ಭಾರತ ರಾಷ್ಟ್ರವೇ ಅಲ್ಲ ಎಂದ ರಾಹುಲ್ ಗಾಂಧಿಗೆ ಕೇಂಬ್ರಿಡ್ಜ್ ವಿಧ್ವಾಂಸರ ತರಾಟೆ!

ಭಾರತ ವಾಸಿಗಳು ಇರುವ ನೆಲ ಭಾರತ ಎಂದು ಸ್ಪಷ್ಟವಾಗಿ ವಿವರಿಸಿದ್ದಾರೆ' ಎಂದು ಸಿದ್ದಾರ್ಥ ತಿರುಗೇಟು ನೀಡಿದರು. 

Team Udayavani, May 26, 2022, 11:15 AM IST

thumb 7

ಲಂಡನ್‌: “ಭಾರತ ಒಂದು ರಾಷ್ಟ್ರವೇ ಅಲ್ಲ, ಅದು ವಿವಿಧ ರಾಜ್ಯ ಸರಕಾರಗಳಿರುವ ಒಕ್ಕೂಟ ವ್ಯವಸ್ಥೆ’ ಎಂದು ಹೇಳುವ ಮೂಲಕ ವಿವಾದಕ್ಕೀಡಾಗಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಯವರನ್ನು ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ಪಬ್ಲಿಕ್‌ ಪೊಲೀಸ್‌ ವಿಭಾಗದಲ್ಲಿ ವಿದ್ವಾಂಸರಾಗಿರುವ ಭಾರತದ ರೈಲ್ವೇ ಇಲಾಖೆ ಅಧಿಕಾರಿ ಸಿದ್ದಾರ್ಥ ವರ್ಮಾ ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ:ಕರಣ್ ಜೋಹರ್ ಪಾರ್ಟಿಯಲ್ಲಿ ತನ್ನ ಹೊಸ ಗರ್ಲ್ ಫ್ರೆಂಡ್ ಪರಿಚಯಿಸಿದ ಹೃತಿಕ್ ರೋಶನ್

ಕೇಂಬ್ರಿಡ್ಜ್ ವಿವಿಯಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ತಜ್ಞರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ರಾಹುಲ್‌, ಭಾರತ ಒಂದು ರಾಷ್ಟ್ರವಲ್ಲ. ಭಾರತೀಯ ಸಂವಿಧಾನದ ಮೊದಲ ಪರಿಚ್ಛೇದದಲ್ಲೇ ಇದು ಉಲ್ಲೇಖೀಸಲಾಗಿದೆ ಎಂದಿದ್ದರು.

ಸಭಿಕರ ಮಧ್ಯೆ ಕುಳಿತಿದ್ದ ಸಿದ್ದಾರ್ಥ ವರ್ಮಾ ಅವರು ಎದ್ದು ನಿಂತು ರಾಹುಲ್‌ ಅವರ ಜತೆಗೆ ಸಂವಾದಕ್ಕಿಳಿದರು. “ನೀವು ಸಂವಿಧಾನದ 1ನೇ ಪರಿಚ್ಛೇದದಲ್ಲಿ ಭಾರತವು ಒಕ್ಕೂಟ ವ್ಯವಸ್ಥೆ ಎಂದು ಬರೆಯಲಾಗಿದೆ ಎಂದು ಹೇಳುತ್ತಿದ್ದೀರಿ. ಹಾಗಾಗಿ ಭಾರತ ಒಂದು ರಾಷ್ಟ್ರವೇ ಅಲ್ಲ ಎನ್ನುತ್ತಿದ್ದೀರಿ. ಆದರೆ ಅದೇ ಪರಿಚ್ಛೇದದ ಮೊದಲ ಪುಟ ತಿರುವಿ ಹಾಕಿದರೆ ಸಾಕು, ಅದರ ಹಿಂದಿನ ಪುಟದಲ್ಲಿ ಭಾರತ ಒಂದು ದೇಶ ಎಂದು ಬರೆಯಲಾಗಿದೆ’ ಎಂದು ಹೇಳಿದರು.ಸಂವಿಧಾನವಷ್ಟೇ ಅಲ್ಲ. ಶತಮಾನಗಳ ಹಿಂದೆ ಚಾಣಕ್ಯ ಕೂಡ ಇದನ್ನೇ ಹೇಳಿದ್ದರು. ತಕ್ಷಶಿಲೆಯಲ್ಲಿ ವಿದ್ಯಾರ್ಥಿಗಳ ಜತೆ ಸಂವಾದ ನಡೆಸುವಾಗ ಭಾರತದಲ್ಲಿ ಇರುವವರೆಲ್ಲರೂ ಭಾರತ ವಾಸಿಗಳು, ಭಾರತ ವಾಸಿಗಳು ಇರುವ ನೆಲ ಭಾರತ ಎಂದು ಸ್ಪಷ್ಟವಾಗಿ ವಿವರಿಸಿದ್ದಾರೆ’ ಎಂದು ಸಿದ್ದಾರ್ಥ ತಿರುಗೇಟು ನೀಡಿದರು.

ಒಪ್ಪಿಗೆ ಪಡೆಯದ ರಾಹುಲ್‌?
ರಾಹುಲ್‌ ಗಾಂಧಿಯವರು ಕೇಂಬ್ರಿಡ್ಜ್ ವಿವಿಯ ಸಮಾರಂಭಕ್ಕಾಗಿ ಲಂಡನ್‌ಗೆ ತೆರಳಲು ವಿದೇಶಾಂಗ ಇಲಾಖೆಯಿಂದ ಒಪ್ಪಿಗೆಯನ್ನೇ ಪಡೆದಿಲ್ಲ ಎಂದು ಮೂಲಗಳು ತಿಳಿಸಿವೆ. ದೇಶದ ಎಲ್ಲ ಸಂಸದರು, ವಿದೇಶಗಳಿಗೆ ಪ್ರಯಾಣಿಸುವ ಮೂರು ವಾರಗಳ ಮುಂಚೆಯೇ ವಿದೇಶಾಂಗ ಇಲಾಖೆಯ ಒಪ್ಪಿಗೆ ಪಡೆಯಬೇಕು. ಅಲ್ಲದೆ, ವಿದೇಶಿ ಸರಕಾರಗಳ, ಸಂಘ-ಸಂಸ್ಥೆಗಳ ಆಹ್ವಾನ ನೇರವಾಗಿ ತಮಗೆ ಬಂದಿದ್ದರೆ ಅದನ್ನು ವಿದೇಶಾಂಗ ಇಲಾಖೆಯ ಗಮನಕ್ಕೆ ತಂದು ಆ ಕುರಿತ ಪ್ರಯಾಣಕ್ಕೆ ಒಪ್ಪಿಗೆ ಪಡೆಯಬೇಕು. ಇದ್ಯಾವುದನ್ನೂ ರಾಹುಲ್‌ ಗಾಂಧಿ ಪಾಲಿಸಿಲ್ಲ ಎಂದು ಮೂಲಗಳು ಹೇಳಿವೆ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.