Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗ್ಗುರುತು ಮೂಡಿಸುವೆ’


Team Udayavani, Apr 11, 2024, 5:20 PM IST

Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗುರುತು ಮೂಡಿಸುವೆ’

ಉದಯವಾಣಿ ಸಮಾಚಾರ
ಮೂಲತಃ ಬೆಂಗಳೂರಿನವರಾದ ಜಿ.ಕುಮಾರ ನಾಯಕ ನಿವೃತ್ತ ಐಎಎಸ್‌ ಅಧಿಕಾರಿ. ಸರ್ಕಾರದ ವಿವಿಧ ಇಲಾಖೆಗಳಲ್ಲಿ 35 ವರ್ಷಗಳ ಕಾಲ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಶಾಸಕಾಂಗ ವ್ಯವಸ್ಥೆಯ ಆಳ ಅಗಲದ ಪರಿಯಚವೂ ಅವರಿಗಿದೆ. ಈ ಹಿಂದೆ ರಾಯಚೂರು ಡಿಸಿಯಾಗಿ ಕಾರ್ಯನಿರ್ವಹಿಸಿದ್ದ ಅವರು ಈಗ ರಾಯಚೂರು ಲೋಕಸಭೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ.

*ನಿಮ್ಮ ಜೀವನದಲ್ಲೇ ಮೊದಲ ಬಾರಿಗೆ ಚುನಾವಣಾ ಕಣಕ್ಕಿಳಿದಿದ್ದೀರಿ. ಏನನ್ನಿಸುತ್ತಿದೆ ?
ಕಾಂಗ್ರೆಸ್‌ನಂಥ ರಾಷ್ಟ್ರೀಯ ಪಕ್ಷದ ಅಭ್ಯರ್ಥಿ ಯಾಗಲು ಹೆಮ್ಮೆ ಎನಿಸುತ್ತದೆ. ಮೊದಲ ಬಾರಿಗೆ ಕಣಕ್ಕಿಳಿ ದಿರುವುದರಿಂದ ಉತ್ಸಾಹವೂ ಇದೆ, ಕುತೂಹಲವೂ ಇದೆ. ಅದರ ಜತೆಗೆ ಸಾಕಷ್ಟು ನಿರೀಕ್ಷೆಗಳಿವೆ.

*ಚುನಾವಣೆಗೆ ಸ್ಪರ್ಧಿಸಬೇಕೆಂದು ನಿಮಗೆ ಅನ್ನಿಸಿದ್ದು ಯಾವಾಗ, ಯಾಕೆ ಮತ್ತು ಏನು ಪ್ರೇರಣೆ?
ಐಎಎಸ್‌ ಅಧಿಕಾರಿಯಾಗಿ ಸಾಕಷ್ಟು ಸೇವೆ ಸಲ್ಲಿಸಿದ್ದೇನೆ. ಜನಪರ ಕೆಲಸವನ್ನು ಇನ್ನಷ್ಟು ಚೆನ್ನಾಗಿ ಮಾಡಬಹುದಿತ್ತಲ್ಲ ಎಂದು ಸಾಕಷ್ಟು ಬಾರಿ ಅನಿಸಿದ್ದಿದೆ. ಇನ್ನೂ ಉತ್ತಮ ಆಡಳಿತ ನೀಡಬೇಕು ಎಂದಾಗ ನಾವು ಅದರ ಭಾಗವಾಗಿರಬೇಕು. ಅಲ್ಲದೇ, 35 ವರ್ಷಗಳ ಸೇವಾನುಭವವನ್ನು ಸಮಾಜಕ್ಕಾಗಿ ವಿನಿ ಯೋಗಿಸಲು ರಾಜಕೀಯಕ್ಕೆ ಇಳಿದಿದ್ದೇನೆ. ಪ್ರೇರಣೆ ಎಂದಾಗ ಗಾಂಧೀಜಿ, ನೆಹರು, ದೇವರಾಜ ಅರಸು, ಹಾವನೂರು ಅಂಥ ಮಹನೀಯರು ಪ್ರಭಾವ ಬೀರುತ್ತಾರೆ.

*ಮೊದಲ ಪ್ರಯತ್ನದಲ್ಲೇ ನೀವು ಲೋಕಸಭೆಗೆ ಸ್ಪರ್ಧಿಸುತ್ತಿದ್ದೀರಿ, ಕಾರಣವೇನು?
ಸರ್ಕಾರಿ ಇಲಾಖೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದೇನೆ. ನಾನು ಅಂದುಕೊಂಡ ಗುರಿ ತಲುಪಲು ನನಗಿರುವ ಕಾಲಾವಕಾಶ ಕೂಡ ಕಡಿಮೆಯೇ. ಹೀಗಾಗಿ ಚುನಾವಣೆಗೆ ಸ್ಪ ರ್ಧಿಸಿದ್ದೇನೆ. ಎಷ್ಟು ಸಾಧ್ಯವೋ ಅಷ್ಟು ಕಡಿಮೆ ಕಾಲಮಿತಿಯೊಳಗೆ ಹೆಗ್ಗುರುತು ಮೂಡಿಸುವ ಕೆಲಸ ಮಾಡಬೇಕಿದೆ. ನನ್ನ ಸೇವಾವಧಿಯಲ್ಲಿ ರಾಜಕಾರಣಿಗಳ ಜತೆಗೆ ಕೆಲಸ ಮಾಡಿದ್ದರಿಂದ ರಾಜಕೀಯ ಅನುಭವ ಸಾಕಷ್ಟಿದೆ.

*ನಿಮ್ಮ ಕ್ಷೇತ್ರದ ಜನ ನಿಮಗೆ ಯಾವ ಕಾರಣಕ್ಕಾಗಿ ಮತ ಹಾಕಬೇಕು ?

ಪಕ್ಷ ನನ್ನನ್ನು ಗುರುತಿಸಿ ಟಿಕೆಟ್‌ ನೀಡಿದೆ ಎಂದರೆ ನನ್ನ ಧ್ಯೇಯೋದ್ದೇಶಗಳ ಬಗ್ಗೆ ತಿಳಿದುಕೊಂಡಿರುತ್ತದೆ. ಅಲ್ಲದೇ, ನಾನು ಕೇವಲ ಕುಮಾರ ನಾಯಕ ಮಾತ್ರವಾಗಿರದೆ ಕಾಂಗ್ರೆಸ್‌ನ ಪ್ರತಿನಿಧಿಯಾಗಿರುವುದರಿಂದ ಮತದಾರರು ಗೆಲ್ಲಿಸುವ ವಿಶ್ವಾಸವಿದೆ.

*ಈ ಚುನಾವಣೆಯನ್ನು ನೀವು ಹೇಗೆ ಗೆಲ್ಲುತ್ತೀರಿ? 5 ಕಾರಣ ಹೇಳಿ.
ಚುನಾವಣೆ ಯುದ್ಧವಿದ್ದಂತೆ. ನಮ್ಮ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರರಂಥ ನಾಯಕರು ಬಲಿಷ್ಠರಾಗಿದ್ದು, ಪ್ರತಿಪಕ್ಷವನ್ನು ಎದುರಿಸಲು ಸನ್ನದ್ಧವಾಗಿದ್ದೇವೆ. ಕಾಂಗ್ರೆಸ್‌ ನೀಡಿದ್ದ ಐದು ಗ್ಯಾರಂಟಿಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಿರುವುದರಿಂದ ಜನರಿಗೆ ವಿಶ್ವಾಸ ಮೂಡಿದೆ. ಕೇಂದ್ರದಲ್ಲೂ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಇನ್ನೂ ಹೆಚ್ಚಿನ ಪ್ರಗತಿ ಸಾಧ್ಯವಾಗಲಿದೆ. ದೇಶದಲ್ಲಿ ವಿವಿಧ ಕೋಮುಗಳ ನಡುವೆ ಮೂಡುತ್ತಿರುವ ಅಪನಂಬಿಕೆ, ದ್ವೇಷ ತಡೆಯಬೇಕಾದರೆ ಕಾಂಗ್ರೆಸ್‌ ಗೆಲ್ಲಲೇಬೇಕಿದೆ.

*ನಿಮ್ಮ ಕನಸೇನು? ಗೆದ್ದು ದಿಲ್ಲಿಗೆ ಹೋಗಿ ಏನು ಮಾಡಬೇಕು ಅಂತ ಇದ್ದೀರಿ ?
ಜಿಲ್ಲೆಯ ಬಹುದಿನಗಳ ಕನಸಾಗಿರುವ ಏಮ್ಸ್‌, ವಿಮಾನ ನಿಲ್ದಾಣ, ನನೆಗುದಿಗೆ ಬಿದ್ದಿರುವ ರೈಲ್ವೆ ಯೋಜನೆಗಳನ್ನು ಜಾರಿ ಮಾಡುವುದೇ ಮೊದಲಾದ್ಯತೆ. ಸಂಸದೀಯ ಚಟುವಟಿಕೆಗಳಲ್ಲಿ ಕ್ಷೇತ್ರದ ಪಾತ್ರವನ್ನು ಉಲ್ಲೇಖೀಸಿ ಸಿಗಬೇಕಾದ ಸೌಲಭ್ಯ ಪಡೆಯುವುದಕ್ಕೇ ನನ್ನ ಆದ್ಯತೆ.

*ನಿಮ್ಮ ಕ್ಷೇತ್ರದ ಭವಿಷ್ಯಕ್ಕೆ ಇರುವ 5 ಕನಸುಗಳೇನು? ಅವುಗಳನ್ನು ಹೇಗೆ ಈಡೇರಿಸುತ್ತೀರಿ?
ಏಮ್ಸ್‌ ಸ್ಥಾಪನೆ, ಅಪೌಷ್ಟಿಕ ನಿವಾರಣೆ, ನೀರಾವರಿ ಯೋಜನೆಗಳಿಗೆ ಉತ್ತೇಜನ, ರೈಲ್ವೆ ಯೋಜನೆಗಳಿಗೆ ವೇಗ, ನೈಸರ್ಗಿಕ ಸಂಪನ್ಮೂಲ ಬಳಸಿ ಉದ್ಯಮ-ಉದ್ಯೋಗ ಸೃಜನೆಗೆ ಒತ್ತು ನೀಡಲಾಗುವುದು.

* ಚುನಾವಣೆ ವೇಳೆ ಅನೇಕ ಹಿರಿಯ ನಾಯಕರನ್ನು ನೀವು ಸಂಭಾಳಿಸಬೇಕಾಗುತ್ತದೆ. ಹೇಗೆ ನಿಭಾಯಿಸುತ್ತೀರಿ ?
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಭಿನ್ನಾಭಿಪ್ರಾಯ, ಸ್ಪರ್ಧಾತ್ಮಕ ಸಂಘರ್ಷ ಸಹಜ. ಚುನಾವಣೆ ಎಂದು ಬಂದಾಗ ಎಲ್ಲ ನಾಯಕರ ಮೊದಲ ಆದ್ಯತೆ ಪಕ್ಷದ ಅಭ್ಯರ್ಥಿ ಗೆಲ್ಲಿಸುವುದೇ ಆಗಿರುತ್ತದೆ. ಈ ನಿಟ್ಟಿನಲ್ಲಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುವುದು.

■ ಸಿದ್ಧಯ್ಯಸ್ವಾಮಿ ಕುಕನೂರು

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.