Congress: ‘ನ್ಯಾಯ್’ ಯಾತ್ರೆ ನಿಲ್ಲಿಸಿ ತುರ್ತಾಗಿ ವಯನಾಡಿಗೆ ದೌಡಾಯಿಸಿದ ರಾಹುಲ್ ಗಾಂಧಿ!
Team Udayavani, Feb 17, 2024, 10:07 PM IST
ವಾರಾಣಸಿ: ಉತ್ತರ ಪ್ರದೇಶದ ವಾರಾಣಸಿಯಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ನ್ಯಾಯ ಯಾತ್ರೆಯನ್ನು ಅರ್ಧಕ್ಕೆ ನಿಲ್ಲಿಸಿ ತುರ್ತಾಗಿ ಅವರ ಲೋಕಸಭಾ ಕ್ಷೇತ್ರ ಕೇರಳದ ವಯನಾಡಿಗೆ ದೌಡಾಯಿಸಿದ್ದಾರೆ.
ಆನೆ ದಾಳಿಯಿಂದಾಗಿ ತೀವ್ರವಾಗಿ ಗಾಯಗೊಂಡಿದ್ದ ವಯನಾಡಿನ ಕುರುವ ದ್ವೀಪದ ಪರಿಸರ ಪ್ರವಾಸೋದ್ಯಮ ಮಾರ್ಗದರ್ಶಿ ಅಜಿ (42) ಶುಕ್ರವಾರ ಕೊನೆಯುಸಿರೆಳೆದಿದ್ದರು. ಇದರ ಬೆನ್ನಲ್ಲೇ, ವನ್ಯ ಮೃಗಗಳ ದಾಳಿಯಿಂದ ಶಾಶ್ವತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ವಯನಾಡಿನಾದ್ಯಂತ ಬೃಹತ್ ಪ್ರತಿಭಟನೆ ನಡೆದಿತ್ತು. ಈ ಹಿನ್ನೆಲೆಯಲ್ಲೇ ರಾಹುಲ್ ವಯನಾಡಿಗೆ ದೌಡಾಯಿಸಿದ್ದಾರೆ ಎಂದು ಹೇಳಲಾಗಿದೆ.
ಶನಿವಾರ ಟ್ವೀಟ್ ಮಾಡಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ವಯನಾಡಿನಲ್ಲಿ ರಾಹುಲ್ ಉಪಸ್ಥಿತಿ ತುರ್ತಾಗಿ ಬೇಕಾಗಿರುವುದರಿಂದ ಅವರು ಸಂಜೆ ವಾರಾಣಸಿಯಿಂದ ತೆರಳುತ್ತಿದ್ದಾರೆ. ಭಾನುವಾರ ಭಾರತ್ ಜೋಡೋ ನ್ಯಾಯ್ ಯಾತ್ರೆ ಪ್ರಯಾಗ್ ರಾಜ್ನಿಂದ ಪುನಾರಂಭವಾಗಲಿದೆ ಎಂದು ಬರೆದಿದ್ದರು. ಇದಕ್ಕೂ ಮುನ್ನ, ಶನಿವಾರ ರಾಹುಲ್ ಉ.ಪ್ರದೇಶದ ಕಾಶಿ ವಿಶ್ವ ನಾಥ ದೇಗು ಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ