ಕನಿಷ್ಠ ವೇತನ ಪಾವತಿಗೆ ಆಗ್ರಹ
Team Udayavani, Jul 5, 2019, 5:36 AM IST
ಬೆಂಗಳೂರು: ಗ್ರಾಮ ಪಂಚಾಯ್ತಿ ಗ್ರಂಥಾಲಯಗಳ ಮೇಲ್ವಿಚಾರಕರಿಗೆ ಕನಿಷ್ಠ 13,200 ರೂ. ವೇತನ ನೀಡುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ವಿಧಾನಮಂಡಲ ಅಧಿವೇಶನದಲ್ಲಿ ತೀವ್ರ ಹೋರಾಟ ನಡೆಸಲಾಗುವುದು ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದರು.
ವಿಧಾನ ಪರಿಷತ್ ಸದಸ್ಯ ರಾದ ಎಸ್.ವಿ.ಸಂಕನೂರ, ಆಯನೂರು ಮಂಜು ನಾಥ್, ಅರುಣ್ ಶಹಾಪುರ, ಅ.ದೇವೇಗೌಡ, ಸುನಿಲ್ ಸುಬ್ರಮಣಿ ಅವರೊಂದಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಆರ್.ಶ್ರೀನಿವಾಸ್ ಅವರನ್ನು ಗುರುವಾರ ಭೇಟಿಯಾಗಿ ಮನವಿ ಸಲ್ಲಿಸಿದ ಬಳಿಕ ಕೋಟ ಶ್ರೀನಿವಾಸ ಪೂಜಾರಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ರಾಜ್ಯದ 6000ಕ್ಕೂ ಹೆಚ್ಚು ಗ್ರಾಮ ಪಂಚಾಯ್ತಿ ಗ್ರಂಥಾಲಯಗಳ ಮೇಲ್ವಿಚಾರಕರು ಸಾಕಷ್ಟು ಹೋರಾಟ ನಡೆಸಿದರೂ ಸ್ಪಂದಿಸದಿದ್ದಾಗ ಅಂತಿಮವಾಗಿ ನ್ಯಾಯಾಲಯದ ಸೂಚನೆಯಂತೆ ಕನಿಷ್ಠ 13,200 ರೂ. ವೇತನ ನೀಡಲು 2016ರ ಆ. 5ರಂದು ಸರ್ಕಾರಿ ಆದೇಶ ಹೊರಡಿಸಲಾಗಿತ್ತು. ಹಾಗಾಗಿ 13,200 ರೂ. ವೇತನ ಸಿಗುವ ವಿಶ್ವಾಸದಲ್ಲಿ ಗ್ರಂಥಾಲಯ ಮೇಲ್ವಿಚಾರಕರಿದ್ದರು. ಆದರೆ ಗ್ರಂಥಾಲಯ ಇಲಾಖೆ ಸೇವಾ ಸಮಯವನ್ನು ಎಂಟು ಗಂಟೆಯಿಂದ ನಾಲ್ಕು ಗಂಟೆಗೆ ಇಳಿಕೆ ಮಾಡಿ ಸುತ್ತೋಲೆ ಹೊರಡಿಸಿರುವುದರಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದರು.
ಪದವಿ ಶಿಕ್ಷಕರಿಗೂ ನ್ಯಾಯ ಒದಗಿಸಿ: ಪದವಿ ಪಡೆದ ಪ್ರಾಥಮಿಕ ಶಾಲಾ ಶಿಕ್ಷಕರನ್ನು 6-8 (ಜಿ.ಪಿ.ಟಿ) ವೃಂದಕ್ಕೆ ವಿಲೀನಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಶ್ರೀನಿವಾಸ ಪೂಜಾರಿ ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ