ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ಬೀರ‍್ನಹಿತ್ಲು ಶಾಲೆಯಲ್ಲಿ ವಿವಾದ ಸೃಷ್ಠಿಸಿದ ಪ್ರವಾಸ

ಶಾಲೆಗೆ ಭೇಟಿ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ: ಪೊಲೀಸರಿಗೆ ಮೌಖಿಕ ಮಾಹಿತಿ.

Team Udayavani, Feb 4, 2023, 3:50 PM IST

2-puttur-school-trip

ಪುತ್ತೂರು: ಕ್ಷೇತ್ರ ಶಿಕ್ಷಣಾಧಿಕಾರಿಯವರಿಗಾಗಲೀ, ಮುಖ್ಯೋಪಾಧ್ಯಾಯರಿಗಾಗಲೀ, ಎಸ್‌ಡಿಎಂಸಿಯವರಿಗಾಗಲೀ ತಿಳಿಸದೆ ಸಹಶಿಕ್ಷಕಿಯೋರ್ವರು ಶಾಲಾ ಮಕ್ಕಳನ್ನು ಪ್ರವಾಸಕ್ಕೆ ಕರೆದುಕೊಂಡ ಹೋಗಿ ಆತಂಕ ಸೃಷ್ಠಿಸಿರುವ ವಿಲಕ್ಷಣ ಘಟನೆಯೊಂದು ಚಿಕ್ಕಮುಡ್ನೂರು ಗ್ರಾಮದ ಬೀರ‍್ನಹಿತ್ಲು ಶಾಲೆಯಲ್ಲಿ ನಡೆದಿದೆ.

ಬನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಚಿಕ್ಕಮುಡ್ನೂರು ಗ್ರಾಮದ ಬೀರ‍್ನಹಿತ್ಲು ಎಂಬಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಭಾರತಿ ಎಂಬವರು ಶಾಲೆಯ 30ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಬಸ್ಸಿನಲ್ಲಿ ಪ್ರವಾಸಕ್ಕೆ ಕರೆದುಕೊಂಡು ಹೋಗಿರುವ ಘಟನೆ ಫೆ.4ರಂದು ಬೆಳಕಿಗೆ ಬಂದಿದೆ.

ಶಿಕ್ಷಕಿ ಭಾರತಿಯವರು ಮಕ್ಕಳನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗುವ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಯವರಿಗಾಗಲೀ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯವರಿಗಾಗಲೀ, ಮುಖ್ಯ ಶಿಕ್ಷಕರಿಗಾಗಲೀ ಮಾಹಿತಿ ಇರಲಿಲ್ಲ ಎಂದು ಮಾಹಿತಿ ಲಭ್ಯವಾಗಿದೆ.

ಫೆ.4ರಂದು ಸುಮಾರು 38 ಮಕ್ಕಳು ಶಾಲೆಗೆ ಗೈರು ಹಾಜರಾಗಿದ್ದಾರೆ. ಇದರಲ್ಲಿ ಕೆಲವು ವಿದ್ಯಾರ್ಥಿಗಳು ಶಾಲೆಗೆ ರಜೆ ಮಾಡಿ ಕೆಮ್ಮಾಯಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರೆಗೆ ತೆರಳಿದ್ದಾರೆ. ಉಳಿದ ವಿದ್ಯಾರ್ಥಿಗಳು ಶಿಕ್ಷಕಿ ಭಾರತಿಯವರೊಂದಿಗೆ ಪ್ರವಾಸಕ್ಕೆ ತೆರಳಿದ್ದಾರೆ. ಪ್ರವಾಸಕ್ಕೆ ಅಧಿಕೃತವಾಗಿ ಎಷ್ಟು ಮಕ್ಕಳು ತೆರಳಿದ್ದಾರೆ ಎಂಬ ಮಾಹಿತಿ ಇನ್ನೂ ಸಂಬಂಧಿಸಿದವರಿಗೆ ಗೊತ್ತಾಗಿಲ್ಲ.

ಮಧ್ಯಾಹ್ನದವರೆಗೆ ಶಿಕ್ಷಕಿ ಭಾರತಿಯವರನ್ನು ಸಂಪರ್ಕಿಸಲು ಮುಖ್ಯ ಶಿಕ್ಷಕಿ ಪುಷ್ಪಾ ಮತ್ತು ಎಸ್‌ಡಿಎಂಸಿ ಅಧ್ಯಕ್ಷೆ ನಳಿನಿ ರಾಜೇಶ್ ಅವರು ಪ್ರಯತ್ನಿಸಿದರೂ ಭಾರತಿಯವರ ಮೊಬೈಲ್ ಫೋನ್ ಸ್ವಿಚ್ಛ್ ಆಫ್ ಆಗಿದೆ. ಪ್ರವಾಸಕ್ಕೆ ತೆರಳಿರುವ ಬಸ್‌ನ ಮಾಹಿತಿಯೂ ಸಿಕ್ಕಿಲ್ಲ.

ಇದರಿಂದಾಗಿ ಗೊಂದಲದ ಪರಿಸ್ಥಿತಿ ನಿರ್ಮಾಣವಾಗಿದೆ. ಶಾಲೆಯಲ್ಲಿ 6 ಮತ್ತು 7ನೇ ತರಗತಿಯ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಭಾರತಿಯವರು 3ರಿಂದ 7ನೇ ತರಗತಿಯವರೆಗಿನ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ವಾರದ ಹಿಂದೆಯೇ ಇವರು ಮಕ್ಕಳನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಲು ಸಿದ್ಧತೆ ನಡೆಸಿದ್ದರು ಎನ್ನಲಾಗಿದ್ದು ಈ ಬಗ್ಗೆ ಯಾರಿಗೂ ಹೇಳದಂತೆ ವಿದ್ಯಾರ್ಥಿಗಳಿಗೆ ಹೇಳಿದ್ದರು ಎಂದು ಮಾಹಿತಿ ಲಭ್ಯವಾಗಿದೆ.

ಶಾಲೆಯಿಂದ ಅಧಿಕೃತ ಪ್ರವಾಸ ಹೋಗಲಾಗುತ್ತಿದೆ ಎಂದು ತಿಳಿದು ಮಕ್ಕಳನ್ನು ಪೋಷಕರು ಕಳುಹಿಸಿಕೊಟ್ಟಿದ್ದಾರೆ. ಆದರೆ, ಘಟನೆ ಬೆಳಕಿಗೆ ಬಂದಾಗ ಪೋಷಕರು ಆತಂಕಕ್ಕೀಡಾಗಿದ್ದಾರೆ.

ಈ ಕುರಿತು ಮಾಹಿತಿ ಪಡೆದ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್. ಅವರು ಶಾಲೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಅಲ್ಲದೆ, ಪೊಲೀಸ್ ಇಲಾಖೆಗೆ ಮೌಖಿಕ ಮಾಹಿತಿ ನೀಡಿದ್ದಾರೆ.

‘ಪ್ರವಾಸಕ್ಕೆ ಹೋಗುವ ಕುರಿತು ಯಾವುದೇ ನಿರ್ಧಾರ ಆಗಿಲ್ಲ. ಪ್ರವಾಸ ಹೋಗಲು ಯಾರಿಗೂ ಒಪ್ಪಿಗೆ ನೀಡಿಲ್ಲ. ಅನಧಿಕೃತವಾಗಿ ಶಿಕ್ಷಕಿ ಭಾರತಿ ಅವರು ಮಕ್ಕಳನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿದ್ದು ಈ ಬಗ್ಗೆ ದೂರು ನೀಡಲಿದ್ದೇವೆ’ಎಂದು ಎಸ್‌ಡಿಎಂಸಿ ಅಧ್ಯಕ್ಷೆ ನಳಿನಿ ರಾಜೇಶ್ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಸುರಕ್ಷಿತವಾಗಿ ಆಗಮನ

ನಾಪತ್ತೆ ಬೆಳವಣಿಗೆಯ ಮಧ್ಯೆ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ದ ಶಿಕ್ಷಕಿ ಸಂಪರ್ಕ ಲಭ್ಯವಾಗಿ ತತ್ ಕ್ಷಣ ವಿದ್ಯಾರ್ಥಿಗಳನ್ನು ಕರೆತರುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಅದರಂತೆ ವಿದ್ಯಾರ್ಥಿಗಳು ಸುರಕ್ಷಿತವಾಗಿ ಮನೆ‌ ಸೇರಿದ್ದಾರೆ. “20 ಮಂದಿ‌ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯಲಾಗಿತ್ತು. ಈ ಬಗ್ಗೆ ಎಸ್ ಡಿಎಂಸಿ, ಮುಖ್ಯಗುರು, ಶಿಕ್ಷಣ ಇಲಾಖೆಗೆ ಮಾಹಿತಿ ಇರಲಿಲ್ಲ. 20 ವಿದ್ಯಾರ್ಥಿಗಳು ಸುರಕ್ಷಿತವಾಗಿ ಮನೆಗೆ ಮರಳಿದ್ದಾರೆ. ಘಟನೆಯ ಬಗ್ಗೆ ಸೋಮವಾರ ತನಿಖೆ ನಡೆಸಲಾಗುವುದು ಎಂದು‌ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ‘ಉದಯವಾಣಿ’ಗೆ ತಿಳಿದಿದ್ದಾರೆ.

ಟಾಪ್ ನ್ಯೂಸ್

1 Saturday

ರಾಶಿ ಫಲ: ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಗೌರವ ಆದರಾದಿ ಲಭ್ಯ, ದೀರ್ಘ‌ ಪ್ರಯಾಣ ಸಂಭವ

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಖುದ್ದು ಹಾಜರಾಗಲಿ

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಖುದ್ದು ಹಾಜರಾಗಲಿ

vote

ವಿಧಾನ-ಕದನ 2023: ಅನುದಾನದ ವರ ಕೊಟ್ಟವರಿಗೆ ಈಗ ಮತಗಳ ವರ ಬೇಕು

ಮೇ 29ಕ್ಕೆ 2023-24ರ ಶೈಕ್ಷಣಿಕ ವರ್ಷ ಆರಂಭ

ಮೇ 29ಕ್ಕೆ 2023-24ರ ಶೈಕ್ಷಣಿಕ ವರ್ಷ ಆರಂಭ

rishab panth

ಪಂತ್‌ ಇಲ್ಲದ ಡೆಲ್ಲಿಗೆ ಪಂಥಾಹ್ವಾನ

ದೇಶಾದ್ಯಂತ ಟೋಲ್‌ ಸುಂಕ ದುಬಾರಿ

ದೇಶಾದ್ಯಂತ ಟೋಲ್‌ ಸುಂಕ ದುಬಾರಿ

ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್; 26 ಗ್ರೇಸ್‌ ಮಾರ್ಕ್ಸ್!

ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್; 26 ಗ್ರೇಸ್‌ ಮಾರ್ಕ್ಸ್!



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಾಟ್ಸ್‌ಆ್ಯಪ್‌ ಸ್ಟೇಟಸ್‌ ಹಾಕಿ ಆತ್ಮಹತ್ಯೆ ಮಾಡಿಕೊಂಡ ಯುವಕ

ವಾಟ್ಸ್‌ಆ್ಯಪ್‌ ಸ್ಟೇಟಸ್‌ ಹಾಕಿ ಆತ್ಮಹತ್ಯೆ ಮಾಡಿಕೊಂಡ ಯುವಕ

ಪುನಶ್ಚೇತನದಲ್ಲೊಂದು ವಿನೂತನ ಮೈಲುಗಲ್ಲು

ಪುನಶ್ಚೇತನದಲ್ಲೊಂದು ವಿನೂತನ ಮೈಲುಗಲ್ಲು

kaadaane

ಕಡಿರುದ್ಯಾವರ: ಕಾಡಾನೆ ಸಂಚಾರ

ಪುತ್ತೂರಿನ ಪ್ರಥಮ ಸುಸಜ್ಜಿತ ಶಾಪಿಂಗ್‌ ಮಾಲ್‌ ಜಿ.ಎಲ್‌. ಒನ್‌ ಎ. 2ರಂದು ಲೋಕಾರ್ಪಣೆ

ಎ. 2ರಂದು ಪುತ್ತೂರಿನ ಪ್ರಥಮ ಸುಸಜ್ಜಿತ ಶಾಪಿಂಗ್‌ ಮಾಲ್‌ ಜಿ.ಎಲ್‌.ಒನ್‌ ಲೋಕಾರ್ಪಣೆ

accuident

ದ್ವಿಚಕ್ರ ವಾಹನ ಅಪಘಾತ: ಬೈಕ್‌ ಸವಾರ ಸಾವು

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1 Saturday

ರಾಶಿ ಫಲ: ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಗೌರವ ಆದರಾದಿ ಲಭ್ಯ, ದೀರ್ಘ‌ ಪ್ರಯಾಣ ಸಂಭವ

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಖುದ್ದು ಹಾಜರಾಗಲಿ

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಖುದ್ದು ಹಾಜರಾಗಲಿ

vote

ವಿಧಾನ-ಕದನ 2023: ಅನುದಾನದ ವರ ಕೊಟ್ಟವರಿಗೆ ಈಗ ಮತಗಳ ವರ ಬೇಕು

ಮೇ 29ಕ್ಕೆ 2023-24ರ ಶೈಕ್ಷಣಿಕ ವರ್ಷ ಆರಂಭ

ಮೇ 29ಕ್ಕೆ 2023-24ರ ಶೈಕ್ಷಣಿಕ ವರ್ಷ ಆರಂಭ

rishab panth

ಪಂತ್‌ ಇಲ್ಲದ ಡೆಲ್ಲಿಗೆ ಪಂಥಾಹ್ವಾನ