ಪುತ್ತೂರು: ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದವನ ಬಂಧನ; ಗಾಂಜಾ, ಕಾರು ವಶ
Team Udayavani, Mar 17, 2023, 1:35 PM IST
ಪುತ್ತೂರು: ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದವನ್ನು ಬಂಧಿಸಿ, ಆತನಲ್ಲಿದ್ದ ಗಾಂಜಾ ಹಾಗೂ ಕಾರನ್ನು ವಶಪಡಿಸಿಕೊಂಡ ಘಟನೆ ಮಾ. 16 ರಂದು ಒಳಮೊಗ್ರು ಗ್ರಾಮದ ಪರ್ಪುಂಜ ಎಂಬಲ್ಲಿ ನಡೆದಿದೆ.
ತಾಲೂಕಿನ ಪಾಣಾಜೆ ಗ್ರಾಮದ (ಬಲ್ನಾಡು ಗ್ರಾಮ) ನಿವಾಸಿ ಅಬೂಬಕ್ಕರ್ ಸಿದ್ದಿಕ್ (35) ಬಂಧಿತ ಆರೋಪಿ.
ಅಬೂಬಕ್ಕರ್ ಸಿದ್ದಿಕ್ ಎಂಬಾತ ಕಾರಿನಲ್ಲಿ ಅಕ್ರಮವಾಗಿ ಗ್ರಾಹಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದುದನ್ನು ಪತ್ತೆ ಹಚ್ಚಿದ ಪೊಲೀಸರು ಆತನಲ್ಲಿದ್ದ ಸುಮಾರು 27 ಸಾವಿರ ಮೌಲ್ಯದ 670 ಗ್ರಾಂ ಗಾಂಜಾ ಮತ್ತು ಸುಮಾರು 70 ಸಾವಿರ ಮೌಲ್ಯದ ಕಾರನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ.
ಪೊಲೀಸ್ ಅಧೀಕ್ಷಕ, ಹೆಚ್ಚುವರಿ ಪೊಲೀಸ್ ಅಧೀಕ್ಷಕರ ನಿರ್ದೇಶನದಲ್ಲಿ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಡಾ.ವೀರಯ್ಯ ಹಿರೇಮಠ್, ಪುತ್ತೂರು ಗ್ರಾಮಾಂತರ ಪೊಲೀಸ್ ನಿರೀಕ್ಷಕ ಮಂಜುನಾಥ್ ಎಂ. ರವರ ಮಾರ್ಗದರ್ಶನದಲ್ಲಿ ಪುತ್ತೂರು ಗ್ರಾಮಾಂತರ ಠಾಣಾ ಪಿ.ಎಸ್.ಐ. ಶ್ರೀನಾಥ್ ರೆಡ್ಡಿ ಮತ್ತು ಸುಬ್ರಹ್ಮಣ್ಯ ಹಾಗೂ ಸಿಬ್ಬಂದಿಗಳಾದ ಎಎಸ್ಐ ಮುರುಗೇಶ್, ವರ್ಗೀಸ್, ದೇವರಾಜ್, ಅದ್ರಾಮ್, ಪ್ರವೀಣ್ ರೈ, ಹರೀಶ್, ಶಿವಾನಂದ, ಹರ್ಷಿತ್ ತಂಡ ಭಾಗವಹಿಸಿದ್ದಾರೆ. ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?