ಮುಂಬಡ್ತಿ ಮೂಲಕ PSI ಹುದ್ದೆ ಭರ್ತಿ

* ಪಿಎಸ್‌ಐ ನಿಂದ ಕಾನ್‌ಸ್ಟೆಬಲ್‌ ಹುದ್ದೆವರೆಗೆ 20 ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಡಾ.ಜಿ.ಪರಮೇಶ್ವರ್‌

Team Udayavani, Aug 2, 2023, 7:57 AM IST

police karnataka

ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ಪ್ರಗತಿಯಲ್ಲಿದ್ದು, ನ್ಯಾಯಾಲಯದಲ್ಲೂ ವಿಚಾರಣೆ ನಡೆಯುತ್ತಿದೆ. ಅವೆಲ್ಲವೂ ಇತ್ಯರ್ಥ ಆಗದೆ ಹೊಸ ನೇಮಕಾತಿ ಸಾಧ್ಯವಿಲ್ಲದಿದ್ದರಿಂದ ಮುಂಬಡ್ತಿ ಮೂಲಕ ಪಿಎಸ್‌ಐ ಸ್ಥಾನಗಳನ್ನು ತುಂಬಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಈ ಕುರಿತು ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಗೃಹ ಸಚಿವ ಡಾ.ಜಿ. ಪರಮೇಶ್ವರ್‌, ಗೃಹ ಇಲಾಖೆಯಲ್ಲಿ ಪಿಎಸ್‌ಐ ಹುದ್ದೆಯಿಂದ ಕಾನ್‌ಸ್ಟೆಬಲ್‌ ಹುದ್ದೆವರೆಗೆ ಸುಮಾರು 20 ಸಾವಿರ ಹುದ್ದೆಗಳು ಖಾಲಿ ಇವೆ. 545 ಪಿಎಸ್‌ಐ ಹುದ್ದೆ ನೇಮಕಾತಿ ಹಗರಣ ಸಂಬಂಧ ಇರುವ ಪ್ರಕರಣಗಳು ಇತ್ಯರ್ಥ ಆಗಬೇಕಿದೆ. ಇದರ ನಡುವೆ ಇನ್ನೂ 400ಕ್ಕೂ ಹೆಚ್ಚು ಪಿಎಸ್‌ಐಗಳ ನೇಮಕಾತಿಗೆ ಇಲಾಖೆಯಿಂದ ಪ್ರಸ್ತಾವನೆ ಬಂದಿದೆ. ಒಟ್ಟಾರೆ 1 ಸಾವಿರ ಪಿಎಸ್‌ಐ ಹುದ್ದೆಗಳನ್ನು ಭರ್ತಿ ಮಾಡಬೇಕಿದೆ ಎಂದರು.

ತನಿಖೆ ಮುಗಿಯದೆ ನೇಮಕಾತಿ ಆರಂಭಿಸಲಾಗುವುದಿಲ್ಲ. ನ್ಯಾಯಾಲಯದಲ್ಲಿರುವ ಪ್ರಕರಣಗಳು ಇತ್ಯರ್ಥ ಆಗದೆಯೂ 545 ಹುದ್ದೆಗಳ ನೇಮಕಾತಿ ಅಸಾಧ್ಯ. ಸೇವಾ ಜ್ಯೇಷ್ಠತೆ ಸಮಸ್ಯೆಯೂ ಉದ್ಭವಿಸುತ್ತದೆ. ಪ್ರಾಮಾಣಿಕ ಅಭ್ಯರ್ಥಿಗಳಿಗೆ ವಂಚನೆ ಆಗುವುದಿಲ್ಲ, ಆತಂಕಪಡುವ ಅಗತ್ಯವಿಲ್ಲ ಎಂದು ಅಭಯ ನೀಡಿದರು.

ಸದ್ಯಕ್ಕೆ ಖಾಲಿ ಇರುವ ಪಿಎಸ್‌ಐ ಹುದ್ದೆಗಳನ್ನು ಮುಂಬಡ್ತಿ ಮೂಲಕ ತುಂಬಲು ಉದ್ದೇಶಿಸಿದ್ದು, 500 ರಿಂದ 600 ಎಎಸ್‌ಐಗಳಿಗೆ ಬಡ್ತಿ ನೀಡಿ ಪಿಎಸ್‌ಐ ಹುದ್ದೆ ಭರ್ತಿ ಮಾಡಲು ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.

ಕಾನ್‌ಸ್ಟೆಬಲ್‌ಗ‌ಳ ನೇಮಕಾತಿ: ಇದರೊಂದಿಗೆ ಸುಮಾರು 16 ಸಾವಿರ ಪೊಲೀಸ್‌ ಕಾನ್‌ಸ್ಟೆàಬಲ್‌ಗ‌ಳ ಹುದ್ದೆ ಸಹ ಖಾಲಿ ಇದ್ದು, ನಿವೃತ್ತಿ ಮತ್ತಿತರ ಕಾರಣಗಳಿಂದ ವಾರ್ಷಿಕ 2500 ದಿಂದ 3000 ಹುದ್ದೆಗಳು ಖಾಲಿ ಆಗುತ್ತವೆ. ಬೆಂಗಳೂರು ನಗರಕ್ಕೆ 2500 ಕಾನ್‌ಸ್ಟೆàಬಲ್‌ಗ‌ಳನ್ನು ನೇಮಕ ಮಾಡಿಕೊಳ್ಳಲು ಆರ್ಥಿಕ ಇಲಾಖೆ ಒಪ್ಪಿಗೆ ಸೂಚಿಸಿದ್ದು, ಬೆಂಗಳೂರು ನಗರದ ಹೊರಗೆ ಕೂಡ 3500 ಕಾನ್‌ಸ್ಟೆಬಲ್‌ಗ‌ಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದರು.

ಶಾಸಕರು ಸಚಿವರ ಕ್ಷಮೆ ಕೇಳಿಲ್ಲ
ಸಚಿವರ ವಿರುದ್ಧ ಸಹಿ ಸಂಗ್ರಹಿಸಿ ಪತ್ರ ಬರೆದಿದ್ದ ಶಾಸಕರು ಪಕ್ಷದ ಸಿಎಲ್‌ಪಿ ಸಭೆಯಲ್ಲಿ ಕ್ಷಮೆ ಕೇಳಿದ್ದಾಗಿ ಹೇಳಿದ್ದ ಗೃಹ ಸಚಿವ ಡಾ.ಜಿ. ಪರಮೇಶ್ವರ್‌, ಯಾರೂ ಕ್ಷಮೆ ಕೇಳಿಲ್ಲ. ಕ್ಷಮೆ ಯಾಚಿಸಲು ಯಾರೂ ಹೇಳಲಿಲ್ಲ ಎಂದಿದ್ದಾರೆ. ಗೃಹಸಚಿವರ ಹೇಳಿಕೆಗೆ ಶಾಸಕ ಬಿ.ಆರ್‌. ಪಾಟೀಲ್‌ ಅವರು ಖಾರವಾಗಿ ಪ್ರತಿಕ್ರಿಯಿಸಿದ್ದರು. ಈ ಸಂಬಂಧ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿರುವ ಸಚಿವ ಪರಮೇಶ್ವರ್‌, ಸಿಎಲ್‌ಪಿ ಸಭೆಗೆ ಒತ್ತಾಯಿಸುವುದು ತಮ್ಮ ಉದ್ದೇಶ ಎಂದು ಅವರು ಹೇಳಿದ್ದರು. ಇದು ಪ್ರತಿಯೊಬ್ಬ ಶಾಸಕರ ಹಕ್ಕು. ಈ ನಿಟ್ಟಿನಲ್ಲಿ ಹೆಚ್ಚಿನ ವ್ಯಾಖ್ಯಾನ ಅಗತ್ಯವಿಲ್ಲ ಎಂದಷ್ಟೇ ಹೇಳಿದರು.

ಮುಂದೆಯೂ ರಹಸ್ಯ ಸಭೆಗಳನ್ನು ನಡೆಸುತ್ತೇವೆ
ನಾನು ಹಾಗೂ ಮುಖ್ಯಮಂತ್ರಿಗಳು ವರ್ಗಾವಣೆ ಸೇರಿದಂತೆ ಆಡಳಿತಾತ್ಮಕ ವಿಚಾರಗಳನ್ನು ಪ್ರತ್ಯೇಕ ಮಾತನಾಡಿರುವುದು ನಿಜ. ಇಂತಹ ವಿಚಾರಗಳು ಗೌಪ್ಯವಾಗಿಯೇ ಇರಬೇಕು. ಹಾದಿ-ಬೀದಿಯಲ್ಲಿ ಚರ್ಚಿಸಲು ಸಾಧ್ಯವೇ ಎಂದು ಪರಮೇಶ್ವರ್‌ ಹೇಳಿದರಲ್ಲದೆ, ಇನ್ನು ಮುಂದೆಯೂ ರಹಸ್ಯವಾಗಿಯೇ ಇಂತಹ ವಿಚಾರಗಳನ್ನು ಮಾತನಾಡುತ್ತೇವೆ ಎಂದರು. ನಾಡಹಬ್ಬ ಮೈಸೂರು ದಸರಾ ಆಚರಣೆ ಹಿನ್ನೆಲೆಯಲ್ಲಿ ಸೋಮವಾರ ನಡೆದ ಸಭೆಗೆ ತಮ್ಮನ್ನು ಆಹ್ವಾನಿಸದೇ ಇರುವುದಕ್ಕೆ ಬೇಸರವನ್ನೂ ವ್ಯಕ್ತಪಡಿಸಿದರು.

ನೈತಿಕ ಪೊಲೀಸ್‌ಗಿರಿ ನಿಯಂತ್ರಣಕ್ಕೆ ಕ್ರಮ ವಹಿಸಿದ್ದೇವೆ. ಯಾವುದೇ ಧರ್ಮದವರಿದ್ದರೂ ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕ್ರಮ ಅಗಿಯೇ ಆಗುತ್ತದೆ. ಸಾಮಾಜಿಕ ಜಾಲತಾಣಗಳಲ್ಲಿ ಫೇಕ್‌ ಸುದ್ದಿಗಳಿಗೆ ಕಡಿವಾಣ ಹಾಕಲೂ ಕ್ರಮ ವಹಿಸಲಾಗುತ್ತಿದೆ. ಗೃಹ ಇಲಾಖೆ ಹಾಗೂ ಮಾಹಿತಿ ತಂತ್ರಜ್ಞಾನ ಇಲಾಖೆ ಜಂಟಿಯಾಗಿ ಪ್ರತ್ಯೇಕ ಕಾನೂನು ರೂಪಿಸಲೂ ಉದ್ದೇಶಿಸಿದೆ.
ಡಾ.ಜಿ. ಪರಮೇಶ್ವರ್‌, ಗೃಹ ಸಚಿವ

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.