ಪಿಡಿಓ, ಗ್ರಾಮ ಲೆಕ್ಕಿಗರ ಕೊರತೆ: ಉಮಾನಾಥ ಕೋಟ್ಯಾನ್
Team Udayavani, Feb 15, 2023, 5:45 AM IST
ವಿಧಾನಸಭೆ: ಮೂಡಬಿದರೆ -ಮೂಲ್ಕಿ ವಿಧಾನಸಭೆ ಕ್ಷೇತ್ರದ ಗ್ರಾಮ ಪಂಚಾಯಿತಿಗಳಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಗ್ರಾಮ ಲೆಕ್ಕಿಗರ ಕೊರತೆ ಹೆಚ್ಚಾಗಿದ್ದು ತಕ್ಷಣ ಭರ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಎಂದು ಬಿಜೆಪಿಯ ಉಮಾನಾಥ ಕೋಟ್ಯಾನ್ ಆಗ್ರಹಿಸಿದರು.
ಪ್ರಶ್ನೋತ್ತರ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಎರಡು -ಮೂರು ಗ್ರಾಮ ಪಂಚಾಯಿತಿಗೆ ಒಬ್ಬ ಪಿಡಿಓ, ಐದಾರು ಗ್ರಾಮಕ್ಕೆ ಒಬ್ಬ ಗ್ರಾಮ ಲೆಕ್ಕಿಗನನ್ನು ನೀಡಲಾಗಿದೆ. ಆದರೆ, ಇದರಿಂದ ಜನಸಾಮಾನ್ಯರ ದೈನಂದಿನ ಕೆಲಸ ಕಾರ್ಯಗಳು ವಿಳಂಬ ಆಗುತ್ತಿವೆ ಎಂದು ಹೇಳಿದರು.
ಸರ್ಕಾರದ ಪರವಾಗಿ ಉತ್ತರಿಸಿದ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್, ಪಿಡಿಓ ಹಾಗೂ ಗ್ರಾಮ ಲೆಕ್ಕಿಗರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು ಆದಷ್ಟು ಬೇಗ ಭರ್ತಿ ಮಾಡಲಾಗುವುದು. ತುರ್ತು ಅವಶ್ಯ ಇದ್ದ ಕಡೆ ಬೇರೊಬ್ಬರ ನಿಯೋಜನೆಗೂ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
MUST WATCH
ಹೊಸ ಸೇರ್ಪಡೆ
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ