ಕಿವೀಸ್ ಬ್ಯಾಟಿಂಗ್ ಕೋಚ್ ಪೀಟರ್ ಫುಲ್ಟನ್ ರಾಜೀನಾಮೆ
Team Udayavani, Jul 3, 2020, 5:39 AM IST
ವೆಲ್ಲಿಂಗ್ಟನ್: ನ್ಯೂಜಿಲ್ಯಾಂಡ್ ಕ್ರಿಕೆಟ್ ತಂಡದ ಬ್ಯಾಟಿಂಗ್ ಕೋಚ್ ಪೀಟರ್ ಫುಲ್ಟನ್ ರಾಜೀನಾಮೆ ನೀಡಿದ್ದಾರೆ. ಅವರಿನ್ನು ಕ್ಯಾಂಟರ್ಬರಿ ಪುರುಷರ ಕ್ರಿಕೆಟ್ ತಂಡದ ಪ್ರಧಾನ ಕೋಚ್ ಆಗಿ ಕರ್ತವ್ಯ ನಿಭಾಯಿಸಲಿದ್ದಾರೆ.
ನ್ಯೂಜಿಲ್ಯಾಂಡ್ ಪರ 23 ಟೆಸ್ಟ್ ಮತ್ತು 49 ಏಕದಿನ ಪಂದ್ಯಗಳನ್ನು ಆಡಿದ್ದ ಪೀಟರ್ ಫುಲ್ಟನ್ ಕಳೆದ ವರ್ಷದ ಆಗಸ್ಟ್ನಲ್ಲಿ ಬ್ಯಾಟಿಂಗ್ ಕೋಚ್ ಆಗಿ ನೇಮಕಗೊಂಡಿದ್ದರು.
“ಮತ್ತೆ ನ್ಯೂಜಿಲ್ಯಾಂಡ್ ರಾಷ್ಟ್ರೀಯ ತಂಡದಲ್ಲಿ ಬೇರೊಂದು ಜವಾಬ್ದಾರಿಯೊಂದಿಗೆ ಕಾಣಿಸಿಕೊಂಡದ್ದು ನನ್ನ ಸೌಭಾಗ್ಯ.
ಇದೊಂದು ಮಹಾನ್ ಗೌರವ. ಆದರೆ ಕ್ಯಾಂಟರ್ಬರಿಯ ಆಹ್ವಾನವನ್ನು ತಿರಸ್ಕರಿಸುವ ಸ್ಥಿತಿಯಲ್ಲಿ ನಾನಿಲ್ಲ’ ಎಂದು ಫುಲ್ಟನ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್