ಅವಹೇಳನಕಾರಿ ಫ್ಲೆಕ್ಸ್ ಅಳವಡಿಕೆ: ಕಿಡಿಗೇಡಿಗಳ ಶೀಘ್ರ ಬಂಧನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ


Team Udayavani, Oct 22, 2020, 4:23 PM IST

ಅವಹೇಳನಕಾರಿ ಫ್ಲೆಕ್ಸ್ ಅಳವಡಿಕೆ: ಕಿಡಿಗೇಡಿಗಳ ಶೀಘ್ರ ಬಂಧನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಹನೂರು(ಚಾಮರಾಜನಗರ): ಶಾಂತಿ ಮತ್ತು ಸೌಹಾರ್ದತೆಯಿಂದ ಕೂಡಿರುವ ಹನೂರು ಕ್ಷೇತ್ರದಲ್ಲಿ ಕೆಲ ವಲಸಿಗರು ಮತ್ತು ಅವರ ಬೆಂಬಲಿಗರು ಅಶಾಂತಿಯ ವಾತಾವರಣ ಉಂಟುಮಾಡುತ್ತಿದ್ದು ಇಂತಹ ಕಿಡಿಗೇಡಿಗಳ ವಿರುದ್ಧ ಪೊಲೀಸ್ ಅಧಿಕಾರಿಗಳು ಶೀಘ್ರವಾಗಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜಿ.ಪಂ ಸದಸ್ಯ ಬಸವರಾಜು ಒತ್ತಾಯಿಸಿದರು.

ಶಾಸಕರು, ಸಂಸದರು, ಜಿ.ಪಂ ಮತ್ತು ತಾ.ಪಂ ಸದಸ್ಯರ ವಿರುದ್ಧ ಕ್ಷೇತ್ರದ ವಿವಿಧೆಡೆ ಅವಹೇಳಕಾರಿ ಫ್ಲೆಕ್ಸ್‍ಗಳನ್ನು ಅಳವಡಿಸಿರುವ ಕಿಡಿಗೇಡಿಗಳನ್ನು ಶೀಘ್ರ ಬಂಧಿಸಬೇಕು ಎಂದು ಒತ್ತಾಯಿಸಿ ಹನೂರು ಮತ್ತು ರಾಮಾಪುರ ಬ್ಲಾಕ್ ಕಾಂಗ್ರೆಸ್‍ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಪಟ್ಟಣದ ಪೊಲೀಸ್ ಠಾಣಾ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಜಿ.ಪಂ ಸದಸ್ಯ ಬಸವರಾಜು ಹನೂರು ಕ್ಷೇತ್ರದಲ್ಲಿ ಯಾವುದೇ ರಾಜಕೀಯ ಪ್ರೇರಿತ ಗಲಭೆಗಳು ಇಲ್ಲದೆ ಶಾಂತಿ ಮತ್ತು ಸೌಹಾರ್ದತೆಯಿಂದ ಕೂಡಿರುವ ಕ್ಷೇತ್ರವಾಗಿದೆ. ಆದರೆ ಇಲ್ಲಿಗೆ ವಲಸಿಗರಾಗಿ ಬರುತ್ತಿರುವ ಕೆಲ ಕಿಡಿಗೇಡಿಗಳು ಮತ್ತು ಅವರ ಹಿಂಬಾಲಕರು ಗೊಂದಲದ ವಾತಾವರಣ ಸೃಷ್ಠಿ ಮಾಡುತ್ತಿದ್ದಾರೆ. ಕ್ಷೇತ್ರದ ಕೆಲ ಗ್ರಾಮಗಳಿಗೆ ತೆರಳಿ ದೇವಾಲಯಗಳ ಅಭಿವೃದ್ಧಿಗಾಗಿ ಹಣ ನೀಡುತ್ತೇವೆ ಎಂದು ಸುಳ್ಳು ಭರವಸೆಗಳನ್ನು ನೀಡುತ್ತಿದ್ದಾರೆ. ಈ ಹಿಂದೆ ಕ್ಷೇತ್ರದಲ್ಲಿ ಮಾಜಿ ಸಚಿವ ರಾಜುಗೌಡ, ನಾಗಪ್ಪ ಅವರ ಕಾಲದಿಂದಲೂ ಅನುದಾನ ನೀಡಲಾಗುತ್ತಿದೆ. ಆದರೆ ಇದನ್ನು ಪ್ರಚಾರ ಮಾಡಿಕೊಳ್ಳಲಿಲ್ಲ. ಆದರೆ ಇಂದು ಕ್ಷೇತ್ರಕ್ಕೆ ಹೊರಗಿನಿಂದ ಬರುತ್ತಿರುವ ಕೆಲ ಕಿಡಿಗೇಡಿಗಳು ಈ ರೀತಿಯ ಕೃತ್ಯ ಎಸಗುತ್ತಿರುವುದರಿಂದ ಜನಪ್ರತಿನಿಧಿಗಳಿಗೆ ಅಪಮಾನವಾಗಿದೆ. ಆದುದರಿಂದ ಕೂಡಲೇ ಸೂಕ್ತ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ:ಭೀಮಾ ನದಿ ಪ್ರವಾಹದಲ್ಲಿ ಪಿಎಸ್ಐಯ ನಕಲಿ ರಕ್ಷಣಾ ಕಾರ್ಯಚರಣೆಯ ವಿಡಿಯೋ ವೈರಲ್ !

ಜಿ.ಪಂ ಮಾಜಿ ಉಪಾಧ್ಯಕ್ಷ ಶಿವಮೂರ್ತಿ ವಿರುದ್ಧ ವಾಗ್ದಾಳಿ: ಇದೇ ವೇಳೆ ಜೆಡಿಎಸ್ ಪಕ್ಷದ ಮುಖಂಡ ಜಿ.ಪಂ ಮಾಜಿ ಉಪಾಧ್ಯಕ್ಷ ಶಿವಮೂರ್ತಿ ಶಾಸಕರ ಬಗ್ಗೆ ಟೀಕೆ ಮಾಡಿರುವ ಕುರಿತು ವಾಗ್ದಾಳಿ ನಡೆಸಿರುವ ಬಸವರಾಜು ಇವರನ್ನು ಜಿ.ಪಂ ಸದಸ್ಯರನ್ನಾಗಿ ಮಾಡಿ ಉಪಾಧ್ಯಕ್ಷರಾಗಿ ಅಧಿಕಾರ ನೀಡಿದ ಪಕ್ಷ ಯಾವುದು ಎಂದು ಮೊದಲು ಅರಿತುಕೊಳ್ಳಲಿ. ಇವರ ಬಂಡವಾಳ ಅಧಿಕಾರದಲ್ಲಿದ್ದ 2 ವರ್ಷ ಅವಧಿಯಲ್ಲಿಯೇ ಬಟಾಬಯಲಾಗಿದ್ದು 2008ರ ವಿಧಾನಸಭಾ ಚುನಾವಣೆ ವೇಳೆ ಪ್ರಚಾರಕ್ಕೆ ತೆರಳಿದ್ದಾಗ ಅವರ ಸ್ವಗ್ರಾಮದಲ್ಲಿಯೇ ಅವರನ್ನು ತಿರಸ್ಕರಿಸಿದರು. ಒಮದೊಮ್ಮೆ ಇವರನ್ನು ಪ್ರಚಾರಕ್ಕೆ ಕರೆತಂದಲ್ಲಿ ಯಾವುದಏ ಕಾರಣಕ್ಕೂ ಮತವನ್ನು ನೀಡುವುದಿಲ್ಲ ಎಂದು ಗ್ರಾಮಸ್ಥರು ಇವರನ್ನು ತಿರಸ್ಕರಿಸಿದ್ದರು. ಇಂತಹವರಿಗೆ ಶಾಸಕರ ವಿರುದ್ಧ ಮಾತನಾಡುವ ಯಾವುದೇ ನೈತಿಕತೆಯಿಲ್ಲ ಎಂದು ಹರಿಹಾಯ್ದರು.

ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಚೇತನ್ ದೊರೆರಾಜ್ ಮಾತನಾಡಿ ಕಾಂಗ್ರೆಸ್ ಪಕ್ಷದಲ್ಲಿ ಇದ್ದು ಶಾಸಕ ನರೇಂದ್ರ ಅವರ ಹೆಸರಿನಲ್ಲಿ ಬೆಳೆದು ಹಣದಾಸೆಗೆ ಇದೀಗ ಬೇರೆ ಪಕ್ಷಕ್ಕೆ ತೆರಳಿರುವ ಕೆಲವರು ಇವತ್ತು ದೊಡ್ಡ ನಾಯಕರಂತೆ ಮಾತನಾಡುತ್ತಾರೆ. ಇಂತಹವರು ಯಾವುದೇ ಕಾರಣಕ್ಕೂ ನಾಯಕರಾಗಲು ಸಾಧ್ಯವಿಲ್ಲ, ಇವರೆಲ್ಲಾ ಬಿಸ್ಕೆಟ್ ತಿನ್ನುವ ನಾಯಿಗಳಂತೆ ಎಂದು ಟೀಕಿಸಿದರು.

ಇದನ್ನೂ ಓದಿ :ಸರ್ಜಿಕಲ್ ದಾಳಿ ನಡೆದು 18 ತಿಂಗಳ ಬಳಿಕ ಬಾಲಾಕೋಟ್ ನಲ್ಲಿ ಮತ್ತೆ ತಲೆಎತ್ತಿದ ಉಗ್ರರ ಶಿಬಿರ

ಶೀಘ್ರ ಬಂಧನದ ಭರವಸೆ: ಇದೇ ವೇಳೆ ಪ್ರತಿಭಟನಾನಿರತ ಮುಖಂಡರು ಅವಹೇಳನಕಾರಿ ಫ್ಲೆಕ್ಸ್ ಹಾಕಿರುವ ಕಿಡಿಗೇಡಿಗಳನ್ನು ಶೀಘ್ರವಾಗಿ ಪತ್ತೆಹಚ್ಚಿ ಅವರನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದರು. ಈ ಸಂಬಂಧ ಪ್ರತಿಕ್ರಿಯಿಸಿದ ಡಿವೈಎಸ್ಪಿ ನಾಗರಾಜು ಪ್ರಕರಣವನ್ನು ಈಗಾಗಲೇ ಗಂಭೀರವಾಗಿ ಪರಿಗಣಿಸಿ ಅಗತ್ಯ ಅನುಮತಿಗಳೊಂದಿಗೆ ತನಿಖೆ ಕೈಗೆತ್ತಿಕೊಳ್ಳಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಕಿಡಿಗೇಡಿಗಳನ್ನು ಮುಂದಿನ 2-3 ದಿನಗಳಲ್ಲಿ ಪತ್ತೆಹಚ್ಚುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.

ಪ್ರತಿಭಟನಾ ಮೆರವಣಿಗೆ: ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ ನಡೆಸುವ ಮುನ್ನ ಪಟ್ಟಣದ ಕಾಂಗ್ರೆಸ್ ಭವನದಲ್ಲಿ ಜಮಾಯಿಸಿದ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಭವನದಿಂದ ಪೊಲೀಸ್ ಠಾಣೆವರೆಗೆ ಪ್ರತಿಭಟನಾ ಮೆರವಣಿಗೆಯಲ್ಲಿ ಸಾಗಿದರು. ಈ ವೇಳೆ ಪ್ರಕರಣದಲ್ಲಿ ಭಾಗಿಯಾಗಿರುವ ಕಿಡಿಗೇಡಿಗಳ ವಿರುದ್ಧ ಧಿಕ್ಕಾರಗಳನ್ನು ಮೊಳಗಿಸಲಾಯಿತು.

ಪ್ರತಿಭಟನೆಯಲ್ಲಿ ಜಿ.ಪಂ ಸದಸ್ಯೆ ಶಿವಮ್ಮ ಕೃಷ್ಣ, ಮರಗದಮಣಿ, ತಾ.ಪಂ ಸದಸ್ಯ ರಾಜೇಂದ್ರ, ಅರುಣ್‍ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ್, ಮುಖಂಡರಾದ ಪಾಳ್ಯ ಕೃಷ್ಣ, ಅಜ್ಜೀಪುರ ನಾಗರಾಜು, ಗುಂಡಾಪುರ ಜಯರಾಜು, ಕೌದಳ್ಳಿ ಚಾಂದ್‍ಪಾಷ, ಲೊಕ್ಕನಹಳ್ಳಿ ರವಿ, ಪೆದ್ದನಪಾಳ್ಯ ಸಿದ್ಧರಾಜು, ಸತ್ತೇಗಾಲ ಶಿವಶಂಕರ್, ಸಿಂಗನಲ್ಲೂರು ದೇವರಾಜು, ಯುವ ಕಾಂಗ್ರೆಸ್ ಕಾರ್ಯಕರ್ತರು, ವಿವಿಧ ಘಟಕಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

 

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.