
ನಿವೃತ್ತ ಅಸಿಸ್ಟಂಟ್ ಕಮಿಷನರ್ ಆಫ್ ಪೊಲೀಸ್ ಸುರ್ಯ ಗುತ್ತು ಸುಭಾಶ್ಚಂದ್ರ ವಿಧಿವಶ
ಬೆಳ್ತಂಗಡಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ
Team Udayavani, May 31, 2023, 7:42 AM IST

ಬೆಳ್ತಂಗಡಿ: ನಿವೃತ್ತ ಅಸಿಸ್ಟಂಟ್ ಕಮಿಷನರ್ ಆಫ್ ಪೊಲೀಸ್(ಎಸಿಪಿ), ಬೆಳ್ತಂಗಡಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಸುರ್ಯ ಗುತ್ತು ಸುಭಾಶ್ಚಂದ್ರ(70) ಅವರು ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ಮುಂಜಾನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ದಿವಂಗತರು ಪತ್ನಿ, ಓರ್ವ ಪುತ್ರ, ಸಹೋದರ ಎಸ್. ಡಿ.ಎಂ. ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಎಸ್. ಸತೀಶ್ಚಂದ್ರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಸುಭಾಶ್ಚಂದ್ರ ಅವರು 1979 ರಲ್ಲಿ ಪೊಲೀಸ್ ಇಲಾಖೆಗೆ ಎಸೈ ಆಗಿ ಸೇರ್ಪಡೆಗೊಂಡರು. ಅವರು ಬಳಿಕ ಬೆಂಗಳೂರು, ಮಡಿಕೇರಿ, ಕಾರವಾರ, ಉಡುಪಿ, ಮಂಗಳೂರು, ಬೆಳ್ತಂಗಡಿ, ಪುತ್ತೂರು ಮತ್ತಿತರ ಕಡೆಗಳಲ್ಲಿ ಸೇವೆ ಸಲ್ಲಿಸಿದ್ದರು. ಪೊಲೀಸ್ ಇಲಾಖೆಯಲ್ಲಿ ಅವರು ಸಲ್ಲಿಸಿದ ವಿಶೇಷ ಸೇವೆಗಾಗಿ ಅವರಿಗೆ 2008 ರಲ್ಲಿ ಮುಖ್ಯ ಮಂತ್ರಿಯವರ ಪದಕ ಲಭಿಸಿತ್ತು. ಅವರು ಒಂದು ವರ್ಷದ ಕಾಲ ಕೊಸೊವೊದಲ್ಲಿ ವಿಶ್ವ ಸಂಸ್ಥೆಯ ಶಾಂತಿ ಪಾಲನಾ ಪಡೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು.
ಮಂಗಳೂರು ಅಶೋಕನಗರದ ಪಾಲ್ಗುಣಿ ನಗರದ ಅವರ ನಿವಾಸದಲ್ಲಿ ಬೆಳಗ್ಗೆ 8:30 ರ ವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಅವರ ಹುಟ್ಟೂರದ ಸುರ್ಯಗುತ್ತಿನಲ್ಲಿ ಅವರ ಅಂತಿಮ ವಿಧಿ ವಿಧಾನವನ್ನು ಮಧ್ಯಾಹ್ನ 12 ಗಂಟೆಗೆ ನೆರವೇರಿಸಲಾಗುವುದು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

ICC World Cup 2023; ಎಲ್ಲಾ ಹತ್ತು ತಂಡಗಳ ಆಟಗಾರರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

Theft: ಶೂ ಬಾಕ್‌ನಲ್ಲಿದ್ದ ಮನೆ ಕೀ ಕದ್ದು ಆಭರಣ ದೋಚಿದ್ದ ಮಹಿಳೆ ಸೆರೆ

Cop In Trouble: ರೀಲ್ಸ್ ಮಾಡಲು ಡ್ಯೂಟಿ ವಾಹನ ನೀಡಿ ತೊಂದರೆಗೆ ಸಿಲುಕಿದ ಪೊಲೀಸ್ ಅಧಿಕಾರಿ

Crime: ವ್ಯಕ್ತಿ ಹತ್ಯೆಗೈದಿದ್ದ ನಾಲ್ವರು ಆರೋಪಿಗಳ ಬಂಧನ

Viral Video: ಬಿಟ್ಟೋಗ್ಬೇಡಾ…ಮಾವುತ ಬಿಟ್ಟು ಹೋಗದಂತೆ ಪುಟ್ಟ ಮಗುವಿನಂತೆ ರಚ್ಚೆ ಹಿಡಿದ ಆನೆ