Chandigarh: ಹುಂಜಗಳಿಗೆ ಪೊಲೀಸ್ ಭದ್ರತೆ!
Team Udayavani, Jan 25, 2024, 9:25 PM IST
ಚಂಡೀಗಢ: ಪಂಜಾಬ್ನ ಬಟಿಂಡಾ ಜಿಲ್ಲೆಯ ಬುಲ್ಲವಾನಾ ಗ್ರಾಮದಲ್ಲಿ ಆಯೋಜಿಸಿದ್ದ ಕೋಳಿ ಅಂಕದ ಮೇಲೆ ದಾಳಿ ನಡೆಸಿದ ಪೊಲೀಸರು, ಪ್ರಾಣಿ ಹಿಂಸೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಇದೇ ವೇಳೆ ರಕ್ಷಿಸಿರುವ ಎರಡು ಹುಂಜಗಳಿಗೆ ಪೊಲೀಸರು ಭದ್ರತೆ ನೀಡುತ್ತಿದ್ದಾರೆ.
ಬುಲ್ಲವಾನಾ ಗ್ರಾಮದಲ್ಲಿ ಆಯೋಜಿಸಿದ್ದ ಕೋಳಿ ಅಂಕದಲ್ಲಿ ಸುಮಾರು 200 ಜನರು ಸೇರಿದ್ದರು. ಪೊಲೀಸರು ಅಲ್ಲಿಗೆ ದಾಳಿ ನಡೆಸುತ್ತಿದ್ದಂತೆ ಎಲ್ಲರೂ ಕಾಲ್ಕಿತ್ತರು. ಕೋಳಿ ಅಂಕ ಆಯೋಜಿಸಿದ್ದ ಮೂರು ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಇಬ್ಬರು ತಲೆಮರೆಸಿಕೊಂಡಿದ್ದಾರೆ. ಅಲ್ಲದೇ 11 ಟ್ರೋಫಿಗಳನ್ನು ವಶಪಡಿಸಿಕೊಂಡಿದ್ದಾರೆ. ಇದೇ ವೇಳೆ ಪೊಲೀಸರು ಎರಡು ಹುಂಜಗಳನ್ನು ರಕ್ಷಿಸಿದ್ದು, ಗಾಯಗೊಂಡ ಹುಂಜಕ್ಕೆ ಆಸ್ಪತ್ರೆಗೆ ಕರೆದೊಯ್ದು, ಚಿಕಿತ್ಸೆ ಕೊಡಿಸಿದ್ದಾರೆ. ಅಲ್ಲದೇ ಅವುಗಳಿಗೆ ಆಹಾರ ನೀಡಿ, ದಿನದ 24 ಗಂಟೆ ಕಾವಲು ಕಾಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ