ರಿಕ್ಷಾ ಚಾಲಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ: ಸಾವಿನಲ್ಲಿ ಸಂಶಯ; ಪೊಲೀಸ್ ದೂರು
Team Udayavani, Dec 28, 2023, 11:46 PM IST
ಕಾಣಿಯೂರು: ಕಾಣಿಯೂರಿನ ಎಲುವೆ ಎಂಬಲ್ಲಿ ರಿಕ್ಷಾ ಚಾಲಕರೋರ್ವರ ಶವ ನೇಣು ಬಿಗಿದ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಕಾಣಿಯೂರಿನ ಬೆದ್ರಾಜೆ ಮನೆ ವಸಂತ (42) ಅವರ ರಿಕ್ಷಾ ಕಾಣಿಯೂರು ರಸ್ತೆಯ ಎಲುವೆ ಎಂಬಲ್ಲಿ ನಿಲ್ಲಿಸಿತ್ತು. ಅಲ್ಲೇ ಸಮೀಪದ ಕಾಡಿನಲ್ಲಿ ವಸಂತ ಮರಕ್ಕೆ ನೈಲಾನ್ ಹಗ್ಗದಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ವಸಂತ ಅವರು ಕಾಣಿಯೂರು ಪೇಟೆಯಲ್ಲಿ ಆಟೋರಿಕ್ಷಾ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು ಡಿ. 27ರಂದು ಬೆಳಗ್ಗೆ 6 ಗಂಟೆಗೆ ಅವರ ಆಟೋರಿಕ್ಷಾದಲ್ಲಿ ಬಾಡಿಗೆಗೆಂದು ಮನೆಯಿಂದ ಹೋಗಿ ವಾಪಸು ಮನೆಗೆ ಬಂದವರು ಮನೆಯಲ್ಲಿನ ತೋಟದಲ್ಲಿ ಆಡಿಕೆ ಹೆಕ್ಕುವ ಕೆಲಸವನ್ನು ಮಾಡಿಕೊಂಡಿದ್ದರು.
ಮಧ್ಯಾಹ್ನ ವಸಂತ ಅವರು ಊಟ ಮಾಡಿ ಆಟೋರಿಕ್ಷಾದಲ್ಲಿ ಮನೆಯಿಂದ ಹೋದವರು ಏಲುವೆ ಎಂಬಲ್ಲಿಗೆ ಬಾಡಿಗೆಗೆ ಹೋಗುತ್ತಿರುವುದಾಗಿ ಅವರ ಅಣ್ಣ ಗಣೇಶ್ ಅವರಿಗೆ ತಿಳಿಸಿದ್ದರು. ಎಲುವೆ ಎಂಬಲ್ಲಿಯ ಕಾಡಿನ ಬಳಿ ಆಟೋ ರಿಕ್ಷಾ ರಸ್ತೆಯ ಬಳಿ ನಿಂತಿರುವುದು ಕಂಡುಬಂದಿದ್ದು, ಸ್ವಲ್ಪ ದೂರದಲ್ಲಿ ಮರವೊಂದಕ್ಕೆ ನೈಲಾನ್ ಹಗ್ಗದಿಂದ ವಸಂತ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತೆ ಕಂಡುಬಂದಿದ್ದರು. ಈ ಕುರಿತು ವಸಂತ ಅವರ ಸಹೋದರ ಗಣೇಶ್ ಅವರು ಮರಣದಲ್ಲಿ ಸಂಶಯವಿದ್ದು, ತನಿಖೆ ನಡೆಸುವಂತೆ ಬೆಳ್ಳಾರೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ