ಪಿಯುಸಿ ಉಪನ್ಯಾಸಕರ ನೇಮಕಾತಿ ಪ್ರಕ್ರೀಯೆಗೆ ದಿನಾಂಕ ನಿಗದಿ
Team Udayavani, Jun 24, 2020, 4:29 PM IST
ಬೆಂಗಳೂರು : ಪಿಯುಸಿ ಉಪನ್ಯಾಸಕರ ನೇಮಕಾತಿ ಕೌನ್ಸೆಲಿಂಗ್ ನ್ನು ಜುಲೈ7 ರಂದು ನಡೆಸಲು ಶಿಕ್ಷಣ ಸಚಿವ ಸುರೇಶ್ಕುಮಾರ್ ಸೂಚನೆ ನೀಡಿದ್ದಾರೆ.
ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರಗಳೊಂದಿಗೆ ನಡೆಸಲು ಸೂಚಿಸಲಾಗಿದ್ದು, ಹೆಚ್ಚಿನ ಪ್ರಕ್ರೀಯೆಗಳನ್ನು ಆನ್ ಲೈನ್ ಮೂಲಕ ಕೌನ್ಸೆಲಿಂಗ್ ನಡೆಸಲೂ ಸಹ ಸಚಿವರು ನಿರ್ದೇಶಿಸಿದ್ದಾರೆ.
ಕೌನ್ಸೆಲಿಂಗ್ ಸಂದರ್ಭದಲ್ಲಿ ಕೋವಿಡ್ ಸುರಕ್ಷಾ ಕ್ರಮಗಳನ್ನು ಪಾಲಿಸಿಕೊಂಡು ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಆದೇಶ ನೀಡಿದ್ದಾರೆ.