ರಾಜೀನಾಮೆ ಇತ್ಯರ್ಥದವರೆಗೆ ವಿಶ್ವಾಸಮತ ಮುಂದೂಡಿ

Team Udayavani, Jul 23, 2019, 3:09 AM IST

rajiname

ವಿಧಾನಸಭೆ: ಹದಿನೈದು ಶಾಸಕರ ರಾಜೀನಾಮೆ ವಿಚಾರ ಇತ್ಯರ್ಥಗೊಳ್ಳದೆ ವಿಶ್ವಾಸಮತವನ್ನು ನಿರ್ಣಯ ಮತಕ್ಕೆ ಹಾಕುವುದು ಬೇಡ. ಒಂದೊಮ್ಮೆ ಮತಕ್ಕೆ ಹಾಕಿದರೆ ಅದಕ್ಕೆ ಸಿಂಧುತ್ವ ಇರುವುದಿಲ್ಲ ಎಂದು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣಬೈರೇಗೌಡರು ಅಭಿಪ್ರಾಯಪಟ್ಟಿದ್ದಾರೆ. ವಿಶ್ವಾಸಮತ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜೀನಾಮೆ ನೀಡಿರುವ 15 ಶಾಸಕರು ಈ ಮನೆಯ ಸದಸ್ಯರು ಹೌದಾ? ಇಲ್ಲವಾ? ಎಂಬ ಪ್ರಶ್ನೆ ಮೂಡಿದೆ. ಹೀಗಾಗಿ, ಆ ಪ್ರಕರಣ ಇತ್ಯರ್ಥವಾಗಲೇಬೇಕಿದೆ ಎಂದು ಹೇಳಿದರು.

ಆ ಶಾಸಕರು ಸ್ವ ಇಚ್ಛೆಯಿಂದ ರಾಜೀನಾಮೆ ನೀಡಿದ್ದಾರಾ? ಅದರಲ್ಲಿ ನೈಜತೆ ಇದೆಯಾ ಎಂಬುದನ್ನು ಸಭಾಧ್ಯಕ್ಷರು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕಾಗಿದೆ. ಸದನದ ಸದಸ್ಯರಾಗಿರುವ ಅವರು ವಿಶ್ವಾಸಮತದಂತಹ ಮಹತ್ವದ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳದೆ ಪರಿಪೂರ್ಣವಾಗಲು ಸಾಧ್ಯವಿಲ್ಲ ಎಂದು ವಾದಿಸಿದರು. ಸಾಕಷ್ಟು ಪುರಾವೆಗಳಿವೆ: ಮುಂಬೈನಲ್ಲಿರುವ ಶಾಸಕರಿಗೂ, ನಮಗೂ ಸಂಬಂಧವಿಲ್ಲ ಎಂದು ಬಿಜೆಪಿಯವರು ಹೇಳುತ್ತಾರೆ.

ಆದರೆ, ಪ್ರತಿಪಕ್ಷ ನಾಯಕರ ಆಪ್ತ ಸಹಾಯಕ ಸಂತೋಷ್‌ ಎಂಬುವರು ವಿಶೇಷ ವಿಮಾನದ ಮೂಲಕ ಭಿನ್ನಮತೀಯ ಶಾಸಕರನ್ನು ಮುಂಬೈಗೆ ಕಳುಹಿಸುತ್ತಿರುವುದಕ್ಕೆ ಸಾಕಷ್ಟು ಪುರಾವೆಗಳಿವೆ ಎಂದು ಹೇಳಿದರು. ಸ್ಪೀಕರ್‌ ಅವರು, ಸಂತೋಷ್‌ ಈ ಸದನದ ಸದಸ್ಯರಲ್ಲ. ಹೀಗಾಗಿ, ಅವರ ಹೆಸರಿನ ಪ್ರಸ್ತಾಪ ಬೇಡ ಎಂದು ಸೂಚಿಸಿದರು. ಬಿಜೆಪಿ ನಾಯಕ ಆರ್‌.ಅಶೋಕ್‌ ಅವರು ಎಂಟಿಬಿ ನಾಗರಾಜ್‌ ಅವರ ಜತೆ ಇರುವ ಚಿತ್ರಗಳಿವೆ.

ವಿಶೇಷ ವಿಮಾನವು ಬಿಜೆಪಿ ರಾಜ್ಯಸಭೆ ಸದಸ್ಯರೊಬ್ಬರಿಗೆ ಸೇರಿದ ಸಂಸ್ಥೆಯದು. ಅಶೋಕ್‌ ಹಾಗೂ ಬೋಪಯ್ಯ ಅವರು ಮುಂಬೈನಲ್ಲಿ ಶಾಸಕರಾದ ಆರ್‌.ಶಂಕರ್‌ ಹಾಗೂ ನಾಗೇಶ್‌ ಅವರನ್ನು ಭೇಟಿ ಮಾಡಿರಲಿಲ್ಲವೇ ಎಂದು ಪ್ರಶ್ನಿಸಿದರು. ಕಾಂಗ್ರೆಸ್‌ ಶಾಸಕರನ್ನು ಸೆಳೆಯಲು ಬಿಜೆಪಿ ನಾಯಕರು, ಸಚಿವಗಿರಿ ಆಫ‌ರ್‌, ಹತ್ತು ಕೋಟಿ ರೂ.ಹಣ ಸೇರಿ ಆಮಿಷವೊಡ್ಡಿರುವ ಕುರಿತು ಆಡಿಯೋಗಳ ಬಗ್ಗೆಯೂ ಪ್ರಸ್ತಾಪಿಸಿದ ಕೃಷ್ಣಬೈರೇಗೌಡರು, ಇಷ್ಟೆಲ್ಲಾ ಮಾಡಿ ನಮಗೂ, ಮುಂಬೈನಲ್ಲಿರುವವರಿಗೂ ಯಾವುದೇ ಸಂಬಂಧ ಇಲ್ಲ ಎಂದು ಸುಳ್ಳು ಹೇಳುವುದು ಯಾಕೆ ಎಂದರು.

ಕಾಂಗ್ರೆಸ್‌ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮುನ್ನ ಒಬ್ಬರು, “ನಾನು ರಾಜೀನಾಮೆ ನೀಡಿ ಬಿಜೆಪಿ ಸೇರುತ್ತೇನೆ. ಬಿಜೆಪಿ ನಾಯಕರು ನನ್ನ ಸಂಪರ್ಕದಲ್ಲಿದ್ದಾರೆ’ ಎಂದು ಹೇಳುತ್ತಾರೆ. ರಮೇಶ ಜಾರಕಿಹೊಳಿ ಅವರು ಬಿಜೆಪಿ ನಾಯಕರ ಜತೆ ಸಂಪರ್ಕದಲ್ಲಿ ಕಳೆದ ಏಳು ತಿಂಗಳಿನಿಂದ ಇಲ್ಲವೇ ಎಂದು ಪ್ರಶ್ನಿಸಿದರು. ಪ್ರತಿಪಕ್ಷ ನಾಯಕ ಯಡಿಯೂರಪ್ಪ ಅವರೇ ಮುಂಬೈನಲ್ಲಿರುವ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಅವರು ಸಂತೋಷವಾಗಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.

ಬಿಜೆಪಿ ನಾಯಕರು ಇಬ್ಬರು ಪಕ್ಷೇತರ ಶಾಸಕರು ಸರ್ಕಾರಕ್ಕೆ ಕೊಟ್ಟಿರುವ ಬೆಂಬಲ ವಾಪಸ್‌ ಪಡೆದಿದ್ದಾರೆ. ಅವರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಟ್ವೀಟ್‌ ಮಾಡಿದ್ದರು. ಇದೆಲ್ಲವೂ “ಆಪರೇಷನ್‌ ಕಮಲ’ ಕಾರ್ಯಾಚರಣೆ ಅಲ್ಲವೇ ಎಂದು ಕೇಳಿದರು. 2009ರಲ್ಲಿ ತುರುವೆಕೆರೆ ಜಗ್ಗೇಶ್‌, ಗೋವಿಂದರಾಜನಗರದ ವಿ.ಸೋಮಣ್ಣ, ಅರಬಾವಿ ಬಾಲಚಂದ್ರ ಜಾರಕಿಹೊಳಿ, ಚನ್ನಪಟ್ಟಣ ಅಶ್ವಥ್‌ ಇವರನ್ನೆಲ್ಲಾ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಿಸಿದ್ದು “ಆಪರೇಷನ್‌ ಕಮಲ’ ಅಲ್ಲವೇ ಎಂದರು.

ಆಗ, ಮಧ್ಯಪ್ರವೇಶಿಸಿದ ವಿ.ಸೋಮಣ್ಣ, ಕೃಷ್ಣಬೈರೇಗೌಡರೂ ಜನತಾದಳದಿಂದ ಕಾಂಗ್ರೆಸ್‌ಗೆ ಬಂದವರೇ, ಹಿಂದೆ ಸಿದ್ದರಾಮಯ್ಯ ಅವರು ಜೆಡಿಎಸ್‌ ಬಿಟ್ಟು ಕಾಂಗ್ರೆಸ್‌ ಸೇರಿದವರೇ. ಶಾಸಕನಾದವನಿಗೆ ಕ್ಷೇತ್ರದ ಅಭಿವೃದ್ಧಿಯಾಗುತ್ತಿಲ್ಲ ಎಂದಾಗ ಬೇಸರಗೊಂಡು ರಾಜೀನಾಮೆ ನೀಡುವುದು ಸಹಜ. ರಾಜೀನಾಮೆ ನೀಡಿದ ನಂತರ ಯಾವುದೇ ಪಕ್ಷ ಸೇರಲು ಅವರು ಸ್ವತಂತ್ರರು ಎಂದು ಹೇಳಿದರು.

ಗರಂ ಆದ ಯಡಿಯೂರಪ್ಪ: ಬಿಜೆಪಿಯ ಮಾಧುಸ್ವಾಮಿ, ಶಾಸಕರ ರಾಜೀನಾಮೆ ಪ್ರಕರಣ ಸುಪ್ರೀಂಕೋರ್ಟ್‌ನಲ್ಲಿದೆ. ಶಾಸಕರ ಮೇಲಿನ ಆರೋಪ ಕುರಿತು ಎಸ್‌ಐಟಿ ತನಿಖೆ ನಡೆಯುತ್ತಿದೆ. ಈ ಸದನದಲ್ಲಿ ಆ ಬಗ್ಗೆ ಚರ್ಚೆ ಮಾಡುವುದು ಎಷ್ಟು ಸರಿ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಉಮೇಶ್‌ ಜಾಧವ್‌ ಅವರನ್ನು “ಆಪರೇಷನ್‌ ಕಮಲ’ ಕಾರ್ಯಾಚರಣೆಯಡಿ ಸೆಳೆಯಲಾಯಿತು ಎಂಬ ಕೃಷ್ಣಬೈರೇಗೌಡರ ಆರೋಪಕ್ಕೆ ಪ್ರತಿಪಕ್ಷ ನಾಯಕ ಬಿ.ಎಸ್‌.ಯಡಿಯೂರಪ್ಪ ಗರಂ ಆದರು.

ಉಮೇಶ್‌ ಜಾಧವ್‌ ಅವರ ರಾಜೀನಾಮೆಯನ್ನು ಸ್ಪೀಕರ್‌ ಅವರು ಅಂಗೀಕಾರ ಮಾಡಿದ್ದಾರೆ. ನಂತರ ಅವರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಿ ಸಂಸದರೂ ಆಗಿದ್ದಾರೆ. ಈಗ್ಯಾಕೆ ಆ ವಿಚಾರ ಎಂದು ಹೇಳಿದರು. ಬಸವರಾಜ ಬೊಮ್ಮಾಯಿ ಅವರು, ಯಾರದೇ ಆಗಲಿ ರಾಜೀನಾಮೆ ನೀಡಿ ಅದು ಅಂಗೀಕಾರವಾದ ನಂತರ ಯಾವ ಪಕ್ಷ ಸೇರಬೇಕು ಎಂದು ತೀರ್ಮಾನಿಸಲು ಅವರು ಸ್ವತಂತ್ರರು. ಜೀವನ ಪೂರ್ತಿ ಒಂದೇ ಪಕ್ಷದ ಜೀತದಾಳುಗಳಾಗಿ ಇರುತ್ತಾರಾ ಎಂದು ಪ್ರಶ್ನಿಸಿದರು.

ಅಧಿಕಾರ ಉಳಿಸಿಕೊಳ್ಳಲು ನಾನು ಮಾತನಾಡುತ್ತಿಲ್ಲ. ಸಚಿವಗಿರಿ ನನಗೆ ಅನಿವಾರ್ಯವಲ್ಲ. ಪ್ರಜಾಪ್ರಭುತ್ವ ಉಳಿಸುವ ಕೆಲಸ ಮಾಡಬೇಕಾಗಿದೆ. ಬಿಜೆಪಿಯವರು ದೇಶದಲ್ಲಿ ಯಾವುದೇ ಪಕ್ಷಗಳು ಇರಬಾರದು. ನಾವೇ ಇರಬೇಕು ಎಂಬ ಭಾವನೆ ಹೊಂದಿದ್ದಾರೆ. ಇದು ಸರಿಯಲ್ಲ, ತೆಲಂಗಾಣ, ಆಂಧ್ರ, ಗೋವಾ, ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ವಿದ್ಯಮಾನಗಳು ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಾಯಕಾರಿ. ಇದಕ್ಕೆಲ್ಲಾ ಕಾರಣ ಬಿಜೆಪಿಯೇ ಆಗಿದೆ.
-ಕೃಷ್ಣ ಬೈರೇಗೌಡ. ಸಚಿವ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.