Firecrackers: ಅಪಾಯಕಾರಿ ಪಟಾಕಿ ನಿಷೇಧ- ಸುಪ್ರೀಂ, ಹಸುರು ಪೀಠ ಆದೇಶ ಜಾರಿಗೆ ತೀರ್ಮಾನ

Team Udayavani, Oct 10, 2023, 10:07 PM IST

CRACKERSSS

ಬೆಂಗಳೂರು: ಅತ್ತಿಬೆಲೆ ಪಟಾಕಿ ದುರಂತದ ಬಳಿಕ ಎಚ್ಚೆತ್ತಿರುವ ರಾಜ್ಯ ಸರಕಾರವು ರಾಜಕೀಯ ಸಮಾವೇಶ, ರ್ಯಾಲಿ, ಮೆರವಣಿಗೆ, ದೀಪಾವಳಿ, ಮದುವೆಯಂತಹ ಸಮಾರಂಭಗಳಲ್ಲಿ ಅಪಾಯಕಾರಿ ಪಟಾಕಿಗಳನ್ನು ನಿಷೇಧಿಸಿದೆ. ಇದಕ್ಕೆ ಬದಲಾಗಿ ಹಸುರು ಪಟಾಕಿಯನ್ನಷ್ಟೇ ಬಳಸಬೇಕು ಎಂದು ಕಟ್ಟಾಜ್ಞೆ ಹೊರಡಿಸಿದೆ. ಈ ಮೂಲಕ ಸುಪ್ರೀಂ ಕೋರ್ಟ್‌ ಹಾಗೂ ಹಸುರು ನ್ಯಾಯಪೀಠ ನೀಡಿರುವ ಆದೇಶಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮುಂದಾಗಿದೆ.

ಅತ್ತಿಬೆಲೆ ಪ್ರಕರಣವನ್ನು ಈಗಾಗಲೇ ಸಿಐಡಿ ತನಿಖೆಗೆ ವಹಿಸಿರುವ ಸಿಎಂ ಸಿದ್ದರಾಮಯ್ಯ ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಎಲ್ಲ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸುಪ್ರೀಂ ಕೋರ್ಟ್‌ ಆದೇಶ ಜಾರಿಗೆ ಕ್ರಮ ಕೈಗೊಳ್ಳುವಂತೆ ತಾಕೀತು ಮಾಡಿದರು.

ಸಭೆಯ ಅನಂತರ ಮಾತನಾಡಿದ ಸಿಎಂ, ಅಪಾಯಕಾರಿ ಪಟಾಕಿಗಳನ್ನು ಸಂಪೂರ್ಣ ನಿಷೇಧಿಸಲಾಗಿದೆ. ಪಟಾಕಿ ತಯಾರಕರು, ದಾಸ್ತಾನು ಮಾಡುವವರು ಹಾಗೂ ಮಾರಾಟ ಮಾಡುವವರು ಹಸುರು ಪಟಾಕಿಯನ್ನೇ ಗ್ರಾಹಕರಿಗೆ ನೀಡಬೇಕು. ನಿಯಮ ಉಲ್ಲಂಘಿಸಿದವರ ಪರವಾನಿಗೆ ರದ್ದುಪಡಿಸಲಾಗುತ್ತದೆ. ನಿಯಮ ಉಲ್ಲಂ ಸುವವರು, ಸಭೆ, ಸಮಾರಂಭ ಆಯೋಜಕರ ವಿರುದ್ಧ ಕೂಡ ಪ್ರಕರಣ ದಾಖಲಿಸಲಾಗುತ್ತದೆ ಎಂದು ಎಚ್ಚರಿಸಿದರು.

ಪರವಾನಿಗೆ ರದ್ದು

ಪಟಾಕಿ ತಯಾರಿಕರಿಂದ ಹಿಡಿದು ಮಾರಾಟ ಮಾಡುವವರೆಗೆ ಎಲ್ಲರೂ ಸಂಬಂಧಿಸಿದ ಇಲಾಖೆಗಳಿಂದ ಪರವಾನಗಿ ಪಡೆಯಬೇಕು. ಅದಕ್ಕಾಗಿಯೇ ಇರುವ ಷರತ್ತು, ನಿಬಂಧನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ರಾಜ್ಯಾದ್ಯಂತ ಈ ಬಗ್ಗೆ ತಪಾಸಣೆ ನಡೆಸಿ, ನಿಯಮ ಉಲ್ಲಂ ಸಿರುವುದು ಕಂಡುಬಂದರೆ ಅಂತಹವರಿಗೆ ನೀಡಿರುವ ಪರವಾನಗಿ ರದ್ದುಪಡಿಸುವಂತೆ ಆದೇಶಿಸಲಾಗಿದೆ ಎಂದರು.

ಪ್ರತಿವರ್ಷ ನವೀಕರಣ

ಇದುವರೆಗೆ ಒಮ್ಮೆ ಪರವಾನಿಗೆ ಪಡೆದರೆ 5 ವರ್ಷದವರಗೆ ಅದು ಊರ್ಜಿತದಲ್ಲಿರುತ್ತಿತ್ತು. ಆದರೆ ಇನ್ನು ಮುಂದೆ ಪ್ರತೀ ವರ್ಷವೂ ಪರವಾನಿಗೆ ಪಡೆಯಬೇಕು ಎಂದು ಸಿಎಂ ಹೇಳಿದ್ದಾರೆ. ಪರವಾನಿಗೆ ಪಡೆದವರು ಹಿಂದಿನ ವರ್ಷ ಷರತ್ತು, ನಿಬಂಧನೆಗಳಿಗೆ ತಕ್ಕಂತೆ ನಡೆದುಕೊಂಡಿದ್ದರೆ ಮಾತ್ರ ನವೀಕರಿಸಬಹುದು. ಇಲ್ಲದಿದ್ದರೆ ನಿರಾಕರಿಸಬೇಕು ಸಿಎಂ ಹೇಳಿದ್ದಾರೆ.

ಅಧಿಕಾರಿಗಳ ಅಮಾನತು

ಅತ್ತಿಬೆಲೆ ದುರಂತದಲ್ಲಿ ತಹಸೀಲ್ದಾರ್‌, ಪೊಲೀಸ್‌ ಇನ್‌ಸ್ಪೆಕ್ಟರ್‌, ಅಗ್ನಿಶಾಮಕ ದಳದ ಮುಖ್ಯಾಧಿಕಾರಿ ಕರ್ತವ್ಯಲೋಪ ಎದ್ದುಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಮಾಡಲು ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅದರ ಜತೆಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ನೋಟಿಸ್‌ ನೀಡಲು ಸೂಚಿಸಲಾಗಿದೆ ಎಂದರು.

ದೀಪಾವಳಿಗೆ ಮುನ್ನೆಚ್ಚರಿಕೆ

ದೀಪಾವಳಿ ಸಂದರ್ಭ ಪ್ರತೀ ಬಾರಿ ಅನೇಕರು ಕಣ್ಣು ಕಳೆದುಕೊಳ್ಳುವುದು, ಸುಟ್ಟ ಗಾಯಗಳಾಗುವುದು, ಸಾಯುವಂತಹ ಪ್ರಸಂಗಗಳನ್ನೂ ಕಾಣುತ್ತಿದ್ದೇವೆ. ಹೀಗಾಗಿ ಸುಪ್ರೀಂ ಕೋರ್ಟ್‌ ಮತ್ತು ಹಸುರು ನ್ಯಾಯಪೀಠದ ಆದೇಶಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಸೂಚಿಸಲಾಗಿದೆ. ಹಸುರು ಪಟಾಕಿಗಳ ಸರಬರಾಜು, ದಾಸ್ತಾನು ಹಾಗೂ ಮಾರಾಟವನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸಿಎಂ ಸೂಚಿಸಿದರು.

ರಾಜಕೀಯ ಸಮಾವೇಶ, ಮದುವೆ, ಶುಭ ಸಮಾರಂಭಗಳಲ್ಲೂ ಇನ್ನು ಮುಂದೆ ಅಪಾಯಕಾರಿ ಪಟಾಕಿಗಳ ಬದಲು ಹಸುರು ಪಟಾಕಿ ಬಳಕೆಗೆ ಮಾತ್ರ ಅವಕಾಶ ನೀಡಲಾಗಿದೆ. ಇನ್ನು ಮುಂದೆ ಪ್ರತೀ ವರ್ಷವೂ ಪರವಾನಿಗೆ ನವೀಕರಿಸಬೇಕು. ಕಾನೂನು ಉಲ್ಲಂ ಸಿದವರ ಪರವಾನಿಗೆ ರದ್ದುಪಡಿಸಲಾಗುತ್ತದೆ.

ಡಿ.ಕೆ. ಶಿವಕುಮಾರ್‌, ಉಪಮುಖ್ಯಮಂತ್ರಿ

ಟಾಪ್ ನ್ಯೂಸ್

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.