ಸಿ.ಡಿ. ಪ್ರಕರಣ : ಪೊಲೀಸ್ವಿರುದ್ಧ ತನಿಖೆಗೆ ತಡೆ
Team Udayavani, Nov 26, 2021, 6:02 AM IST
ಬೆಂಗಳೂರು: ಶಾಸಕ ರಮೇಶ್ ಜಾರಕಿಹೊಳಿಸಿ ಅವರ ಸಿ.ಡಿ. ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿ ಎಫ್ಐಆರ್ ದಾಖಲಿಸಿಲ್ಲ ಎಂಬ ಆರೋಪದಲ್ಲಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸಹಿತ ಮೂವರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಲು ಮ್ಯಾಜಿಸ್ಟ್ರೇಟ್ ಕೋರ್ಟ್ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಾಂತರ ತಡೆ ನೀಡಿದೆ.
ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಡಿಸಿಪಿ ಅನುಚೇತ್ ಹಾಗೂ ಕಬ್ಬನ್ಪಾರ್ಕ್ ಠಾಣೆ ಇನ್ಸ್ಪೆಕ್ಟರ್ ಬಿ. ಮಾರುತಿ ಸಲ್ಲಿಸಿದ ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಿದೆ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಧ್ಯಾಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿತು.
ಅಲ್ಲದೆ, ಅರ್ಜಿ ಸಂಬಂಧ ಸರಕಾರ ಹಾಗೂ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದ ಜನಾಧಿಕಾರ ಸಂಘರ್ಷ ಪರಿಷತ್ನ ಆದರ್ಶ್ ಆರ್. ಅಯ್ಯರ್ಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಮುಂದೂಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
MUST WATCH
ಹೊಸ ಸೇರ್ಪಡೆ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ