ದ.ಕ, ಉಡುಪಿ: ಕೆಲವೆಡೆ ಉತ್ತಮ ಮಳೆ
Team Udayavani, Apr 16, 2020, 10:01 AM IST
ಮಂಗಳೂರು / ಉಡುಪಿ: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಬುಧವಾರ ಸಾಧಾರಣ ಮಳೆಯಾಗಿದೆ. ಬಂಟ್ವಾಳ ತಾಲೂಕಿನ ರಾಯಿ, ಕೊಯಿಲದಲ್ಲಿ ಗುಡುಗು ಸಹಿತ ಮಳೆಸಾಗಿದೆ. ಸಾವೂರು ಮುಂತಾದೆಡೆ ಹನಿ ಮಳೆ ಸುರಿದಿದೆ. ಕಾರ್ಕಳ ತಾಲೂಕಿನ ಹಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಿದೆ.
ಮೂಡುಬಿದಿರೆ ಸಮೀಪದ ಬೆಳುವಾಯಿ, ವಾಲ್ಪಾಡಿ ಪರಿಸರದಲ್ಲಿ ಗುಡುಗು ಸಹಿತ ಮಳೆ ಸುರಿದಿದೆ.
ಹವಾಮಾನ ಇಲಾಖೆಯ ಮಾಹಿತಿಯಂತೆ ಪಣಂಬೂರಿನಲ್ಲಿ 36.6 ಡಿ.ಸೆ. ಗರಿಷ್ಠ ಮತ್ತು 27.5 ಡಿ.ಸೆ. ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರಾವಳಿ ಭಾಗದಲ್ಲಿ ಮುಂದಿನ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಲಬುರಗಿ: 40.9 ಡಿ.ಸೆ.
ಬುಧವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯಾದ್ಯಂತ ಒಣ ಹವೆ ಮುಂದುವರಿದಿತ್ತು. ಕಲಬುರಗಿಯಲ್ಲಿ ಅತ್ಯಧಿಕ 40.9 ಡಿಗ್ರಿ ಸೆ. ಉಷ್ಣಾಂಶ ದಾಖಲಾಯಿತು. ಮಂಗಳೂರು ವಿಮಾನ ನಿಲ್ದಾಣದಲ್ಲಿ 34.7 ಡಿಗ್ರಿ ಸೆ. ಮತ್ತು ಪಣಂಬೂರಿನಲ್ಲಿ 36.6 ಡಿಗ್ರಿ ಸೆ. ಗರಿಷ್ಠ ಉಷ್ಣಾಂಶ ದಾಖಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್