ಶಿವಾಜಿನಗರದಲ್ಲಿ ರಿಜ್ವಾನ್‌ ಗೆದ್ದರೂ ಪರಿಷತ್‌ ಸ್ಥಾನ ಕಳೆದುಕೊಳ್ಳಲಿರುವ ಕಾಂಗ್ರೆಸ್‌

ಮೇಲ್ಮನೆ ಸ್ಥಾನ ಕಳೆದುಕೊಳ್ಳಲಿರುವ ಕಾಂಗ್ರೆಸ್‌!

Team Udayavani, Dec 9, 2019, 6:24 PM IST

ಬೆಂಗಳೂರು: ಉಪ ಚುನಾವಣೆಯಲ್ಲಿ ಶಿವಾಜಿನಗರ ಕ್ಷೇತ್ರದಿಂದ ಕಾಂಗ್ರೆಸ್‌ನ ರಿಜ್ವಾನ್‌ ಅರ್ಷದ್‌ ಗೆಲುವು ಸಾಧಿಸಿದ್ದರೂ ಅವರಿಂದ ತೆರವಾಗುವ ವಿಧಾನ ಪರಿಷತ್‌ ಸ್ಥಾನ ಕಾಂಗ್ರೆಸ್‌ಗೆ ಸಿಗುವುದಿಲ್ಲ.

ಕಾಂಗ್ರೆಸ್‌ ಪಕ್ಷದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರೋಶನ್‌ ಬೇಗ್‌ ವಿರುದ್ಧ ಸೇಡು ತೀರಿಸಿಕೊಳ್ಳಲು ವಿರೋಧದ ನಡುವೆಯೂ ಸಿದ್ದರಾಮಯ್ಯ, ದಿನೇಶ್‌ ಗುಂಡೂರಾವ್‌ ಅವರು ರಿಜ್ವಾನ್‌ ಅರ್ಷದ್‌ಗೆ ಟಿಕೆಟ್‌ ಕೊಡಿಸಿದ್ದರು. ಮಾಜಿ ಸಚಿವರಾದ ಜಮೀರ್‌ ಅಹ್ಮದ್‌, ನಸೀರ್‌ ಅಹ್ಮದ್‌ ಸಹಿತ ಎಲ್ಲರೂ ಒಟ್ಟಾಗಿ ಮುಸ್ಲಿಂ ಸಮುದಾಯದ ಮತ ಕಾಂಗ್ರೆಸ್‌ಗೆ ಬೀಳುವಂತೆ ಮಾಡಿ ಜತೆಗೆ ಹಿಂದೂ ಸಮುದಾಯದ ಮತಗಳನ್ನು ಸೆಳೆಯುವಲ್ಲಿ ಯಶಸ್ವಿಯಾಗಿ ರಿಜ್ವಾನ್‌ ಅರ್ಷದ್‌ ಅವರನ್ನು ಗೆಲ್ಲಿಸಿಕೊಂಡಿದ್ದಾರೆ. ಆದರೆ ಅವರಿಂದ ತೆರವಾಗುವ ವಿಧಾನ ಪರಿಷತ್‌ ಸ್ಥಾನ ಕಾಂಗ್ರೆಸ್‌ಗೆ ಸಿಗದಂತಾಗಿದೆ.

ರಿಜ್ವಾನ್‌ ಅರ್ಷದ್‌ ಆವರ ವಿಧಾನ ಪರಿಷತ್‌ ಸದಸ್ಯತ್ವದ ಅವಧಿ 2022ರವರೆಗೂ ಇದೆ. ಆದರೆ ಇದೀಗ ಅವರು ಶಾಸಕರಾಗಿ ಆಯ್ಕೆ ಆಗಿರುವುದರಿಂದ ಪರಿಷತ್‌ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಆ ಸ್ಥಾನದ ಚುನಾವಣೆಗಾಗಿ ಅಧಿಸೂಚನೆ ಹೊರಡಿಸಿದರೆ ವಿಧಾನಸಭೆಯಲ್ಲಿ ಬಿಜೆಪಿ ಸಂಖ್ಯಾಬಲ ಹೆಚ್ಚಾಗಿರುವ ಕಾರಣ ಬಿಜೆಪಿ ಅಭ್ಯರ್ಥಿಯೇ ಗೆಲ್ಲುವ ಸಾಧ್ಯತೆ ಹೆಚ್ಚಾಗಿದೆ.

ಇದೀಗ ಉಪ ಮುಖ್ಯಮಂತ್ರಿಯಾಗಿರುವ ಲಕ್ಷ್ಮಣ ಸವದಿ ಅಥವಾ ಆರ್‌.ಶಂಕರ್‌ ಅವರನ್ನು ವಿಧಾನ ಪರಿಷತ್‌ಗೆ ಆಯ್ಕೆ ಮಾಡಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಸಮಸ್ಯೆ ಯಾವುದೇ ಇರಲಿ, ಇಷ್ಟಾರ್ಥ ಕಾರ್ಯವಿರಲಿ, ಕೇವಲ 5 ದಿನಗಳಲ್ಲಿ ಪರಿಹಾರಕ್ಕಾಗಿ ಇಂದೇ ಭೇಟಿ ನೀಡಿ
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ