Ramakunja: ರಸ್ತೆ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿ ಸಾವು
Team Udayavani, Mar 6, 2024, 9:54 PM IST
ಕಡಬ: ರಾಮಕುಂಜ ಗ್ರಾಮದ ಗೋಳಿತ್ತಡಿ ಸಮೀಪ ಮಾ. 4ರಂದು ರಾತ್ರಿ ಬೈಕ್ ಹಾಗೂ ಮಿನಿ ಗೂಡ್ಸ್ ವಾಹನದ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಸಂಭವಿಸಿದೆ.
ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಅಂತಿಮ ಬಿ.ಎ. ವಿದ್ಯಾರ್ಥಿ, ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಅಜೀರ ನಿವಾಸಿ ಗುರುವಪ್ಪ ಅವರ ಪುತ್ರ ಶ್ರೀಜಿಸ್ (20) ಮೃತಪಟ್ಟವರು. ಶ್ರೀಜಿಸ್ ಅವರು ರಾಮಕುಂಜದ ಶಾರದಾನಗರದಲ್ಲಿರುವ ತನ್ನ ಚಿಕ್ಕಮ್ಮ ಯಮುನಾ ಕೇಶವ ಗಾಂಧಿಪೇಟೆ ಅವರ ಮನೆಗೆ ಬಂದು ರಾತ್ರಿ ಅಲ್ಲಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ವೇಳೆ ಗೋಳಿತ್ತಡಿ ಸಮೀಪ ಮಿನಿ ಗೂಡ್ಸ್ ವಾಹನ ನಡುವೆ ಢಿಕ್ಕಿ ಸಂಭವಿಸಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಶ್ರೀಜಿಸ್ರನ್ನು ಕೂಡಲೇ ಮಂಗಳೂರಿನ ಎ.ಜೆ.ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು. ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರು ತಂದೆ, ತಾಯಿ ಹಾಗೂ ಇಬ್ಬರು ಸಹೋದರರನ್ನು ಆಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ