1500 ವೈದ್ಯರ ಹುದ್ದೆ ಶೀಘ್ರ ಭರ್ತಿ
Team Udayavani, Sep 6, 2019, 5:12 AM IST
ಬೆಂಗಳೂರು: ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 1,500 ವೈದ್ಯರ ಹುದ್ದೆ ಭರ್ತಿಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಗುರುವಾರ ಕಚೇರಿಯಲ್ಲಿ ಪೂಜೆ ಸಲ್ಲಿಸಿ ಮಾತ ನಾಡಿದ ಅವರು, ರಾಜ್ಯದ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ 1,500 ವೈದ್ಯರ ಹುದ್ದೆಗಳು ಖಾಲಿ ಇದ್ದು, ಆದಷ್ಟು ಬೇಗ ಭರ್ತಿ ಮಾಡಲಾಗು ವುದು. ಸರ್ಕಾರಿ ಆಸ್ಪತ್ರೆಗಳ ಗುಣಮಟ್ಟ ಕಾಪಾಡಲು ಹೆಚ್ಚು ಗಮನ ಹರಿಸಲಾಗುವುದು ಎಂದು ಹೇಳಿದರು.
ಆರೋಗ್ಯ ಇಲಾಖೆಯಲ್ಲಿ ಸಾಕಷ್ಟು ಸಮಸ್ಯೆಗಳಿದ್ದು, ಎಲ್ಲವನ್ನೂ ಕಾಲಮಿತಿಯಲ್ಲಿ ಪರಿಹಾರ ಮಾಡಿ ಜನರಿಗೆ ಗುಣಮಟ್ಟದ ಸೇವೆ ಒದಗಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ದೆಹಲಿಯ ಏಮ್ಸ್ ಮಾದರಿಯಲ್ಲಿ ಒಂದು ಬಾರಿ ರಕ್ತ ಪಡೆದರೆ 16ಕ್ಕೂ ಹೆಚ್ಚು ಟೆಸ್ಟ್ (ಪರೀಕ್ಷೆ )ಗಳ ವರದಿ ನೀಡುವಂತಹ ಪ್ರಯೋಗಾಲಯ ವ್ಯವಸ್ಥೆಯನ್ನು ಸರ್ಕಾರಿ ಆಸ್ಪತ್ರೆಗಳಲ್ಲೂ ಜಾರಿಗೊಳಿಸ ಲಾಗುವುದು ಎಂದರು. ಹಿಂದಿನ ಸರ್ಕಾರದ ಅವಧಿಯಲ್ಲಿ ಔಷಧ ಖರೀದಿಯಲ್ಲಿ ಭ್ರಷ್ಟಾಚಾರ ಆಗಿರುವ ಆರೋಪದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಇಡಬ್ಲೂಎಸ್ ಅನುಷ್ಠಾನಗೊಳಿಸುವಲ್ಲಿ ರಾಜ್ಯ ಸರಕಾರದಿಂದ ನಿರ್ಲಕ್ಷ್ಯ: ಹನುಮಂತ ಡಂಬಳ
ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಗಾಗಿ ಬಿಗ್ ಫೈಟ್
ಇಸ್ರೇಲ್ ನಲ್ಲಿ ಪ್ರಧಾನಿ ನೆತನ್ಯಾಹು ವಿರುದ್ಧ ಭುಗಿಲೆದ್ದ ಆಕ್ರೋಶ,ಪ್ರತಿಭಟನೆ; ಏನಿದು ವಿವಾದ
’20 ವರ್ಷಗಳ ಹಿಂದೆ ನನಗೆ ಅರಿವಿರಲಿಲ್ಲ…’; ಮರು ಮದುವೆ ಬಗ್ಗೆ ಮಾತನಾಡಿದ ಶಿಖರ್ ಧವನ್
ಕ್ಷೇತ್ರದ ಅಭಿವೃದ್ಧಿಗೆ ಸಂಕಲ್ಪ ಮಾಡೋಣ