಿಕೆಯನ್ನು ಸಮರ್ಪಿಸಿದರು. ನೈರ್ಮಲ್ಯ ವಿಸರ್ಜನೆ ಪೂಜೆಯ ಬಳಿಕ ನಡೆಯಬೇಕಾದ ಉಷ:ಕಾಲ ಪೂಜೆ, ಪಂಚಾಮೃತ ಅಭಿಷೇಕ, ಕಲಶಪೂಜೆ ಮೊದಲಾದ ಪೂಜೆಗಳನ್ನು ಇತರ ಮಠಾಧೀಶರು ನಡೆಸಿದರೆ, ಪರ್ಯಾಯ ಪೀಠಸ್ಥ ಶ್ರೀ ಈಶಪ್ರಿಯತೀರ್ಥರು ಅರ್ಚನೆ, ಅವಸರ ಸನಕಾದಿ ಪೂಜೆ, ಮಹಾಪೂಜೆಗಳನ್ನು ಪ್ರಥಮ ಬಾರಿಗೆ ನಡೆಸಿದರು. ಬಳಿಕ ಮಹಾ ಅನ್ನಸಂತರ್ಪಣೆ ನಡೆಯಿತು.

ಅಖಂಡ ಭಜನೆ ಸಮಾಪನ: ಶ್ರೀಕೃಷ್ಣ ಮಠದ ಕನಕಗೋಪುರದ ಬಳಿ ಎರಡು ವರ್ಷಗಳ ಹಿಂದೆ ಜನವರಿ 18ರ ಸೂರ್ಯೋದಯದ ವೇಳೆ ಆರಂಭಗೊಂಡ ಅಖಂಡ ಭಜನ ಕಾರ್ಯಕ್ರಮವು ಶನಿವಾರ ಸೂರ್ಯೋದಯದ ವೇಳೆ ಸಮಾಪನಗೊಂಡಿತು. ಅದಮಾರು ಮಠದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಪಲಿಮಾರು ಮಠದ ಪಟ್ಟದ ದೇವರಾದ ಶ್ರೀ ರಾಮಚಂದ್ರ ದೇವರಿಗೆ ಮಂಗಳಾರತಿ ಬೆಳಗುವ ಮೂಲಕ ಅಖಂಡ ಭಜನೆ ಮುಕ್ತಾಯಗೊಂಡಿತು.

ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಮತ್ತು ಶ್ರೀ ವಿದ್ಯಾ ರಾಜೇಶ್ವರತೀರ್ಥ ಶ್ರೀಪಾದರು ಉಪಸ್ಥಿತರಿದ್ದರು. ಸಾವಿರಾರು ಭಜನಾ ಮಂಡಳಿಗಳ ಸದಸ್ಯರು ಹರಿ ನಾಮ ಸಂಕೀರ್ತನ ಯಜ್ಞದಲ್ಲಿ ಪಾಲ್ಗೊಂಡಿದ್ದರು. ತಿರುಪತಿ ಮತ್ತು ಮಂತ್ರಾಲಯ ದಾಸ ಸಾಹಿತ್ಯ ಪ್ರಾಜೆಕ್ಟ್ ಮತ್ತು ಉಡುಪಿ ಜಿಲ್ಲಾ ಭಜನಾ ಮಂಡಳಿಗಳ ಒಕ್ಕೂಟದ ಭಜನಾ ಮಂಡಳಿಗಳ ಸಹಕಾರದಲ್ಲಿ ಕಾರ್ಯಕ್ರಮ ಸಂಪನ್ನಗೊಂಡಿತು.

ಟಾಪ್ ನ್ಯೂಸ್

ರಾಜ್ಯದಲ್ಲಿಂದು 41,457 ಕೋವಿಡ್ ಪ್ರಕರಣಗಳು ಪತ್ತೆ : ಪಾಸಿಟಿವಿಟಿ ದರ 22.30% ಕ್ಕೆ ಏರಿಕೆ

ರಾಜ್ಯದಲ್ಲಿಂದು 41,457 ಕೋವಿಡ್ ಪ್ರಕರಣಗಳು ಪತ್ತೆ : ಪಾಸಿಟಿವಿಟಿ ದರ 22.30% ಕ್ಕೆ ಏರಿಕೆ

ರಾಷ್ಟ್ರೀಯ ಹಬ್ಬಗಳಲ್ಲಿ ಸ್ವಯಃ ಪ್ರೇರಣೆಯಿಂದ ಭಾಗವಹಿಸಿ : ಶಾಸಕ ಸಿದ್ದು ಸವದಿ

ರಾಷ್ಟ್ರೀಯ ಹಬ್ಬಗಳಲ್ಲಿ ಸ್ವಯಃ ಪ್ರೇರಣೆಯಿಂದ ಭಾಗವಹಿಸಿ : ಶಾಸಕ ಸಿದ್ದು ಸವದಿ

ಸೋಂಕು ನಿಯಂತ್ರಣಕ್ಕೆ 15-20 ದಿನ ಶಾಲಾ-ಕಾಲೇಜು ಮುಚ್ಚಿ;ರಾಜ್ಯ ಸರಕಾರಕ್ಕೆ ಹೆಚ್.ಡಿ.ಕೆ ಸಲಹೆ

ಸೋಂಕು ನಿಯಂತ್ರಣಕ್ಕೆ 15-20 ದಿನ ಶಾಲಾ-ಕಾಲೇಜು ಮುಚ್ಚಿ;ರಾಜ್ಯ ಸರಕಾರಕ್ಕೆ ಹೆಚ್.ಡಿ.ಕೆ ಸಲಹೆ

30 ದಿನದೊಳಗೆ ಗಂಗಾ ಕಲ್ಯಾಣ ಸಂಪರ್ಕ: ಸಚಿವ ವಿ.ಸುನೀಲ್ ಕುಮಾರ್

30 ದಿನದೊಳಗೆ ಗಂಗಾ ಕಲ್ಯಾಣ ಸಂಪರ್ಕ: ಸಚಿವ ವಿ.ಸುನೀಲ್ ಕುಮಾರ್

ವ್ಯವಸ್ಥೆಯ ಸುಧಾರಣೆ ಮುಖ್ಯವೇ ವಿನಾ ವೈಯಕ್ತಿಕ ಪ್ರತಿಷ್ಠೆಯಲ್ಲ; ಅಶ್ವತ್ಥನಾರಾಯಣ

ವ್ಯವಸ್ಥೆಯ ಸುಧಾರಣೆ ಮುಖ್ಯವೇ ವಿನಾ ವೈಯಕ್ತಿಕ ಪ್ರತಿಷ್ಠೆಯಲ್ಲ; ಅಶ್ವತ್ಥನಾರಾಯಣ

ನಾನೊಬ್ಬ ಯೋಧ, ಪಂಜಾಬ್ ಗತ ವೈಭವ ಮರು ಸ್ಥಾಪಿಸುತ್ತೇನೆ; ಭಗವಂತ ಮಾನ್

ನಾನೊಬ್ಬ ಯೋಧ, ಪಂಜಾಬ್ ಗತ ವೈಭವ ಮರು ಸ್ಥಾಪಿಸುತ್ತೇನೆ; ಭಗವಂತ ಮಾನ್

ಪಂಜಾಬ್ ಸಿಎಂ ಚನ್ನಿ ಸಂಬಂಧಿಗಳ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ

ಪಂಜಾಬ್ ಸಿಎಂ ಚನ್ನಿ ಸಂಬಂಧಿಗಳ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಕಾರ ಸಾಲು ಮಾರಾಟ ಪ್ರಕ್ರಿಯೆಗೆ ಚಾಲನೆ! ನಗರಸಭೆ ಕೋಟ್ಯಂತರ ರೂ. ಆಸ್ತಿ ಕೈತಪುವ ಆತಂಕ

ವಕಾರ ಸಾಲು ಮಾರಾಟ ಪ್ರಕ್ರಿಯೆಗೆ ಚಾಲನೆ! ನಗರಸಭೆ ಕೋಟ್ಯಂತರ ರೂ. ಆಸ್ತಿ ಕೈತಪುವ ಆತಂಕ

ರಾಜ್ಯದಲ್ಲಿಂದು 41,457 ಕೋವಿಡ್ ಪ್ರಕರಣಗಳು ಪತ್ತೆ : ಪಾಸಿಟಿವಿಟಿ ದರ 22.30% ಕ್ಕೆ ಏರಿಕೆ

ರಾಜ್ಯದಲ್ಲಿಂದು 41,457 ಕೋವಿಡ್ ಪ್ರಕರಣಗಳು ಪತ್ತೆ : ಪಾಸಿಟಿವಿಟಿ ದರ 22.30% ಕ್ಕೆ ಏರಿಕೆ

ರಾಷ್ಟ್ರೀಯ ಹಬ್ಬಗಳಲ್ಲಿ ಸ್ವಯಃ ಪ್ರೇರಣೆಯಿಂದ ಭಾಗವಹಿಸಿ : ಶಾಸಕ ಸಿದ್ದು ಸವದಿ

ರಾಷ್ಟ್ರೀಯ ಹಬ್ಬಗಳಲ್ಲಿ ಸ್ವಯಃ ಪ್ರೇರಣೆಯಿಂದ ಭಾಗವಹಿಸಿ : ಶಾಸಕ ಸಿದ್ದು ಸವದಿ

ಸೋಂಕು ನಿಯಂತ್ರಣಕ್ಕೆ 15-20 ದಿನ ಶಾಲಾ-ಕಾಲೇಜು ಮುಚ್ಚಿ;ರಾಜ್ಯ ಸರಕಾರಕ್ಕೆ ಹೆಚ್.ಡಿ.ಕೆ ಸಲಹೆ

ಸೋಂಕು ನಿಯಂತ್ರಣಕ್ಕೆ 15-20 ದಿನ ಶಾಲಾ-ಕಾಲೇಜು ಮುಚ್ಚಿ;ರಾಜ್ಯ ಸರಕಾರಕ್ಕೆ ಹೆಚ್.ಡಿ.ಕೆ ಸಲಹೆ

30 ದಿನದೊಳಗೆ ಗಂಗಾ ಕಲ್ಯಾಣ ಸಂಪರ್ಕ: ಸಚಿವ ವಿ.ಸುನೀಲ್ ಕುಮಾರ್

30 ದಿನದೊಳಗೆ ಗಂಗಾ ಕಲ್ಯಾಣ ಸಂಪರ್ಕ: ಸಚಿವ ವಿ.ಸುನೀಲ್ ಕುಮಾರ್

MUST WATCH

udayavani youtube

ಕೃಷ್ಣಾಪುರ ಪರ್ಯಾಯ – 2022 Highlights

udayavani youtube

18 ವರ್ಷಗಳ ವೈವಾಹಿಕ ಜೀವನಕ್ಕೆ ಅಂತ್ಯ ಹಾಡಿದ ಧನುಷ್ – ಐಶ್ವರ್ಯಾ

udayavani youtube

ಪರ್ಯಾಯ ಮಹೋತ್ಸವ : ದಂಡ ತೀರ್ಥದಲ್ಲಿ ಶ್ರೀ ಕೃಷ್ಣಾಪುರ ಮಠಾಧೀಶರಿಂದ ಪವಿತ್ರ ಸ್ನಾನ

udayavani youtube

ನಿಷೇಧದ ನಡುವೆಯೂ ರಥೋತ್ಸವ : ಜನರನ್ನು ನಿಯಂತ್ರಿಸಲು ಪೊಲೀಸರು ವಿಫಲ

udayavani youtube

ಉಡುಪಿ : ಇಂದು (ಜ.17) ರಾತ್ರಿ 10 ಗಂಟೆ ಒಳಗೆ ಅಂಗಡಿ ಮುಂಗಟ್ಟು ಮುಚ್ಚಲು ನಗರ ಸಭೆ ಆದೇಶ

ಹೊಸ ಸೇರ್ಪಡೆ

ವಕಾರ ಸಾಲು ಮಾರಾಟ ಪ್ರಕ್ರಿಯೆಗೆ ಚಾಲನೆ! ನಗರಸಭೆ ಕೋಟ್ಯಂತರ ರೂ. ಆಸ್ತಿ ಕೈತಪುವ ಆತಂಕ

ವಕಾರ ಸಾಲು ಮಾರಾಟ ಪ್ರಕ್ರಿಯೆಗೆ ಚಾಲನೆ! ನಗರಸಭೆ ಕೋಟ್ಯಂತರ ರೂ. ಆಸ್ತಿ ಕೈತಪುವ ಆತಂಕ

ಕೊರಟಗೆರೆ: ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ ರದ್ದಾಗಿದ್ದರೂ ನೂರಾರು ರೈತರ ಆಗಮನ

ಕೊರಟಗೆರೆ: ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ ರದ್ದಾಗಿದ್ದರೂ ನೂರಾರು ರೈತರ ಆಗಮನ

ಬೋಗಸ್ ಹಾಜರಿ ಹಾಕಲು ಗ್ರಾಪಂ ಸದಸ್ಯರಿಂದಲೇ ಒತ್ತಡ: ಆಕ್ರೋಶ

ಬೋಗಸ್ ಹಾಜರಿ ಹಾಕಲು ಗ್ರಾಪಂ ಸದಸ್ಯರಿಂದಲೇ ಒತ್ತಡ: ಆಕ್ರೋಶ

ರಾಜ್ಯದಲ್ಲಿಂದು 41,457 ಕೋವಿಡ್ ಪ್ರಕರಣಗಳು ಪತ್ತೆ : ಪಾಸಿಟಿವಿಟಿ ದರ 22.30% ಕ್ಕೆ ಏರಿಕೆ

ರಾಜ್ಯದಲ್ಲಿಂದು 41,457 ಕೋವಿಡ್ ಪ್ರಕರಣಗಳು ಪತ್ತೆ : ಪಾಸಿಟಿವಿಟಿ ದರ 22.30% ಕ್ಕೆ ಏರಿಕೆ

ಪ್ರಧಾನಿ ಮೋದಿಯಿಂದ ಕಾಶಿ ಕ್ಷೇತ್ರಕ್ಕೆ ವಿಶ್ವ ಪ್ರಸಿದ್ಧಿ: ಶಿವಾಚಾರ್ಯ ಮಹಾಸ್ವಾಮೀಜಿ

ಪ್ರಧಾನಿ ಮೋದಿಯಿಂದ ಕಾಶಿ ಕ್ಷೇತ್ರಕ್ಕೆ ವಿಶ್ವ ಪ್ರಸಿದ್ಧಿ: ಶಿವಾಚಾರ್ಯ ಮಹಾಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.